ಆಮೋಸ 4:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಗೋಡೆಯಲ್ಲಿಯ ಬಿರುಕುಗಳ ಮೂಲಕ, ಪ್ರತಿಯೊಬ್ಬ ಸ್ತ್ರೀಯೂ ನೇರವಾಗಿ ತನ್ನ ಮುಂದೆಯೇ ಹೊರಟು ಹೋಗುವಳು, ಹರ್ಮೋನಿನ ದಿಕ್ಕಿನ ಕಡೆಗೆ ತಳ್ಳಲ್ಪಡುವಿರಿ” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ನೀವು ಎಲ್ಲರು ಇದ್ದಕ್ಕಿದ್ದಂತೆ ಒಬ್ಬರ ಹಿಂದೆ ಒಬ್ಬರು ಗೋಡೆಯ ಬಿರುಕುಗಳ ಮೂಲಕ ಹೆರ್ಮೋನ್ ಕಡೆಗೆ ತಳ್ಳಲ್ಪಡುವಿರಿ,” ಇದು ಸರ್ವೇಶ್ವರಸ್ವಾಮಿಯ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೀವೆಲ್ಲರು ಇದ್ದ ಮುಖವಾಗಿಯೇ ಕೋಟೆಯೊಡೆದ ಸ್ಥಳಗಳಿಂದ ಹೊರಟು ಹರ್ಮೋನಿಗೆ ಹಾಕಿಸಿಕೊಳ್ಳುವಿರಿ; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಿಮ್ಮ ಪಟ್ಟಣಗಳು ನಾಶವಾಗುವವು. ಗೋಡೆಯಲ್ಲಿರುವ ಬಿರುಕುಗಳ ಮೂಲಕ ಹೆಂಗಸರು ತಪ್ಪಿಸಿಕೊಂಡು ಹೋಗಿ ಹೆಣಗಳ ರಾಶಿಯ ಮೇಲೆ ಬೀಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಗೋಡೆಯಲ್ಲಿಯ ಬಿರುಕುಗಳ ಮೂಲಕ ನೀವು ಹೊರಟು ಹೋಗುವಿರಿ. ನಿಮ್ಮನ್ನು ಹರ್ಮೋನಿನ ಕಡೆಗೆ ಎಸೆಯಲಾಗುತ್ತದೆ,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಅದೇ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಗೋಡೆಯ ಬಳಿಯಲ್ಲಿರುವ ಬಾಗಿಲಿನಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋದನು.