Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 2:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದಕಾರಣ ನಾನು ಯೆಹೂದದ ಮೇಲೆ ಬೆಂಕಿಯನ್ನು ಉರಿಸುವೆನು. ಅದು ಯೆರೂಸಲೇಮಿನ ಅರಮನೆಗಳನ್ನು ನುಂಗಿಬಿಡುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದಕಾರಣ ನಾನು ಜುದೇಯದ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಜೆರುಸಲೇಮಿನ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದಕಾರಣ ನಾನು ಯೆಹೂದದ ಮೇಲೆ ಬೆಂಕಿಯನ್ನು ಸುರಿಸುವೆನು; ಅದು ಯೆರೂಸಲೇವಿುನ ಅರಮನೆಗಳನ್ನು ನುಂಗಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದ್ದರಿಂದ ನಾನು ಯೆಹೂದದಲ್ಲಿ ಬೆಂಕಿಯನ್ನು ಹಚ್ಚುವೆನು; ಆ ಬೆಂಕಿಯು ಜೆರುಸಲೇಮಿನ ಉನ್ನತ ಬುರುಜುಗಳನ್ನು ನಾಶಮಾಡುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 2:5
11 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅವರ ಸೌಧಗಳನ್ನು ನುಂಗಿಬಿಡುವುದು.”


ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’” ಎಂದು ಹೇಳಿದನು.


ಮೇಲಿಗಲ್ಲ, ಕೇಡಿಗಾಗಿಯೇ ಈ ಪಟ್ಟಣದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಇದು ಬಾಬೆಲಿನ ಅರಸನ ಕೈವಶವಾಗುವುದು, ಅವನು ಅದನ್ನು ಸುಟ್ಟುಬಿಡುವನು; ಇದು ಯೆಹೋವನ ನುಡಿ.”


ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಮತ್ತು ಕಸ್ದೀಯರು ಅರಮನೆಯನ್ನೂ, ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು, ಯೆರೂಸಲೇಮಿನ ಸುತ್ತಣ ಗೋಡೆಗಳನ್ನು ಕೆಡವಿದರು.


ಅವನು ಯೆಹೋವನ ಆಲಯವನ್ನೂ, ಅರಸನ ಅರಮನೆಯನ್ನೂ ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಹಾಗೂ ಪಟ್ಟಣದ ಮುಖ್ಯ ಕಟ್ಟಡಗಳನ್ನೂ ಸುಟ್ಟುಬಿಟ್ಟನು.


ಹೀಗಿರಲು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ: “ಶತ್ರುವು ನಿನ್ನ ದೇಶವನ್ನು ಮುತ್ತಿಕೊಳ್ಳುವನು. ನಿನ್ನ ಶಕ್ತಿಯನ್ನು ಕುಂದಿಸಿಬಿಡುವನು ಮತ್ತು ನಿನ್ನ ಅರಮನೆಗಳು ಸೂರೆಯಾಗುವವು.”


ನಾನು ಚಳಿಗಾಲದ ಅರಮನೆಯನ್ನೂ, ಬೇಸಿಗೆಯ ಅರಮನೆಯನ್ನೂ ಹೊಡೆದುಹಾಕುವೆನು. ದಂತಮಂದಿರಗಳು ಹಾಳಾಗುವವು ಮತ್ತು ದೊಡ್ಡಮನೆಗಳು ಕೊನೆಗಾಣುವವು” ಇದು ಯೆಹೋವನ ನುಡಿ.


ಕರ್ತನಾದ ಯೆಹೋವನು ಇನ್ನೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಕರ್ತನಾದ ಯೆಹೋವನು ತನ್ನ ಜನರನ್ನು ದಂಡಿಸುವುದಕ್ಕಾಗಿ ಅಗ್ನಿಯನ್ನು ಕರೆದನು. ಅದು ಮಹಾ ಸಾಗರವನ್ನು ನುಂಗಿ ದೇಶವನ್ನೂ ತಿಂದುಬಿಟ್ಟಿತು.


ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಬೆನ್ಹದದನ ಅರಮನೆಯನ್ನು ನುಂಗಿಬಿಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು