Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 2:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇಸ್ರಾಯೇಲ್ಯರೇ, ನೀವು ಅಮ್ಮೋನಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು, ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡಿ, ನಲ್ವತ್ತು ವರ್ಷ ಅರಣ್ಯದಲ್ಲಿ ನಿಮ್ಮನ್ನು ನಡೆಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಈಜಿಪ್ಟಿನಿಂದ ನಿಮ್ಮನ್ನು ಹೊರತಂದವನು ನಾನೇ. ನಲವತ್ತು ವರ್ಷಗಳ ಕಾಲ ಅರಣ್ಯದ ಮಾರ್ಗವಾಗಿ ನಿಮ್ಮನ್ನು ನಡೆಸಿ ಕರೆತಂದು, ಅಮೋರ್ಯದವರ ನಾಡನ್ನು ನಿಮಗೆ ದೊರಕಿಸಿಕೊಟ್ಟವನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 [ಇಸ್ರಾಯೇಲ್ಯರೇ,] ಅಮೋರಿಯರ ದೇಶವನ್ನು ನಿಮಗೆ ದೊರಕಿಸಬೇಕೆಂದು ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿಕೊಂಡು ಬಂದೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರತಂದವನು ನಾನೇ. ನಲವತ್ತು ವರ್ಷಗಳ ತನಕ ನಾನು ಅಡವಿಯಲ್ಲಿ ನಿಮ್ಮನ್ನು ನಡಿಸಿದೆನು. ನಾನು ಅಮೋರಿಯರ ದೇಶವನ್ನು ಸ್ವಾಧೀನಪಡಿಸಲು ಅವರಿಗೆ ಸಹಾಯ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನೇ ನಿಮ್ಮನ್ನು ಈಜಿಪ್ಟ್ ದೇಶದಿಂದ ಕರೆತಂದೆನು. ಅಮೋರಿಯರ ದೇಶವನ್ನು ನಿಮಗೆ ಸೊತ್ತಾಗಿ ಕೊಡಲು, ನಿಮ್ಮನ್ನು ನಾಲ್ವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 2:10
26 ತಿಳಿವುಗಳ ಹೋಲಿಕೆ  

ನೀವು ಕೈಹಾಕಿದ ಎಲ್ಲಾ ಕೆಲಸಗಳನ್ನೂ ನಿಮ್ಮ ದೇವರಾದ ಯೆಹೋವನು ಸಫಲಪಡಿಸಿದ್ದಾನಲ್ಲಾ. ಈ ದೊಡ್ಡ ಅರಣ್ಯದಲ್ಲಿ ನೀವು ಸಂಚರಿಸುತ್ತಿರುವಾಗೆಲ್ಲಾ ಆತನು ನಿಮ್ಮನ್ನು ಪರಾಂಬರಿಸುತ್ತಾ ಬಂದನು. ಈ ನಲ್ವತ್ತು ವರ್ಷ ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದುದರಿಂದ ನಿಮಗೆ ಏನೂ ಕೊರತೆಯಾಗಲಿಲ್ಲ’” ಎಂದು ಹೇಳಿದನು.


ಅದೇ ದಿನದಲ್ಲಿ ಯೆಹೋವನು ಇಸ್ರಾಯೇಲರನ್ನು ಅವರವರ ಸೈನ್ಯಗಳ ಪ್ರಕಾರವಾಗಿ ಐಗುಪ್ತ ದೇಶದಿಂದ ಹೊರಗೆ ತಂದನು.


ಇಸ್ರಾಯೇಲರೇ ಯೆಹೋವನು ನಿಮಗೆ ವಿರುದ್ಧವಾಗಿ, ತಾನು ಐಗುಪ್ತ ದೇಶದೊಳಗಿಂದ ಪಾರು ಮಾಡಿದ ಪೂರ್ಣಕುಲಕ್ಕೆ ವಿರುದ್ಧವಾಗಿ ನುಡಿದಿರುವ ಈ ಮಾತನ್ನು ಕೇಳಿರಿ,


ಆತನು ಸುಮಾರು ನಲವತ್ತು ವರ್ಷಗಳವರೆಗೂ ಅಡವಿಯಲ್ಲಿ ಅವರ ನಡವಳಿಕೆಯನ್ನು ಸಹಿಸಿಕೊಂಡು,


ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ನಕ್ಷತ್ರಗಣಗಳನ್ನು ಪೂಜಿಸುವುದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವುದೇನಂದರೆ, “‘ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಲವತ್ತು ವರ್ಷ ನನಗೆ ಯಜ್ಞಗಳನ್ನೂ, ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;


ನಾನು ನಿನ್ನನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ದಾಸತ್ವದಿಂದ ಬಿಡಿಸಿದೆನು. ಮೋಶೆಯನ್ನೂ, ಆರೋನನನ್ನೂ ಮತ್ತು ಮಿರ್ಯಾಮಳನ್ನೂ ನಿನಗೆ ನಾಯಕರನ್ನಾಗಿ ಕಳುಹಿಸಿದೆನು.


ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರೇ, ನೀವು ನನ್ನ ಗಣನೆಯಲ್ಲಿ ಕೂಷ್ಯರ ಹಾಗಿದ್ದೀರಲ್ಲವೇ? ನಾನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಫಿಲಿಷ್ಟಿಯರನ್ನು ಕಫ್ತೋರಿನಿಂದ ಅರಾಮ್ಯರನ್ನು ಕೀರಿನಿಂದ ಏಕರೀತಿಯಾಗಿ ಬರಮಾಡಲಿಲ್ಲವೇ?


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ಆಗ ನಾನು ಅವರನ್ನು ಐಗುಪ್ತ ದೇಶದೊಳಗಿಂದ ಬಿಡಿಸಿ, ಅರಣ್ಯಕ್ಕೆ ಕರೆದು ತರಲು,


ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; “ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಆಜ್ಞೆಗಳಿಗೆ ವಿಧೇಯರಾಗದವರು” ಎಂದು ಹೇಳಿದೆನು.


ನಲ್ವತ್ತು ವರ್ಷ ಅವರನ್ನು ಅರಣ್ಯದಲ್ಲಿ ಸಾಕುತ್ತಾ ಇದ್ದೆ. ಅವರಿಗೆ ಯಾವ ಕೊರತೆಯೂ ಆಗಲಿಲ್ಲ. ಅವರ ಬಟ್ಟೆಗಳು ಹರಿದುಹೋಗಲಿಲ್ಲ, ಅವರ ಕಾಲುಗಳು ನೋವಿನಿಂದ ಊದಿಕೊಳ್ಳಲಿಲ್ಲ.


ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರೂ ಹಾಗು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ಅರಿಯದ ನಿಮ್ಮ ಮಕ್ಕಳೂ ಅಲ್ಲಿಗೆ ಸೇರುವರು. ಅವರಿಗೇ ಆ ದೇಶವನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು.


“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’


ಇಸ್ರಾಯೇಲರು ಈ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಅವರು ಹೆಷ್ಬೋನಿನಲ್ಲಿಯೂ, ಅದಕ್ಕೆ ಸೇರಿದ ಗ್ರಾಮಗಳಲ್ಲಿಯೂ, ಅಮೋರಿಯರ ಬೇರೆ ಎಲ್ಲಾ ಊರುಗಳಲ್ಲಿಯೂ ವಾಸಿಸಿದರು.


ದಕ್ಷಿಣದಲ್ಲಿದ್ದ ಅವ್ವೀಯರ ದೇಶ ಚೀದೋನ್ಯರಿಗೆ ಸೇರಿದ ಮೆಯಾರಾ ಮೊದಲುಗೊಂಡು ಅಮೋರಿಯರ ಮೇರೆಯಾದ ಅಫೇಕದವರೆಗಿರುವ ಕಾನಾನ್ಯರ ದೇಶವು


ಅದಲ್ಲದೆ ಇವರು ತಾವು ಸಂಚರಿಸಿ ನೋಡಿದ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, “ನಾವು ಸಂಚರಿಸಿ ನೋಡಿದ ದೇಶವು ತನ್ನಲ್ಲಿ ವಾಸಿಸುವವರನ್ನು ನುಂಗಿಬಿಡುತ್ತದೆ. ಅದಲ್ಲದೆ ನಾವು ಅದರಲ್ಲಿ ನೋಡಿದ ಜನರೆಲ್ಲರೂ ಬಹಳ ಎತ್ತರವಾದವರು.


ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡವನಾಗಿ ತನ್ನ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳ ಆ ಸಂತತಿಯವರೆಲ್ಲರೂ ನಾಶವಾಗುವ ತನಕ ನಲ್ವತ್ತು ವರ್ಷ, ಇಸ್ರಾಯೇಲರನ್ನು ಮರುಭೂಮಿಯಲ್ಲೇ ತಿರುಗಾಡುವಂತೆ ಮಾಡಿದನು.


ನೀವು ಬಹು ಕಾಲದವರೆಗೆ ಅರಣ್ಯದಲ್ಲಿದ್ದ ನಂತರ ನಿಮ್ಮನ್ನು ಯೊರ್ದನಿನ ಆಚೆಯಲ್ಲಿ ಅಮೋರಿಯರ ದೇಶಕ್ಕೆ ಕರೆತಂದೆನು. ನಿಮ್ಮೊಡನೆ ಯುದ್ಧಕ್ಕೆ ಬಂದ ಅವರನ್ನು ನಿಮ್ಮ ಕೈಗೆ ಕೊಟ್ಟುಬಿಟ್ಟೆನು. ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಂಡಿರಿ. ಅವರನ್ನು ನಿಮ್ಮೆದುರಿನಲ್ಲೇ ಸಂಹರಿಸಿದೆನು.


‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು