Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 2:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಗೋ, ನೀವು ನಿಂತಿರುವಲ್ಲಿಯೇ ನಿಮ್ಮನ್ನು ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದ್ದರಿಂದ ಧಾನ್ಯ ತುಂಬಿದ ಬಂಡೆ ನಸುಕುವಂತೆ ನಿಮ್ಮನ್ನು ಇದ್ದಲ್ಲಿಯೇ ನಸುಕಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಗೋ, ನೀವು ನಿಂತಿರುವಲ್ಲಿಯೇ ನಿಮ್ಮನ್ನು ಸಿವುಡು ತುಂಬಿದ ಗಾಡಿಯಷ್ಟು ಭಾರವಾಗಿ ಅಮುಕಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ನನಗೆ ಬಹು ಭಾರವಾಗಿದ್ದೀರಿ. ಬಂಡಿಯಲ್ಲಿ ಒತ್ತಿ ತುಂಬಿಸಿದಾಗ ಹೇಗೆ ಬಗ್ಗುತ್ತದೋ ಅದೇ ರೀತಿಯಲ್ಲಿ ನಾನು ಬಹುವಾಗಿ ಬಗ್ಗಿರುತ್ತೇನೆ. ಆದರೆ ನಾನು ನಿಮ್ಮನ್ನು ಅದೇ ರೀತಿಯಲ್ಲಿ ಬಗ್ಗಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಇಗೋ, ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ, ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 2:13
10 ತಿಳಿವುಗಳ ಹೋಲಿಕೆ  

ನಿಮ್ಮ ಅಮಾವಾಸ್ಯೆಗಳನ್ನೂ, ಹುಣ್ಣಿಮೆಹಬ್ಬ, ಉತ್ಸವ ದಿನಗಳನ್ನೂ ದ್ವೇಷಿಸುತ್ತೇನೆ; ಇವು ನನಗೆ ಭಾರ; ಸಹಿಸಲು ಬೇಸರ.


ನೀವು ಯೆಹೋವನನ್ನು ನಿಮ್ಮ ಮಾತುಗಳಿಂದ ಬೇಸರಗೊಳಿಸಿದ್ದೀರಿ. “ಯಾವ ವಿಷಯದಲ್ಲಿ ಆತನನ್ನು ಬೇಸರಗೊಳಿಸಿದ್ದೇವೆ ಅನ್ನುತ್ತೀರಾ? ಪ್ರತಿಯೊಬ್ಬ ದುರಾಚಾರಿಯು ಯೆಹೋವನ ದೃಷ್ಟಿಗೆ ಒಳ್ಳೆಯವನು. ಅವರೇ ಆತನಿಗೆ ಇಷ್ಟ. ನ್ಯಾಯತೀರಿಸುವ ದೇವರು ಎಲ್ಲಿದ್ದಾನೆ?” ಎಂದು ನೀವು ಕೇಳುವುದರಿಂದ ಆತನ ಗಮನದಲ್ಲಿ ಇದ್ದೀರಿ.


“ನೀನು ನಿನ್ನ ಯೌವನ ಕಾಲವನ್ನು ಜ್ಞಾಪಕಮಾಡಿಕೊಳ್ಳದೆ, ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿ ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡೆಸಿದ್ದಲ್ಲದೆ ಈ ಅಸಹ್ಯ ಕಾರ್ಯವನ್ನೂ ಮಾಡಿರುವೆ” ಇದು ಕರ್ತನಾದ ಯೆಹೋವನ ನುಡಿ.


ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.


ನೀನು ನನಗೋಸ್ಕರ ಹಣಕೊಟ್ಟು ತೈಲವನ್ನು ತರಲಿಲ್ಲ, ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಗೆ ಗುರಿಮಾಡಿರುವೆ. ನಿನ್ನ ದೋಷಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.


ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ?


ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ, ಅಲ್ಲಿ ಆತನನ್ನು ನೋಯಿಸಿದರು.


ಆ ಕನಸಿನಲ್ಲಿ ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು. ಆಗ ನನ್ನ ಸಿವುಡು ಎದ್ದು ನಿಂತಿತು. ನಿಮ್ಮ ಸಿವುಡುಗಳು ಸುತ್ತಲೂ ಬಂದು ನನ್ನ ಸಿವುಡಿಗೆ ಅಡ್ಡಬಿದ್ದದ್ದನ್ನು ಕಂಡೆನು” ಎಂದು ಹೇಳಿದನು.


ಅವರು ಆರು ಕಮಾನು ಬಂಡಿಯನ್ನೂ ಮತ್ತು ಹನ್ನೆರಡು ಎತ್ತುಗಳನ್ನೂ ಯೆಹೋವನ ಸನ್ನಿಧಿಗೆ ಕಾಣಿಕೆಯಾಗಿ ತಂದರು. ನಾಯಕರಾದ ಇಬ್ಬರಿಬ್ಬರೂ ಒಂದು ಕಮಾನು ಬಂಡಿಯನ್ನೂ, ಪ್ರತಿ ನಾಯಕನು ಒಂದು ಜೋಡಿ ಎತ್ತನ್ನೂ, ದೇವದರ್ಶನ ಗುಡಾರದ ಮುಂದೆ ತಂದರು. ಹೀಗೆ ಆರು ಜೊತೆ ಬಂಡಿ ಆರು ಜೊತೆ ಎತ್ತುಗಳನ್ನು ತಂದು ಅರ್ಪಿಸಿದರು.


ಅದು ನಿನ್ನ ಕಣದಲ್ಲಿ ಕಾಳನ್ನು ಕೂಡಿಸಿ, ನಿನ್ನ ಬೆಳೆಯನ್ನು ಹೊತ್ತುಕೊಂಡು ಬರುವುದೆಂದು ಭರವಸವಿಡುವೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು