Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 1:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಬೆನ್ಹದದನ ಅರಮನೆಯನ್ನು ನುಂಗಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾನು ಹಜಾಯೇಲನ ಅರಮನೆಯ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಬೆನ್‍ಹದದನ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಬೆನ್ಹದದನ ಅರಮನೆಗಳನ್ನು ನುಂಗಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ನಾನು ಹಜಾಯೇಲನ ನಿವಾಸದಲ್ಲಿ ಬೆಂಕಿಯನ್ನು ಪ್ರಾರಂಭಿಸುವೆನು. ಅದು ಬೆನ್ಹದದನ ಭವ್ಯ ಅರಮನೆಗಳನ್ನೆಲ್ಲಾ ಸುಟ್ಟುಹಾಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಬೆನ್ಹದದನ ಕೋಟೆಗಳನ್ನು ದಹಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 1:4
20 ತಿಳಿವುಗಳ ಹೋಲಿಕೆ  

ಆಗ ನಾನು ದಮಸ್ಕದ ಕೋಟೆಯಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಬೆನ್ ಹದದನ ಅರಮನೆಗಳನ್ನು ದಹಿಸಿಬಿಡುವುದು” ಎಂದು ಸೇನಾಧೀಶ್ವರನಾದ ಯೆಹೋವನು ಅನ್ನುತ್ತಾನೆ.


ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’” ಎಂದು ಹೇಳಿದನು.


ಯೆಹೋವಾಹಾಜನ ಮಗನಾದ ಯೆಹೋವಾಷನು ತನ್ನ ತಂದೆಯ ಕಾಲದಲ್ಲಿ ಹಜಾಯೇಲನು ಯುದ್ಧಮಾಡಿ ಕಿತ್ತುಕೊಂಡಿದ್ದ ಪಟ್ಟಣಗಳನ್ನು ಬೆನ್ಹದದನಿಂದ ತಿರುಗಿ ತೆಗೆದುಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಸೋಲಿಸಿ ಇಸ್ರಾಯೇಲರ ಎಲ್ಲಾ ಪಟ್ಟಣಗಳನ್ನು ಹಿಂದಕ್ಕೆ ತೆಗೆದುಕೊಂಡನು.


ಆದುದರಿಂದ ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಅರಾಮ್ಯರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದನು. ಅವರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಅವರ ಅಧೀನದಲ್ಲಿದ್ದರು.


ಆ ನಂತರ ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ಬಂದು ಸಮಾರ್ಯಕ್ಕೆ ಮುತ್ತಿಗೆ ಹಾಕಿದನು.


ಆದಕಾರಣ ನಾನು ಯೆಹೂದದ ಮೇಲೆ ಬೆಂಕಿಯನ್ನು ಉರಿಸುವೆನು. ಅದು ಯೆರೂಸಲೇಮಿನ ಅರಮನೆಗಳನ್ನು ನುಂಗಿಬಿಡುವುದು.”


ನಾನು ಮೋವಾಬಿನ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಕೆರೀಯೋತಿನ ಅರಮನೆಗಳನ್ನು ನುಂಗಿಬಿಡುವುದು. ಭಟರು ಘೋಷಿಸಿ ಕೊಂಬೂದುವ ಯುದ್ಧದ ಕೋಲಾಹಲದಲ್ಲಿ, ಮೋವಾಬು ಸಾಯುವುದು;


ನಾನು ರಬ್ಬದ ಕೋಟೆಯನ್ನು ಬೆಂಕಿಯಿಂದ ಉರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು; ಆ ಯುದ್ಧದ ದಿನದಲ್ಲಿ ಆರ್ಭಟವಾಗುವುದು, ಆ ಸುಂಟರಗಾಳಿಯಂತ ದಿನದಲ್ಲಿ ಪ್ರಚಂಡ ಕಾದಾಟವೂ ಉಂಟಾಗುವುದು.


ನಾನು ತೇಮಾನಿನ ಮೇಲೆ ಬೆಂಕಿಯನ್ನು ಸುರಿಸುವೆನು, ಮತ್ತು ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವುದು.”


ನಾನು ತೂರಿನ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು, ಮತ್ತು ಅದು ಅದರ ಅರಮನೆಗಳನ್ನು ನುಂಗಿಬಿಡುವುದು.”


ನಾನು ಗಾಜದ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು.


ಇಸ್ರಾಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅವರ ಸೌಧಗಳನ್ನು ನುಂಗಿಬಿಡುವುದು.”


ನಾನು ಮಾಗೋಗ್ ದೇಶದ ಮೇಲೂ, ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು. ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು.


“‘ನಾನು ಐಗುಪ್ತಕ್ಕೆ ಬೆಂಕಿ ಹಚ್ಚಿ ಅದರ ಸಹಾಯಕರನ್ನೆಲ್ಲಾ ನಾಶಮಾಡಿದ ಮೇಲೆ ನಾನೇ ಯೆಹೋವನು’ ಎಂದು ಅವರಿಗೆ ಗೊತ್ತಾಗುವುದು.


ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಿಂದ ಬೆಳ್ಳಿ ಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿದ್ದ ಅರಾಮ್ಯರ ಅರಸನಾದ ಬೆನ್ಹದದನಿಗೆ ಕಳುಹಿಸಿ


ಆಗ ಯೆಹೋವನು ಅವನಿಗೆ, “ನೀನು ಬಂದ ದಾರಿಯಿಂದ ಹಿಂದಿರುಗಿ ದಮಸ್ಕದ ಅರಣ್ಯಕ್ಕೆ ಹೋಗು, ಅಲ್ಲಿಂದ ಪಟ್ಟಣದೊಳಗೆ ಪ್ರವೇಶಿಸಿ ಹಜಾಯೇಲನನ್ನು ಅರಾಮ್ಯರ ಅರಸನನ್ನಾಗಿ ಅಭಿಷೇಕಿಸು.


ಶೆಕೆಮಿನವರಿಗಾದರೋ ಅವರ ದುಷ್ಟತನವನ್ನು ಅವರ ತಲೆಯ ಮೇಲೆಯೇ ಬರಮಾಡಿದನು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನು ಇವರ ವಿಷಯದಲ್ಲಿ ನುಡಿದ ಶಾಪವು ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು