Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 1:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ಇಂತೆನ್ನುತ್ತಾನೆ: “ತೂರ್ ಪಟ್ಟಣವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಒಡಹುಟ್ಟಿದವರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೇ, ಜನರನ್ನು ಗುಂಪುಗುಂಪಾಗಿ ಎದೋಮಿಗೆ ವಶಮಾಡಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರ ಇಂತೆನ್ನುತ್ತಾರೆ: “ಟೈರ್ ಪ್ರಾಂತ್ಯದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಸೋದರಪ್ರೇಮದ ಒಡಂಬಡಿಕೆಯನ್ನು ಅವರು ಮರೆತುಬಿಟ್ಟರು. ಅವರು ಇಡೀ ರಾಷ್ಟ್ರವನ್ನೇ ಸೆರೆಹಿಡಿದು ಎದೋಮ್ ನಾಡಿಗೆ ಗಡೀಪಾರು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನು ಇಂತೆನ್ನುತ್ತಾನೆ - ತೂರ್ ಪಟ್ಟಣವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಒಡಹುಟ್ಟಿದವರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೆ ಜನರನ್ನು ಗುಂಪುಗುಂಪಾಗಿ ಎದೋವಿುಗೆ ವಶಮಾಡಿಬಿಟ್ಟಿತಷ್ಟೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ತೂರಿನ ಜನರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಜನಾಂಗದ ಜನರನ್ನೆಲ್ಲಾ ಗುಲಾಮರನ್ನಾಗಿ ಎದೋಮಿಗೆ ಕಳುಹಿಸಿದರು. ಅವರು ತಮ್ಮ ಸಹೋದರರೊಂದಿಗೆ (ಇಸ್ರೇಲಿನೊಂದಿಗೆ) ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಟೈರ್ ಪಟ್ಟಣದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಸಹೋದರರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೆ ಸೆರೆಯಾಳುಗಳ ಸಂಪೂರ್ಣ ಸಮುದಾಯಗಳನ್ನು ಎದೋಮಿಗೆ ಮಾರಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 1:9
23 ತಿಳಿವುಗಳ ಹೋಲಿಕೆ  

ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ, ದೇವದಾರುಮರಗಳನ್ನೂ, ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ದಾವೀದನಿಗೋಸ್ಕರ ಅರಮನೆಯನ್ನು ಕಟ್ಟಿದರು.


ಹೇಗೆಂದರೆ, “ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.


ಯೆಹೋವನು ಇಂತೆನ್ನುತ್ತಾನೆ: “ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದಟ್ಟಿದನು, ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ. ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು, ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು.


ಯೆಹೋವನು ಇಂತೆನ್ನುತ್ತಾನೆ, “ಗಾಜವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ, ಏಕೆಂದರೆ ಅದು ಜನರನ್ನು ಗುಂಪುಗುಂಪಾಗಿ ಸೆರೆಹಿಡಿದು ಎದೋಮಿಗೆ ವಶಮಾಡಿಬಿಟ್ಟಿತು.


ಏಕೆಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಉಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.


ತೂರಿನ ಎಲ್ಲಾ ಅರಸರು, ಚೀದೋನಿನ ಎಲ್ಲಾ ಅರಸರು, ಸಮುದ್ರದ ಆಚೆಯ ಕರಾವಳಿಯ ಅರಸರು,


ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ಸಹನೀಯವಾಗಿರುವುದು.


ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣಿತಟ್ಟು ಹೊದ್ದುಕೊಂಡು, ಬೂದಿಯಲ್ಲಿ ಕುಳಿತುಕೊಂಡು ಪಶ್ಚಾತ್ತಾಪಪಡುತ್ತಿದ್ದರು.


ಆದರೆ ನ್ಯಾಯವಿಚಾರಣೆಯಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವುದು.


ಇವರೆಲ್ಲಾ ಏಕಮನಸ್ಸಿನಿಂದ ಕೂಡಿ, ನಿನಗೆ ವಿರುದ್ಧವಾಗಿ ಒಳಸಂಚು ಮಾಡುತ್ತಾರಲ್ಲಾ;


ನಿನ್ನ ಅಪಾರವಾದ ಅಪರಾಧಗಳಿಂದಲೂ, ಅನ್ಯಾಯವಾದ ವ್ಯಾಪಾರದಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸು ಮಾಡಿದೆ; ಆದುದರಿಂದ ನಾನು ನಿನ್ನೊಳಗಿಂದ ಬೆಂಕಿಯನ್ನು ಬರಮಾಡಿದೆನು, ಅದು ನಿನ್ನನ್ನು ನುಂಗಿತು, ನೋಡುವವರೆಲ್ಲರ ಕಣ್ಣೆದುರಿಗೆ ನಿನ್ನನ್ನು ಬೂದಿ ಮಾಡಿಬಿಟ್ಟೆನು.


ಅನ್ಯರು ನಿನ್ನ ತಮ್ಮನ ಆಸ್ತಿಯನ್ನು ಕೊಳ್ಳೆಹೊಡೆದ ದಿನದಲ್ಲಿ, ಮ್ಲೇಚ್ಛರು ಅವನ ಪುರದ್ವಾರಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಸೊತ್ತಿಗಾಗಿ ಚೀಟುಹಾಕಿದ ದಿನದಲ್ಲಿ ನೀನು ಅವನಿಗೆ ಸಹಾಯ ಮಾಡದೆ ಸುಮ್ಮನೆ ನಿಂತಿದ್ದೆ. ನೀನೂ ಅವರಂತೆ ನಿನ್ನ ತಮ್ಮನಿಗೆ ಒಬ್ಬ ಶತ್ರುವಿನಂತೆ ಕಂಡುಬಂದಿ.


ಯೆಹೋವನು ನುಡಿದ ದೈವೋಕ್ತಿಯು ಹದ್ರಾಕ್ ದೇಶದ ಮೇಲೆ ಬಿದ್ದಿದೆ. ದಮಸ್ಕವೇ ಅದಕ್ಕೆ ಈಡು; ಯೆಹೋವನು ನರವಂಶದ ಮೇಲೆ ಕಣ್ಣಿಟ್ಟಿದ್ದಾನೆ; ಹೌದು, ಇಸ್ರಾಯೇಲಿನ ಸಕಲ ಕುಲಗಳಲ್ಲಿಯೂ,


ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,


ನಿನ್ನ ಆಸ್ತಿಯು, ನಿನ್ನ ವಸ್ತುಗಳು, ನಿನ್ನ ಸರಕುಗಳು, ನಿನ್ನ ನಾವಿಕರು, ನಿನ್ನ ಅಂಬಿಗರು, ನಿನ್ನ ಒಡಕುಗಳನ್ನು ಭದ್ರಪಡಿಸುವವರು, ನಿನ್ನ ವ್ಯಾಪಾರಿಗಳು, ನಿನ್ನಲ್ಲಿನ ಸಮಸ್ತ ಸೈನಿಕರು, ಅಂತು ನಿನ್ನೊಳಗೆ ಸೇರಿಕೊಂಡಿರುವ ನಿನ್ನ ಸಿಬ್ಬಂದಿಯೆಲ್ಲವೂ ನಿನ್ನ ನಾಶದ ದಿನದಲ್ಲಿ ಸಮುದ್ರದೊಳಗೆ ಮುಳುಗಿ ಹೋಗುವರು.


ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು