Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 4:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಸೊದೋಮ್ ಮತ್ತು ಗೊಮೋರಗಳನ್ನು ಕೆಡವಿದಂತೆ, ನಾನು ನಿಮ್ಮ ಪಟ್ಟಣಗಳನ್ನು ಕೆಡವಿಬಿಟ್ಟಿದ್ದೇನೆ. ಬೆಂಕಿ ಉರಿಯಿಂದ ಎಳೆದ ಕೊಳ್ಳೆಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಒಮ್ಮೆ ಸೊದೋಮ್ ಮತ್ತು ಗೊಮೋರಾ ಪಟ್ಟಣಗಳನ್ನು ಕೆಡವಿದಂತೆ ನಾನು ನಿಮ್ಮ ಪಟ್ಟಣಪಾಳೆಯಗಳನ್ನು ಕೆಡವಿದೆನು, ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಂತೆ ನೀವು ಇದ್ದೀರಿ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸೊದೋಮ್‍ಗೊಮೋರಗಳನ್ನು ಕೆಡವಿದಂತೆ ನಾನು ನಿಮ್ಮ ಅನೇಕ ಪಟ್ಟಣಗಳನ್ನು ಕೆಡವಲು ಉರಿಯಿಂದ ಎಳೆದ ಕೊಳ್ಳಿಯ ಹಾಗಿದ್ದಿರಿ; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಸೊದೋಮ್ ಗೊಮೋರವನ್ನು ನಾಶಮಾಡಿದಂತೆ ನಾನು ನಿಮ್ಮನ್ನು ನಾಶಮಾಡಿದೆನು. ಆ ನಗರಗಳು ಸಂಪೂರ್ಣವಾಗಿ ನಾಶವಾದವು. ನೀವು ಬೆಂಕಿಯಿಂದ ಎಳೆದ ಕೊಳ್ಳಿಯಂತಿದ್ದೀರಿ. ಆದರೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಸೊದೋಮನ್ನೂ, ಗೊಮೋರವನ್ನೂ ಕೆಡವಿದ ಹಾಗೆ, ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ. ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವೂ ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 4:11
24 ತಿಳಿವುಗಳ ಹೋಲಿಕೆ  

ಆಗ ಯೆಹೋವನ ದೂತನು ಸೈತಾನನಿಗೆ, “ಯೆಹೋವನು ನಿನ್ನನ್ನು ಖಂಡಿಸಲಿ! ಹೌದು, ಯೆರೂಸಲೇಮನ್ನು ಆರಿಸಿಕೊಂಡಿರುವ ಯೆಹೋವನು ನಿನ್ನನ್ನು ಖಂಡಿಸಲಿ! ಅದು ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಾಗಿದೆಯಲ್ಲಾ?” ಎಂದು ಹೇಳಿದನು.


ರಾಜ್ಯಗಳ ಘನತೆಯೂ, ಕಸ್ದೀಯರ ಮಹಿಮೆಯ ಭೂಷಣವೂ ಆದ ಬಾಬಿಲೋನಿಗೆ, ದೇವರು ನಾಶಮಾಡಿದ ಸೊದೋಮ್ ಗೋಮೋರಗಳ ಗತಿಯೇ ಸಂಭವಿಸುವುದು.


ಯೆರೂಸಲೇಮಿನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ. ಅವರು ವ್ಯಭಿಚಾರಮಾಡಿ, ಮೋಸದಲ್ಲಿ ನಡೆದು, ದುಷ್ಟರಲ್ಲಿ ಯಾರೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ. ಅವರೆಲ್ಲರು ಸೊದೋಮಿನಂತೆ, ಆ ಪಟ್ಟಣದ ನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.


ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ, ಕೆಲವರನ್ನು ಭಯಪಡುತ್ತಾ ಕರುಣಿಸಿರಿ. ಶಾರೀರಿಕ ನಡತೆಯಿಂದ ಹೊಲಸಾದ ಅವರ ಉಡುಪನ್ನೂ ಸಹ ಹಗೆಮಾಡಿರಿ.


ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.


ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.


“ನಿಮ್ಮ ಪಟ್ಟಣಗಳಲ್ಲಿ ನಿಮ್ಮ ಹಲ್ಲಿಗೆ ಏನೂ ಸಿಕ್ಕದಂತೆಯೂ ಮತ್ತು ನಿಮ್ಮ ಸಕಲ ನಿವಾಸಗಳಲ್ಲಿ ಅನ್ನದ ಕೊರತೆಯಾಗುವ ಹಾಗೆಯೂ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.


ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ಪೂಜೆಯನ್ನೂ ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.


ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವುದು. ತಾನಾದರೋ ರಕ್ಷಣೆ ಹೊಂದುವನು. ಆದರೆ ಬೆಂಕಿಯೊಳಗಿಂದ ತಪ್ಪಿಸಿಕೊಂಡವನ ಹಾಗಿರುವನು.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು.


“ಅಂತೆಯೇ ನಿನ್ನ ದುಷ್ಕರ್ಮವು ಅಸಹ್ಯವಾಗಿರುವುದರಿಂದಲೂ, ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವಿ.”


ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ ಎದೋಮಿನಲ್ಲಿಯೂ ಯಾರೂ ವಾಸಿಸುವುದಿಲ್ಲ, ಯಾವ ನರಪ್ರಾಣಿಯೂ ಇಳಿದುಕೊಳ್ಳುವುದಿಲ್ಲ.


“ಸೇನಾಧೀಶ್ವರನಾದ ಕರ್ತನು ನಮಗೆ ಒಂದು ಸಂತಾನವನ್ನು ಉಳಿಸದೆ ಹೋಗಿದ್ದರೆ “ಸೊದೋಮಿನ ಗತಿಯೇ ನಮಗಾಗುತ್ತಿತ್ತು ಗೊಮೋರದ ದುರ್ದೆಸೆಯೇ ಸಂಭವಿಸುತ್ತಿತ್ತು” ಎಂದು ಮೊದಲೇ ತಿಳಿದುಕೊಂಡು ಹೇಳಿದ್ದಾರೆ.


ಎಲ್ಲಾ ಜನಾಂಗಗಳವರೂ ನಿಮ್ಮ ದೇಶವು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ಕಾಣುವರು. ಯೆಹೋವನು ಕೋಪ ಮತ್ತು ರೋಷದಿಂದ ಕೆಡವಿದ ಸೊದೋಮ್ ಮತ್ತು ಗೊಮೋರ, ಅದ್ಮಾ ಮತ್ತು ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟು ಹೋಗಿ, ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನು ಕಂಡು,


‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರ, ಪೆಕಹ ರೆಮಲ್ಯನ ಮಗನಾದ ಪೆಕಹನ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.’”


ನಿಮ್ಮ ದೇಶದಲ್ಲಿ ಯೆಹೋವನು ಆಕಾಶದಿಂದ ಮಳೆಗೆ ಬದಲಾಗಿ ಧೂಳನ್ನೂ ಮತ್ತು ಉಸುಬನ್ನೂ ನಿಮ್ಮ ಮೇಲೆ ಸುರಿಸುವನು; ಅದುದರಿಂದ ನೀವು ನಾಶವಾಗಿ ಹೋಗುವಿರಿ.


ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು. ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.


ದೇವರು ಕೆಡವಿದ ಸೊದೋಮ್, ಗೊಮೋರ ಪಟ್ಟಣಗಳಲ್ಲಿಯೂ ಮತ್ತು ಸುತ್ತಣ ಊರುಗಳಲ್ಲಿಯೂ ಹೇಗೋ, ಹಾಗೆಯೇ ಬಾಬೆಲಿನಲ್ಲಿಯೂ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲೆ ನಿಲ್ಲುವುದಿಲ್ಲ.


ಇಸ್ರಾಯೇಲ್ ಐಗುಪ್ತ ದೇಶಕ್ಕೆ ಹಿಂದಿರುಗದು; ಅದು ನನ್ನ ಕಡೆಗೆ ಹಿಂದಿರುಗಲು ಒಪ್ಪದ ಕಾರಣ ಅಶ್ಶೂರವೇ ಅದಕ್ಕೆ ರಾಜನಾಗಬೇಕು.


ನಾನು ನಿಮ್ಮ ದುಡಿತದ ಫಲವನ್ನೆಲ್ಲಾ ಆನೆಕಲ್ಲು ಮಳೆಯಿಂದಲೂ, ಬಿಸಿಗಾಳಿಗೂ ಹಾಳುಮಾಡಿ ನಿಮ್ಮನ್ನು ಬಾಧಿಸಿದರೂ, ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು