ಆಮೋಸ 3:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನ್ಯಾಯನೀತಿಗಳನ್ನು ಮಾಡುವುದಕ್ಕೆ ಅವರಿಗೆ ತಿಳಿದಿಲ್ಲ” ಇದು ಯೆಹೋವನ ನುಡಿ. ತಮ್ಮ ಉಪ್ಪರಿಗೆಗಳಲ್ಲಿ ಬಾಧೆಯನ್ನೂ, ನಾಶನವನ್ನೂ ಕೂಡಿಸಿಟ್ಟುಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ಹಿಂಸಾಚಾರದಿಂದ ಹಾಗು ಸುಲಿಗೆಯಿಂದ ಗಳಿಸಿದ್ದನ್ನು ಜನರು ತಮ್ಮ ಮಳಿಗೆಗಳಲ್ಲಿ ತುಂಬಿಸಿಕೊಂಡಿದ್ದಾರೆ. ಅಂಥ ಜನರಿಗೆ ನ್ಯಾಯನೀತಿ ತಿಳಿಯದು,” ಎಂದು ಸರ್ವೇಶ್ವರ ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ತಮ್ಮ ಉಪ್ಪರಿಗೆಗಳಲ್ಲಿ ಬಾಧೆಕೊಳ್ಳೆಗಳಿಂದ ಸಂಪಾದಿಸಿದ್ದನ್ನು ಕೂಡಿಸಿಟ್ಟುಕೊಂಡಿರುವವರು ನ್ಯಾಯವಾಗಿ ನಡೆಯಲು ಅರಿಯರು; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ತಮ್ಮ ಕೋಟೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರಿಗೆ, ನ್ಯಾಯ ನೀತಿಯನ್ನು ಮಾಡುವುದಕ್ಕೆ ತಿಳಿಯುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |