Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 3:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಯೆಹೋವನಾದ ದೇವರು ಏನನ್ನೂ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕರ್ತನಾದ ಯೆಹೋವನು ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ರಹಸ್ಯವನ್ನು ತಿಳಿಸದೆ ಏನೂ ಮಾಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನನ್ನ ಒಡೆಯನಾದ ಯೆಹೋವನು ಒಂದು ಕಾರ್ಯವನ್ನು ಮಾಡಲು ನಿರ್ಧರಿಸಬಹುದು. ಆದರೆ ಆತನು ಹಾಗೆ ಮಾಡುವ ಮುಂಚಿತವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ಮುಂತಿಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಗಳನ್ನು ತಿಳಿಸದೆ, ಸಾರ್ವಭೌಮ ಯೆಹೋವ ದೇವರು ಏನನ್ನೂ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 3:7
22 ತಿಳಿವುಗಳ ಹೋಲಿಕೆ  

ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ, ಏಕೆಂದರೆ, ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ, ಏಕೆಂದರೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಸಿದ್ದೇನೆ.


ಆಗ ಯೆಹೋವನು ತನ್ನೊಳಗೆ, “ನಾನು ಮಾಡಬೇಕೆಂದಿರುವ ಕಾರ್ಯವನ್ನು ಅಬ್ರಹಾಮನಿಗೆ ಮರೆಮಾಡುವುದು ಸರಿಯೋ?


ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.


ಯೇಸು ಕ್ರಿಸ್ತನ ಪ್ರಕಟನೆಯು, ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟಣೆಯನ್ನು ಹೊಂದಿದನು. ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ತಿಳಿಸಿದನು.


ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ.


ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, “ಇಲ್ಲಿಗೆ ಏರಿ ಬಾ, ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು” ಎಂದು ಹೇಳಿತು.


ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನ ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ ಎಂದನು.”


ಇವರು ಆಲೋಚನಾಸಭೆಯಲ್ಲಿ ನಿಂತಿದ್ದರೆ, ನನ್ನ ಮಾತುಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸಿ, ಅವರನ್ನು ಅವರ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು” ಎಂದು ಹೇಳುತ್ತಾನೆ.


ಆದ್ದರಿಂದ ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವುಗಳನ್ನೂ ಮುಂದೆ ಆಗಬೇಕಾದವುಗಳನ್ನೂ ಬರೆ.


ನಾನು ಈಗ ಸತ್ಯಾಂಶವನ್ನು ನಿನಗೆ ತಿಳಿಸುವೆನು, “ಇಗೋ, ಪಾರಸಿಯ ದೇಶದಲ್ಲಿ ಇನ್ನು ಮೂವರು ರಾಜರು ಏಳುವರು; ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು; ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧವಾಗಿ ತನ್ನ ಬಲವನ್ನೆಲ್ಲಾ ಎಬ್ಬಿಸುವನು.


“ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದ್ಯರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ” ಎಂದು ಆಜ್ಞಾಪಿಸಿದನು.


ಆಗ ಅವರಲ್ಲೊಬ್ಬನು ಅವನಿಗೆ, “ನನ್ನ ಒಡೆಯನಾದ ಅರಸನೇ, ಹಾಗಲ್ಲ, ಇಸ್ರಾಯೇಲರಲ್ಲಿ ಎಲೀಷನೆಂಬ ಒಬ್ಬ ಪ್ರವಾದಿಯಿರುತ್ತಾನೆ. ನೀನು ನಿನ್ನ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಾಯೇಲರ ಅರಸನಿಗೆ ತಿಳಿಸುತ್ತಾನೆ” ಎಂದನು.


ಆದುದರಿಂದ, ‘ನಾನು ಈ ದೇಶಕ್ಕೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಆಶೀರ್ವದಿಸುವೆನು’ ಎಂದು ಹೇಳಿದ್ದನ್ನು ತಿಳಿಸಿರಿ” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.


ಏಳನೆಯ ದೇವದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತ್ತೂರಿಯನ್ನು ಊದುವುದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ದೇವರ ಮರ್ಮವನ್ನು ತನ್ನ ದಾಸರಾದ ಪ್ರವಾದಿಗಳಿಗೆ ತಿಳಿಸಿದ್ದ ಪ್ರಕಾರ ನೆರವೇರುವುದು” ಎಂದು ಹೇಳಿದನು.


“ಆ ದಿನದಲ್ಲಿ ನಾನು ಇಸ್ರಾಯೇಲ್ ವಂಶಕ್ಕೆ ಕೊಂಬನ್ನು ಮೊಳೆಯಿಸಿ, ಆ ವಂಶದವರ ಮಧ್ಯದಲ್ಲಿ ನಿನ್ನ ಬಾಯಿಯನ್ನು ತೆರೆಯುವಂತೆ ಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವುದು.”


ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, “ನೀನು ಈ ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ” ಎಂದು ಹೇಳಿದನು.


ಸೌಲನು ಬರುವುದಕ್ಕೆ ಒಂದು ದಿನ ಮುಂದಾಗಿ ಯೆಹೋವನು ಸಮುವೇಲನಿಗೆ,


ಯೆಹೋವನು ನನಗೆ ಹೇಳುವುದೇನೆಂದರೆ, “ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ, ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು” ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು