ಆಮೋಸ 2:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಾನು ಮೋವಾಬಿನ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಕೆರೀಯೋತಿನ ಅರಮನೆಗಳನ್ನು ನುಂಗಿಬಿಡುವುದು. ಭಟರು ಘೋಷಿಸಿ ಕೊಂಬೂದುವ ಯುದ್ಧದ ಕೋಲಾಹಲದಲ್ಲಿ, ಮೋವಾಬು ಸಾಯುವುದು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆದಕಾರಣ ಮೋವಾಬಿನ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಕೆರಿಯೋತಿನ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು. ಸೈನಿಕರ ಆರ್ಭಟ, ರಣಕಹಳೆಗಳ ಗರ್ಜನೆ, ಯುದ್ಧದ ಕೋಲಾಹಲ - ಇವುಗಳ ಮಧ್ಯೆ ಮೋವಾಬಿನ ಜನರು ಮಡಿಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಾನು ಮೋವಾಬಿನ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಕೆರೀಯೋತಿನ ಅರಮನೆಗಳನ್ನು ನುಂಗಿಬಿಡುವದು; ಭಟರು ಘೋಷಿಸಿ ಕೊಂಬೂದುವ ಯುದ್ಧ ಕೋಲಾಹಲದಲ್ಲಿ ಮೋವಾಬು ಸಾಯುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆದ್ದರಿಂದ ಮೋವಾಬಿನಲ್ಲಿ ನಾನು ಬೆಂಕಿಯನ್ನು ಹಾಕುವೆನು. ಅದು ಕೆರಿಯೋತಿನ ಉನ್ನತ ಗೋಪುರಗಳನ್ನು ನಾಶಮಾಡುವದು. ಅಲ್ಲಿ ಭಯಂಕರವಾದ ಕೂಗಾಟವೂ ತುತ್ತೂರಿಯ ಧ್ವನಿಯೂ ಇರುತ್ತದೆ. ಆಗ ಮೋವಾಬು ಸಾಯುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಾನು ಮೋವಾಬಿನ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಕೆರೀಯೋತಿನ ಕೋಟೆಗಳನ್ನು ದಹಿಸಿಬಿಡುವುದು. ಮೋವಾಬು ಆರ್ಭಟದ ಮತ್ತು ತುತೂರಿಯ ಧ್ವನಿಯ ಸಂಗಡ ಗಲಿಬಿಲಿಯಲ್ಲಿ ಸಾಯುವುದು. ಅಧ್ಯಾಯವನ್ನು ನೋಡಿ |