Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 4:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಐಗುಪ್ತದ ವ್ಯಾಧಿಗಳಂತಹ ವ್ಯಾಧಿಯನ್ನು ನಿಮ್ಮ ಮೇಲೆ ಕಳುಹಿಸಿದೆನು. ನಿಮ್ಮ ಯುವಕರನ್ನು ಖಡ್ಗದಿಂದ ಹತಿಸಿದೆನು, ನಿಮ್ಮ ಕುದರೆಗಳನ್ನು ಸೂರೆಮಾಡಿಸಿದೆನು, ನಿಮ್ಮ ದಂಡುಗಳ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಹಿಂದೊಮ್ಮೆ ಈಜಿಪ್ಟಿಗೆ ನಾನು ಮಾಡಿದಂತೆ ನಿಮ್ಮನ್ನು ವ್ಯಾಧಿಯಿಂದ ಬಾಧಿಸಿದೆ. ನಿಮ್ಮ ಯುವಜನರು ಖಡ್ಗಕ್ಕೆ ತುತ್ತಾಗುವಂತೆ ಮಾಡಿದೆ. ನಿಮ್ಮ ಕುದುರೆಗಳು ಸೂರೆಯಾಗುವಂತೆ ಮಾಡಿದೆ. ನಿಮ್ಮ ದಂಡಿನವರ ಹೆಣಗಳು ಕೊಳೆತು ನಾರುವ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರಸ್ವಾಮಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಐಗುಪ್ತದ ವ್ಯಾಧಿಗಳಂಥ ವ್ಯಾಧಿಯನ್ನು ನಿಮಗೆ ಕಳುಹಿಸಿದೆನು; ನಿಮ್ಮ ಯುವಕರನ್ನು ಖಡ್ಗದಿಂದ ಹತಿಸಿದೆನು, ನಿಮ್ಮ ಅಶ್ವಗಳನ್ನು ಸೂರೆಮಾಡಿಸಿದೆನು; ನಿಮ್ಮ ದಂಡಿನ ಗಬ್ಬು ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆನು; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ನಾನು ಈಜಿಪ್ಟಿಗೆ ವ್ಯಾಧಿಗಳನ್ನು ಹೇಗೆ ಬರಮಾಡಿದೆನೋ ಹಾಗೆಯೇ ನಿಮಗೂ ಮಾಡಿದೆನು. ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದೆನು. ನಿಮ್ಮ ಕುದುರೆಗಳನ್ನು ತೆಗೆದುಕೊಂಡೆನು. ಹೆಣಗಳ ರಾಶಿಯಿಂದ ನಿಮ್ಮ ಸ್ಥಳವು ದುರ್ವಾಸನೆಯಿಂದ ತುಂಬುವಂತೆ ಮಾಡಿದೆನು. ಆದಾಗ್ಯೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಹಿಂದೊಮ್ಮೆ ಈಜಿಪ್ಟಿಗೆ ನಾನು ಮಾಡಿದಂತೆ ನಿಮ್ಮನ್ನು ವ್ಯಾಧಿಯಿಂದ ಬಾಧಿಸಿದೆ. ನಿಮ್ಮ ಕುದುರೆಗಳನ್ನು ತೆಗೆದುಕೊಂಡು ಹೋದವರ ಜೊತೆಯಲ್ಲಿ, ನಿಮ್ಮ ಯೌವನಸ್ಥರನ್ನೂ ಖಡ್ಗದಿಂದ ಕೊಂದು ಹಾಕಿದ್ದೇನೆ. ನಿಮ್ಮ ಪಾಳೆಯಗಳ ದುರ್ವಾಸನೆಯು ನಿಮ್ಮ ಮೂಗು ಸಹಿಸದ ಹಾಗೆ ಮಾಡಿದ್ದೇನೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 4:10
42 ತಿಳಿವುಗಳ ಹೋಲಿಕೆ  

ನೀವು ಹೆದರಿಕೊಳ್ಳುತ್ತಿದ್ದ ಐಗುಪ್ತದೇಶದ ರೋಗಗಳನ್ನೆಲ್ಲಾ ತಿರುಗಿ ನಿಮ್ಮ ಮೇಲೆ ಬರಮಾಡುವನು; ಅವು ನಿಮ್ಮನ್ನು ಅಂಟಿಕೊಂಡೇ ಇರುವವು.


ನಾನು ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮ ಕಡೆಯಿಂದ ದೂರಮಾಡುವೆನು, ಅದನ್ನು ಹಾಳುಬಿದ್ದ ಬಂಜರು ಭೂಮಿಗೂ ಓಡಿಸುವೆನು. ಅದರ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ, ಅದರ ಹಿಂಭಾಗವನ್ನು ಪಶ್ಚಿಮ ಸಮುದ್ರಕ್ಕೂ ತಳ್ಳಿಬಿಡುವೆನು. ಅದರ ದುರ್ವಾಸನೆಯು ಏರುವುದು. ಏಕೆಂದರೆ ಆತನು ಮಹತ್ಕಾರ್ಯಗಳನ್ನು ಮಾಡುತ್ತಾನೆ.


ಯೆಹೋವಾಹಾಜನಿಗೆ ಐವತ್ತು ಮಂದಿ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ಯರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು.


ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನೆಯನ್ನು ಮೀರಿದ್ದರಿಂದ ಆ ಕತ್ತಿಯು ಪ್ರತಿದಂಡನೆಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗ ಉಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.


ನಿಮ್ಮಲ್ಲಿ ಯಾವ ವ್ಯಾಧಿಯೂ ಉಂಟಾಗದಂತೆ ಯೆಹೋವನು ಮಾಡುವನು. ನಿಮ್ಮ ಅನುಭವಕ್ಕೆ ಬಂದ ಪ್ರಕಾರ ಐಗುಪ್ತದೇಶದಲ್ಲಿ ಪ್ರಬಲವಾಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸದೆ, ಅವುಗಳನ್ನು ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.


ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾಗುವವು” ಕರ್ತನಾದ ಯೆಹೋವನು ಹೀಗೆ ನುಡಿಯುತ್ತಾನೆ, “ಆಗ ಹೆಣಗಳು ಹೆಚ್ಚುವವು, ಅವುಗಳನ್ನು ಎಲ್ಲಾ ಸ್ಥಳಗಳಲ್ಲಿ ಸದ್ದುಗದ್ದಲವಿಲ್ಲದೆ ಬಿಸಾಡಿಬಿಡುವರು!”


“ನಿಮ್ಮ ಪಟ್ಟಣಗಳಲ್ಲಿ ನಿಮ್ಮ ಹಲ್ಲಿಗೆ ಏನೂ ಸಿಕ್ಕದಂತೆಯೂ ಮತ್ತು ನಿಮ್ಮ ಸಕಲ ನಿವಾಸಗಳಲ್ಲಿ ಅನ್ನದ ಕೊರತೆಯಾಗುವ ಹಾಗೆಯೂ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.


ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ, ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡತಿಯರು ಮಕ್ಕಳ್ಳಿಲ್ಲದವರಾಗಿಯೂ, ವಿಧವೆಯರಾಗಿಯೂ ಇರಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ. ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ.


ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು. ಅವರ ಗಂಡು ಮತ್ತು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು.


ಆದುದರಿಂದ ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಅರಾಮ್ಯರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದನು. ಅವರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಅವರ ಅಧೀನದಲ್ಲಿದ್ದರು.


ಆತನು ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರಗಳಿಂದಲೂ, ದೇಶವನ್ನು ಕ್ಷಾಮದಿಂದಲೂ ಮತ್ತು ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ನರಳುವಂತೆ ಮಾಡುವನು. ನೀವು ಸಾಯುವ ತನಕ ಇವು ನಿಮ್ಮನ್ನು ಬೆನ್ನತ್ತುವವು.


ನಾನು ನಿಮಗೆ ಮಾಡುವುದೇನೆಂದರೆ, ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವುದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.


ಆಗ ಆ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ” ಎಂದು ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು. ಯೆಹೋವನು ಮೋಶೆಗೆ ಮುಂತಿಳಿಸಿದಂತೆಯೇ ಫರೋಹನು ಅವರ ಮಾತನ್ನು ಕೇಳದೆ ಹೋದನು.


ಮೋವಾಬು ಹಾಳಾಗಿದೆ; ಸುಟ್ಟುಹೋದ ಅದರ ಪಟ್ಟಣಗಳಿಂದ ಹೊಗೆ ಎದ್ದಿದ್ದೆ. ಅದರಲ್ಲಿನ ಶ್ರೇಷ್ಠ ಯುವಕರು ಹತರಾಗುವುದಕ್ಕೆ ಇಳಿದುಹೋಗಿದ್ದಾರೆ. ಇದು ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನ ನುಡಿ.


ಅವರು ಘೋರವಾದ ಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಹೂಣಿಡುವುದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು. ಖಡ್ಗವೂ, ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವಾಗುವವು” ಎಂಬುದೇ.


“ನಾನು ಅವರಿಗೆ ನಾಲ್ಕು ವಿಧವಾದ ಬಾಧಕರನ್ನು, ಅಂದರೆ ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಗಳನ್ನು, ನುಂಗಿ ಹಾಳುಮಾಡುವುದಕ್ಕೆ ಆಕಾಶದ ಪಕ್ಷಿಗಳನ್ನೂ ಮತ್ತು ಭೂಜಂತುಗಳನ್ನೂ ನೇಮಿಸುವೆನು” ಎಂಬುದು ಯೆಹೋವನಾದ ನನ್ನ ಮಾತು.


“ಈ ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುದು; ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಸಿವುಡಿನಂತೆ ಇರುವವು, ಯೆಹೋವನ ಈ ಮಾತನ್ನು ಸಾರು” ಎಂದು ನನಗೆ ಅಪ್ಪಣೆಯಾಯಿತು.


ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು. ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು. ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು.


ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.


ಯೆಹೋವನು ಆ ಕಾಲದಲ್ಲಿ ಇಸ್ರಾಯೇಲರನ್ನು ಕುಗ್ಗಿಸತೊಡಗಿದನು. ಹಜಾಯೇಲನು ಬಂದು ಇಸ್ರಾಯೇಲರನ್ನು ಇಸ್ರಾಯೇಲರ ಮೇರೆಗಳಲ್ಲಿ ಸೋಲಿಸಿದನು.


ಹಜಾಯೇಲನು ಅವನನ್ನು, “ನನ್ನ ಒಡೆಯಾ, ಯಾಕೆ ಅಳುತ್ತಿ?” ಎಂದು ಕೇಳಿದನು. ಅದಕ್ಕೆ ಅವನು, “ನೀನು ಇಸ್ರಾಯೇಲರಿಗೆ ಎಷ್ಟು ಕೇಡು ಮಾಡುವಿ ಎಂಬುದು ನನಗೆ ಪ್ರಕಟವಾಯಿತು. ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸುವಿ. ಯೌವನಸ್ಥರನ್ನು ಕತ್ತಿಯಿಂದ ಸಂಹರಿಸುವಿ. ಮಕ್ಕಳನ್ನು ಬಂಡೆಗೆ ಅಪ್ಪಳಿಸುವಿ. ಗರ್ಭಿಣಿಯರ ಹೊಟ್ಟೆಯನ್ನು ಸೀಳುವಿ” ಎಂದು ಉತ್ತರಕೊಟ್ಟನು.


ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.


ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ನಾನು ಫರೋಹನಲ್ಲಿಯೂ, ಅವನ ಸೈನ್ಯದಲ್ಲಿಯೂ ಮಹಿಮೆಗೊಳ್ಳುವೆನು. ‘ನಾನೇ ಯೆಹೋವನು’ ಎಂದು ಐಗುಪ್ತ್ಯರಿಗೆ ತಿಳಿದು ಬರುವುದು” ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲರು ನಡೆದುಕೊಂಡರು.


ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ ಅವನು ಅವರನ್ನು ಕಳುಹಿಸಲಾರದೆ ಹೋದನು.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, ‘ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.


ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ, ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ?


ಆದರೂ ಯೆಹೋವನು ಮೋಶೆಗೆ ಹೇಳಿದಂತೆಯೇ ಆಯಿತು. ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.


ವ್ಯಾಧಿಯು ನಿಮಗೆ ಹತ್ತಿಕೊಂಡೇ ಇರುವಂತೆ ಯೆಹೋವನು ಮಾಡಿ, ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಮಾಡುವನು.


ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.


ಅವರಲ್ಲಿ ಹತರಾದವರು ಬಿಸಾಡಲ್ಪಡುವರು, ಅವರ ಶವಗಳ ದುರ್ವಾಸನೆಯು ಮೇಲಕ್ಕೆ ಏರುವುದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗುವವು.


ಓಹೋ, ಬೆಂಕಿಹಚ್ಚಿ ಸುತ್ತಮುತ್ತಲು ಉರಿಯನ್ನು ಹತ್ತಿಸಿಕೊಂಡಿರುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ, ನೀವು ಹತ್ತಿಸಿದ ಕೊಳ್ಳಿಗಳ ನಡುವೆ ನಡೆದರೂ ನಡೆಯಿರಿ. ಇಗೋ, “ನನ್ನ ಹಸ್ತದಿಂದ ನಿಮಗಾಗುವ ಗತಿಯು ಇದೇ, ದುಃಖಕ್ಕೆ ಒಳಗಾಗಿ ಸಾಯುವಿರಿ.”


ಅದರ ದುರ್ಗತಿಯಿಂದ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು.


ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು. ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.


ಇಸ್ರಾಯೇಲ್ ಐಗುಪ್ತ ದೇಶಕ್ಕೆ ಹಿಂದಿರುಗದು; ಅದು ನನ್ನ ಕಡೆಗೆ ಹಿಂದಿರುಗಲು ಒಪ್ಪದ ಕಾರಣ ಅಶ್ಶೂರವೇ ಅದಕ್ಕೆ ರಾಜನಾಗಬೇಕು.


ನಾನು ನಿಮ್ಮ ದುಡಿತದ ಫಲವನ್ನೆಲ್ಲಾ ಆನೆಕಲ್ಲು ಮಳೆಯಿಂದಲೂ, ಬಿಸಿಗಾಳಿಗೂ ಹಾಳುಮಾಡಿ ನಿಮ್ಮನ್ನು ಬಾಧಿಸಿದರೂ, ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು