Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 2:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಅದರೊಳಗಿಂದ ಅಧಿಪತಿಯನ್ನು ಕಡಿದುಹಾಕಿ, ಸಕಲ ರಾಜ್ಯಾಧಿಕಾರಿಗಳನ್ನೂ ಸಂಹರಿಸುವೆನು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಾನು ಅವರ ಅಧಿಪತಿಯನ್ನು ಕೊಂದು, ರಾಜ್ಯಾಧಿಕಾರಿಗಳನ್ನು ಸಂಹರಿಸುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನು ಅದರೊಳಗಿಂದ ಅಧಿಪತಿಯನ್ನು ಕಡಿದುಹಾಕಿ ಸಕಲರಾಜ್ಯಾಧಿಕಾರಿಗಳನ್ನೂ ಸಂಹರಿಸುವೆನು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಹೀಗೆ ನಾನು ಮೋವಾಬಿನ ಅರಸರಿಗೆ ಅಂತ್ಯವನ್ನು ಮಾಡುವೆನು. ಮೋವಾಬಿನ ಎಲ್ಲಾ ನಾಯಕರುಗಳನ್ನು ಸಾಯಿಸುವೆನು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ಅದರ ಮಧ್ಯದಿಂದ ನ್ಯಾಯಾಧಿಪತಿಯನ್ನು ಕಡಿದುಹಾಕುವೆನು. ಎಲ್ಲಾ ಪ್ರಧಾನರನ್ನು ಅಲ್ಲಿ ಅವನೊಂದಿಗೆ ಕೊಲ್ಲುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 2:3
10 ತಿಳಿವುಗಳ ಹೋಲಿಕೆ  

ನೀನು ನಿನ್ನ ಕೆಲಸಗಳಲ್ಲಿಯೂ, ಧನರಾಶಿಗಳಲ್ಲಿಯೂ ಭರವಸವಿಟ್ಟದ್ದರಿಂದ ನೀನೂ ಶತ್ರುವಿನ ಕೈವಶವಾಗುವಿ; ಕೆಮೋಷ್ ದೇವತೆಯೂ ಅದರ ಭಕ್ತರಾದ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.


ನಾನು ಅವನನ್ನು ನೋಡುವೆನು, ಈಗಲ್ಲ. ಆತನನ್ನು ದೃಷ್ಟಿಸುವೆನು, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬ ವಂಶದವರಲ್ಲಿ ನಕ್ಷತ್ರವು ಉದಯಿಸುವುದು. ಇಸ್ರಾಯೇಲರಲ್ಲಿ ರಾಜದಂಡವು ಏಳುವುದು. ಅದು ಮೋವಾಬ್ಯರ ತಲೆಯನ್ನು ಸೀಳಿಹಾಕುವುದು ಸೇತನ ಎಲ್ಲಾ ಮಕ್ಕಳನ್ನು ಸಂಹರಿಸಿವುದು.


ಮೋವಾಬಿನ ಕೊಂಬು ಕಡಿದು ಬಿದ್ದಿದೆ, ಅದರ ತೋಳು ಮುರಿದುಹೋಗಿದೆ. ಇದು ಯೆಹೋವನ ನುಡಿ” ಎಂಬುದೇ.


ಪ್ರಭುಗಳನ್ನು ನಿರ್ನಾಮ ಮಾಡುತ್ತಾನೆ, ಭೂಪತಿಗಳನ್ನು ಶೂನ್ಯಗೊಳಿಸುತ್ತಾನೆ.


ಆದುದರಿಂದ ಅರಸುಗಳಿರಾ, ವಿವೇಕಿಗಳಾಗಿರಿ; ದೇಶಾಧಿಪತಿಗಳಿರಾ, ಬುದ್ಧಿವಾದಕ್ಕೆ ಕಿವಿಗೊಡಿರಿ.


ಪ್ರಭುಗಳಿಗೆ ಅವಮಾನವನ್ನು ಉಂಟುಮಾಡಿ ಬಲಿಷ್ಠರ ನಡುಕಟ್ಟನ್ನು ಸಡಿಲಿಸುವನು.


ಅವರ ಪ್ರಮುಖರು ಕಡುಬಂಡೆಯಿಂದ ಕೆಳಕ್ಕೆ ದೊಬ್ಬಲ್ಪಟ್ಟ ಮೇಲೆ, ಜನರು ನನ್ನ ಮಾತುಗಳಿಗೆ ಕಿವಿಗೊಡುವರು, ಅವು ಅವರಿಗೆ ಹಿತವಾಗಿರುವವು.


ಅವರು ನ್ಯಾಯವನ್ನು ಕಹಿಮಾಡುವವರು ಮತ್ತು ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರು!”


ನೀತಿವಂತರನ್ನು ಹಿಂಸಿಸುವವರೇ, ಲಂಚತೆಗೆದುಕೊಳ್ಳುವವರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ. ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ನನಗೆ ಗೊತ್ತಿದೆ.


ಕುದುರೆಗಳು ಬಂಡೆಯ ಮೇಲೆ ಓಡಾಡುವುವೋ? ಅದನ್ನು ಎತ್ತುಗಳಿಂದ ಉಳುವರೋ? ಆದರೆ ನೀವು ನ್ಯಾಯವನ್ನು ವಿಷವನ್ನಾಗಿ ಮಾಡಿ, ಧರ್ಮದ ಸುಫಲವನ್ನು ಕಹಿಯಾಗಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು