ಆಮೋಸ 3:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೆಹೋವನು ಇಂತೆನ್ನುತ್ತಾನೆ: “ಸಿಂಹದ ಬಾಯೊಳಗಿಂದ ಕುರುಬನು ತನ್ನ ಕುರಿಗಳ ಎರಡು ಕಾಲನ್ನೂ, ಅಥವಾ ಕಿವಿಯ ಒಂದು ತುಂಡನ್ನೂ, ಹೇಗೆ ರಕ್ಷಿಸುವನೋ, ಹಾಗೆಯೇ ಸಮಾರ್ಯದೊಳಗೆ ಹಾಸಿಗೆಯ ಮೂಲೆಯಲ್ಲಿಯೂ, ಮಂಚದ ಪಟ್ಟೇದಿಂಬುಗಳಲ್ಲಿಯೂ, ಒರಗಿಕೊಳ್ಳುವ ಇಸ್ರಾಯೇಲರ ಸ್ವಲ್ಪ ಭಾಗ ಮಾತ್ರ ರಕ್ಷಿಸಲ್ಪಡುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಸಿಂಹದ ಬಾಯಿಗೆ ಸಿಕ್ಕಿದ ಕುರಿಯ ಅಂಗಗಳಲ್ಲಿ ಕಿವಿಕಾಲು ಮಾತ್ರ ಕುರುಬನಿಗೆ ದಕ್ಕೀತು. ಅಂತೆಯೇ ಸಮಾರ್ಯದ ಸುಖಾಸನಗಳಲ್ಲೂ ಸುಪ್ಪತ್ತಿಗೆ ಮೇಲೂ ಹಾಯಾಗಿ ಒರಗಿಕೊಂಡಿರುವ ಇಸ್ರಯೇಲರಲ್ಲಿ ಕೆಲವೇ ಕೆಲವರು ಮಾತ್ರ ಉಳಿಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೆಹೋವನು ಇಂತೆನ್ನುತ್ತಾನೆ - ಸಿಂಹದ ಬಾಯೊಳಗಿಂದ ಎರಡು ಕಾಲುಗಳಾಗಲಿ ಕಿವಿಯ ತುಂಡಾಗಲಿ ಹೇಗೆ ಕುರುಬನಿಂದ ರಕ್ಷಿಸಲ್ಪಡುವದೋ ಹಾಗೆಯೇ ಸಮಾರ್ಯದೊಳಗೆ ಗದ್ದುಗೆಯ ಮೂಲೆಯಲ್ಲಿಯೂ ಮಂಚದ ಪಟ್ಟೇದಿಂಬುಗಳಲ್ಲಿಯೂ ಒರಗಿಕೊಳ್ಳುವ ಇಸ್ರಾಯೇಲ್ಯರ [ಸ್ವಲ್ಪಭಾಗ ಮಾತ್ರ] ರಕ್ಷಿಸಲ್ಪಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೋವನು ಹೇಳುವುದೇನೆಂದರೆ, “ಒಂದುವೇಳೆ ಸಿಂಹವು ಒಂದು ಕುರಿಮರಿಯ ಮೇಲೆ ಎರಗಿದರೆ ಕುರುಬನು ಅದನ್ನು ರಕ್ಷಿಸಲು ಪ್ರಯತ್ನಿಸಾನು. ಆದರೆ ಕುರುಬನು ಆ ಕುರಿಮರಿಯ ಒಂದು ಭಾಗವನ್ನು ಮಾತ್ರ ಕಾಪಾಡಿಯಾನು. ಸಿಂಹದ ಬಾಯಿಂದ ಕುರಿಯ ಎರಡು ಕಾಲುಗಳನ್ನೋ ಕಿವಿಯ ಒಂದು ಭಾಗವನ್ನೋ ಎಳೆದು ರಕ್ಷಿಸಿಯಾನು. ಅದೇ ರೀತಿಯಲ್ಲಿ ಬಹುತೇಕ ಇಸ್ರೇಲರು ರಕ್ಷಿಸಲ್ಪಡುವದಿಲ್ಲ. ಸಮಾರ್ಯದಲ್ಲಿರುವ ಜನರು ತಮ್ಮ ಹಾಸಿಗೆಯ ಒಂದು ಮೂಲೆಯನ್ನಾಗಲಿ ಅಥವಾ ಮಂಚದ ಮೇಲಿನ ಬಟ್ಟೆಯ ಒಂದು ತುಂಡನ್ನಾಗಲಿ ಉಳಿಸಿಕೊಳ್ಳುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಹೇಗೆ ಕುರುಬನು ಸಿಂಹದ ಬಾಯಿಯಿಂದ ಎರಡು ಕಾಲಿನ ಎಲಬುಗಳನ್ನು ಅಥವಾ ಕಿವಿಯ ಒಂದು ತುಂಡನ್ನು ರಕ್ಷಿಸಲು ಪ್ರಯತ್ನಿಸುತ್ತಾನೋ ಹಾಗೆಯೇ ಸಮಾರ್ಯದಲ್ಲಿ ವಾಸಿಸುವ ಇಸ್ರಾಯೇಲರು ಹಾಸಿಗೆಯ ತಲೆ ಮತ್ತು ಮಂಚದ ಬಟ್ಟೆಯ ತುಂಡುಗಳೊಂದಿಗೆ ಸಂರಕ್ಷಣೆ ಹೊಂದುತ್ತಾರೆ.” ಅಧ್ಯಾಯವನ್ನು ನೋಡಿ |
ಬೆನ್ಹದದನು ಅವನಿಗೆ, “ನನ್ನ ತಂದೆಯು ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ, ಅವನು ಸಮಾರ್ಯದಲ್ಲಿ ಮಾಡಿದಂತೆ ನೀನು ನಿನಗೋಸ್ಕರ ದಮಸ್ಕದಲ್ಲಿ ಕೆಲವು ಕೇರಿಗಳನ್ನು ನಿನ್ನದಾಗಿಸಿಕೊಳ್ಳಬಹುದು” ಎಂದು ಹೇಳಿದನು. ಆಗ ಅಹಾಬನು, “ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ” ಎಂದು ಹೇಳಿ ಅವನಿಂದ ಪ್ರಮಾಣ ಮಾಡಿಸಿ ಕಳುಹಿಸಿಬಿಟ್ಟನು.
ಆ ತೋಟದ ಆವರಣವು ಬಿಳೀ ನೂಲಿನ ಬಟ್ಟೆಗಳೂ, ನೀಲಿಬಟ್ಟೆಗಳೂ, ಧೂಮ್ರವರ್ಣವುಳ್ಳ ನಾರಿನ ದಾರಗಳು ಮತ್ತು ಅಮೃತಶಿಲೆಯ ಕಲ್ಲುಕಂಬಗಳಿಗೆ ಕಟ್ಟಲಾದ ಬೆಳ್ಳಿಯ ಉಂಗುರ ಇವುಗಳಿಂದ ಅಲಂಕೃತವಾಗಿತ್ತು. ಜರತಾರಿ ಕಸೂತಿ ಹಾಕಿರುವ ಬೆಳ್ಳಿ ಬಂಗಾರದ ಸುಖಾಸನಗಳು, ಅವುಗಳನ್ನು ಕೆಂಪು, ಬಿಳಿ, ಹಳದಿ ಮತ್ತು ಕಪ್ಪು ಬಣ್ಣಗಳುಳ್ಳ ಅಮೃತಶಿಲೆಗಳ ಕಲ್ಲುಗಳಿಂದ ರಚಿತವಾದ ನೆಲಗಟ್ಟಿನ ಮೇಲೆ ಇಡಲಾಗಿತ್ತು.