Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 3:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಊರಲ್ಲಿ ಕೊಂಬೂದಿದರೆ ಜನರು ಅಂಜರೋ? ಯೆಹೋವನಿಂದಲ್ಲದೆ ಊರಿಗೆ ವಿಪತ್ತು ಸಂಭವಿಸುವದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ತುತ್ತೂರಿಯ ಎಚ್ಚರಿಕೆಯ ಶಬ್ಧವನ್ನು ಕೇಳಿದ ಜನರು ಖಂಡಿತವಾಗಿ ಹೆದರಿ ನಡುಗುವರು. ಒಂದು ಗಂಡಾಂತರವು ಪಟ್ಟಣಕ್ಕೆ ಬಂದಿರುವುದಾದರೆ ಅದನ್ನು ಬರಮಾಡಿದಾತನು ಯೆಹೋವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಪಟ್ಟಣದಲ್ಲಿ ಕಹಳೆಯನ್ನು ಊದಿದರೆ, ಜನರು ಹೆದರುವುದಿಲ್ಲವೇ? ಯೆಹೋವ ದೇವರಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 3:6
17 ತಿಳಿವುಗಳ ಹೋಲಿಕೆ  

ನಾನು ಬೆಳಕನ್ನು, ಕತ್ತಲನ್ನು ನಿರ್ಮಿಸಿದವನು, ಮೇಲನ್ನೂ, ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.


ಕೋಟೆಗಳನ್ನೂ, ದೊಡ್ಡ ಕೊತ್ತಲುಗಳನ್ನೂ ಹಿಡಿಯಲು, ಆರ್ಭಟಿಸಿ ಕೊಂಬೂದುವ ದಿನ.


ಆದ್ದರಿಂದ, ಕರ್ತನಲ್ಲಿ ಭಯವುಳ್ಳವರಾಗಿರಬೇಕೆಂದು ನಾವು, ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಎಂಥವರೆಂದು ದೇವರಿಗೆ ಪ್ರಕಟವಾಗಿದ್ದೇವೆ. ಅದು ನಿಮ್ಮ ಮನಸ್ಸಾಕ್ಷಿಗೆ ಕೂಡಾ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.


ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದಿರಿ. ಆದರೆ ದೇವರು ನನ್ನನ್ನು ಮೇಲಾಗಬೇಕೆಂದು ಸಂಕಲ್ಪಿಸಿದನು; ಆದುದರಿಂದ ಇಂದು ನೀವು ಕಾಣುವಂತೆ, ಅನೇಕ ಜನರ ಪ್ರಾಣವು ಸಂರಕ್ಷಿಸಲ್ಪಟ್ಟಿತ್ತು” ಎಂದನು.


ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.


“ಬೆನ್ಯಾಮೀನ್ ಕುಲದವರೇ, ಯೆರೂಸಲೇಮಿನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ, ಏಕೆಂದರೆ ಉತ್ತರ ದಿಕ್ಕಿನಿಂದ ಅತಿನಾಶಕರವಾದ ವಿಪತ್ತು ತಲೆದೋರುತ್ತಿದೆ.


ಯೆಹೂದದಲ್ಲಿ ಸಾರಿರಿ, ಯೆರೂಸಲೇಮಿನೊಳಗೆ ಪ್ರಕಟಿಸುತ್ತಾ, “ದೇಶದಲ್ಲೆಲ್ಲಾ ಕೊಂಬೂದಿರಿ, ಕೂಡಿಬನ್ನಿರಿ ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ.


ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು.


ಅವರು ದೇಶದ ಮೇಲೆ ಬೀಳುವ ಖಡ್ಗವನ್ನು ನೋಡಿದ ಕೂಡಲೆ, ಕೊಂಬನ್ನು ಊದಿ ಸ್ವಜನರನ್ನು ಎಚ್ಚರಿಸಲಿ.


ಜನಾಂಗಗಳ ಅರಸನೇ, ಯಾರು ನಿನಗೆ ಹೆದರದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ, ರಾಜಪರಂಪರೆಯಲ್ಲಿಯೂ ನಿನಗೆ ಸಮಾನನು ಯಾರೂ ಇಲ್ಲವಷ್ಟೆ.


ಗಿಬ್ಯದಲ್ಲಿ ತುತ್ತೂರಿಯನ್ನು ಊದಿರಿ, ರಾಮದಲ್ಲಿ ಕೊಂಬು ಕೂಗಲಿ, ಬೇತ್ ಅವೆನಿನಲ್ಲಿ ಆರ್ಭಟಿಸಿರಿ, ಬೆನ್ಯಾಮೀನೇ, ಹಿಂದೆ ನೋಡು!


ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.


ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತದೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತ್ತೂರಿಯ ಶಬ್ದವನ್ನೂ, ಯುದ್ಧದ ಘೋಷವನ್ನೂ ಕೇಳುತ್ತಿಯಲ್ಲಾ.


ಕಾಳಿಲ್ಲದೆ ಪಕ್ಷಿಯು ನೆಲದಲ್ಲಿನ ಬಲೆಯೊಳಗೆ ಬೀಳುವುದೋ? ಏನೂ ಬಲೆಗೆ ಸಿಕ್ಕಿಕೊಳ್ಳದೇ ಬೋನು ಉರುಲಾಗುವುದೋ?


ಆ ಕಾಲಕ್ಕೆ ಮುಂಚೆ ಮನುಷ್ಯನಿಗಾಗಲಿ, ಪಶುವಿಗಾಗಲಿ ದುಡಿತದಿಂದ ಏನೂ ಜೀವನವಾಗುತ್ತಿರಲಿಲ್ಲ; ಹೋಗಿ ಬರುವವರಿಗೆ ಶತ್ರುಗಳ ದೆಸೆಯಿಂದ ಭಯವಿಲ್ಲದೆ ಇರಲಿಲ್ಲ; ಒಬ್ಬರನೊಬ್ಬರು ಎದುರಿಸುವಂತೆ ಎಲ್ಲರನ್ನೂ ಪ್ರೇರೇಪಿಸುತ್ತಿದ್ದರು.


ಅವನು ಅವರೊಡನೆ ಮಾತನಾಡುತ್ತಿರುವಾಗಲೇ, ಸೇವಕನು ಅರಸನೊಂದಿಗೆ ಬಂದನು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಯೆಹೋವನಿಂದಲೇ ಬಂದದ್ದು, ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು