Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 4:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ನಿಮ್ಮನ್ನು ಬೂದಿಯಿಂದಲೂ, ಬಿಸಿಗಾಳಿಯಿಂದಲೂ ಬಾಧಿಸಿದೆನು. ನಿಮ್ಮ ಲೆಕ್ಕವಿಲ್ಲದ ವನ, ದ್ರಾಕ್ಷಿತೋಟಗಳನ್ನು, ಅಂಜೂರದ ಗಿಡಗಳನ್ನು, ನಿಮ್ಮ ಎಣ್ಣೆಯ ಮರಗಳನ್ನು ಮಿಡತೆಯು ತಿಂದುಬಿಟ್ಟಿತು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಬಿಸಿಗಾಳಿಯನ್ನು ಕಳುಹಿಸಿ ನಿಮ್ಮ ಪೈರು ಒಣಗುವಂತೆ ಮಾಡಿದೆ. ನಿಮ್ಮ ಬೆಳೆ ಬೂಷ್ಟು ಹಿಡಿದು ನಾಶವಾಗುವಂತೆ ಮಾಡಿದೆ. ನಿಮ್ಮ ವನವೃಕ್ಷಗಳನ್ನೂ ದ್ರಾಕ್ಷಾತೋಟಗಳನ್ನೂ ಹಾಳುಮಾಡಿದೆ. ನಿಮ್ಮ ಅಂಜೂರದ ಗಿಡಗಳನ್ನೂ ಎಣ್ಣೆಮರಗಳನ್ನೂ ಮಿಡತೆಗಳು ತಿಂದುಬಿಡುವಂತೆ ಮಾಡಿದೆ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿಮ್ಮನ್ನು ಬೂದಿಯಿಂದಲೂ ಬಿಸಿಗಾಳಿಯಿಂದಲೂ ಬಾಧಿಸಿದೆನು; ನಿಮ್ಮ ಲೆಕ್ಕವಿಲ್ಲದ ವನ, ದ್ರಾಕ್ಷೆಯ ತೋಟ, ಅಂಜೂರದ ಗಿಡ, ಎಣ್ಣೆಯ ಮರ, ಇವುಗಳನ್ನು ವಿುಡತೆಯು ತಿಂದುಬಿಟ್ಟಿತು; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ನಿಮ್ಮ ಬೆಳೆಗಳು ಸೂರ್ಯನ ಶಾಖದಿಂದಲೂ ರೋಗದಿಂದಲೂ ಸಾಯುವಂತೆ ಮಾಡಿದೆನು. ನಿಮ್ಮ ತೋಟಗಳನ್ನೂ ದ್ರಾಕ್ಷಿತೋಟಗಳನ್ನೂ ನಾನು ನಾಶಮಾಡಿದೆನು. ಮಿಡತೆಗಳು ನಿಮ್ಮ ಅಂಜೂರದ ಮತ್ತು ಆಲೀವ್ ಮರಗಳನ್ನು ತಿಂದುಬಿಟ್ಟವು. ಆದಾಗ್ಯೂ ಸಹಾಯಕ್ಕಾಗಿ ನೀವು ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಬಿಸಿಗಾಳಿಯನ್ನು ಕಳುಹಿಸಿ ನಿಮ್ಮ ಉದ್ಯಾನವನಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಒಣಗುವಂತೆ ಮಾಡಿದೆ. ನಿಮ್ಮ ಬೆಳೆ ರೋಗ ಮತ್ತು ಶಿಲೀಂಧ್ರವುಗಳಿಂದ ನಾಶವಾಯಿತು. ನಿಮ್ಮ ಅಂಜೂರದ ಗಿಡ ಮತ್ತು ಎಣ್ಣೆಮರಗಳನ್ನೂ ಮಿಡತೆಗಳು ತಿಂದು ಬಿಡುವಂತೆ ಮಾಡಿದೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ, ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 4:9
21 ತಿಳಿವುಗಳ ಹೋಲಿಕೆ  

ನಾನು ನಿಮ್ಮ ದುಡಿತದ ಫಲವನ್ನೆಲ್ಲಾ ಆನೆಕಲ್ಲು ಮಳೆಯಿಂದಲೂ, ಬಿಸಿಗಾಳಿಗೂ ಹಾಳುಮಾಡಿ ನಿಮ್ಮನ್ನು ಬಾಧಿಸಿದರೂ, ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ” ಇದು ಯೆಹೋವನ ನುಡಿ.


ಆತನು ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರಗಳಿಂದಲೂ, ದೇಶವನ್ನು ಕ್ಷಾಮದಿಂದಲೂ ಮತ್ತು ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ನರಳುವಂತೆ ಮಾಡುವನು. ನೀವು ಸಾಯುವ ತನಕ ಇವು ನಿಮ್ಮನ್ನು ಬೆನ್ನತ್ತುವವು.


ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪು ಮಿಡತೆ ತಿಂದು ಬಿಟ್ಟಿತು; ಗುಂಪು ಮಿಡತೆ ತಿಂದು ಉಳಿದದ್ದನ್ನು ಕುದರೆ ಮಿಡತೆ ತಿಂದು ಬಿಟ್ಟಿತು; ಕುದರೆ ಮಿಡತೆ ತಿಂದು ಉಳಿದದ್ದನ್ನು ಕಂಬಳಿ ಮಿಡತೆ ತಿಂದುಬಿಟ್ಟಿತು.


“ನಿಮ್ಮ ಪಟ್ಟಣಗಳಲ್ಲಿ ನಿಮ್ಮ ಹಲ್ಲಿಗೆ ಏನೂ ಸಿಕ್ಕದಂತೆಯೂ ಮತ್ತು ನಿಮ್ಮ ಸಕಲ ನಿವಾಸಗಳಲ್ಲಿ ಅನ್ನದ ಕೊರತೆಯಾಗುವ ಹಾಗೆಯೂ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.


ಎರಡು ಅಥವಾ ಮೂರು ಪಟ್ಟಣದವರು ನೀರು ಕುಡಿಯುವುದಕ್ಕೆ ಮತ್ತೊಂದು ಪಟ್ಟಣಕ್ಕೆ ಬಳಲುತ್ತಾ ಹೋಗುತ್ತಿದ್ದರು, ಬಾಯಾರಿಕೆ ತೀರಲಿಲ್ಲ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ.” ಇದು ಯೆಹೋವನ ನುಡಿ.


ಗುಂಪು ಮಿಡತೆಗಳು, ಸಣ್ಣ ಮಿಡತೆಗಳು, ದೊಡ್ಡ ಮಿಡತೆಗಳು, ಚೂರಿ ಮಿಡತೆಗಳು, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಾನು ನಿಮಗೆ ತಿರುಗಿಕೊಡುವೆನು.


ಅದು ನನ್ನ ದ್ರಾಕ್ಷಾತೋಟವನ್ನು ಹಾಳುಮಾಡಿ, ನನ್ನ ಅಂಜೂರದ ಗಿಡವನ್ನು ಮುರಿದುಹಾಕಿದೆ. ಅವುಗಳನ್ನು ಹಾಳುಮಾಡಿ ದೂರ ಬಿಸಾಡಿಬಿಟ್ಟಿದೆ; ಅದರ ಕೊಂಬೆಗಳು ಬಿಳುಪಾದವು.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.


ಇಸ್ರಾಯೇಲಿಗೆ ಇಷ್ಟು ದಂಡನೆಯಾದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ನನ್ನ ಕಡೆ ತಿರುಗಿಕೊಂಡಿದ್ದಾಳೆ” ಎಂಬುದೇ ಯೆಹೋವನಾದ ನನ್ನ ನುಡಿ.


ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.


“ದೇಶದಲ್ಲಿ ಬರಗಾಲ, ಘೋರವ್ಯಾಧಿ, ಬಿಸಿಗಾಳಿ, ಮಿಡತೆ, ಚಿಟ್ಟೇಹುಳು, ಹಸಿರುಹುಳು ಇಲ್ಲವೆ ಶತ್ರುಗಳು ಪಟ್ಟಣಕ್ಕೆ ಮುತ್ತಿಗೆ ಹಾಕುವುದು, ಇಂಥ ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ ಬಾಧೆಯುಂಟಾದರೆ,


“ದೇಶಕ್ಕೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಜೊಳ್ಳು, ಮಿಡತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಅಂತು ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ ಬಾಧೆ ಉಂಟಾಗುವಾಗ,


ನಿಮ್ಮ ಎಲ್ಲಾ ಮರಗಳೂ ಮತ್ತು ಪೈರುಗಳೂ ಮಿಡತೆಯ ಪಾಲಾಗುವವು.


ಓಹೋ, ಬೆಂಕಿಹಚ್ಚಿ ಸುತ್ತಮುತ್ತಲು ಉರಿಯನ್ನು ಹತ್ತಿಸಿಕೊಂಡಿರುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ, ನೀವು ಹತ್ತಿಸಿದ ಕೊಳ್ಳಿಗಳ ನಡುವೆ ನಡೆದರೂ ನಡೆಯಿರಿ. ಇಗೋ, “ನನ್ನ ಹಸ್ತದಿಂದ ನಿಮಗಾಗುವ ಗತಿಯು ಇದೇ, ದುಃಖಕ್ಕೆ ಒಳಗಾಗಿ ಸಾಯುವಿರಿ.”


ಆಹಾ, ಅಂಜೂರವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ, ಎಣ್ಣೆ ಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗದ್ದೆಗಳು ಆಹಾರ ಧಾನ್ಯಗಳನ್ನು ಉತ್ಪತ್ತಿಮಾಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,


ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು. ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.


ಇಸ್ರಾಯೇಲ್ ಐಗುಪ್ತ ದೇಶಕ್ಕೆ ಹಿಂದಿರುಗದು; ಅದು ನನ್ನ ಕಡೆಗೆ ಹಿಂದಿರುಗಲು ಒಪ್ಪದ ಕಾರಣ ಅಶ್ಶೂರವೇ ಅದಕ್ಕೆ ರಾಜನಾಗಬೇಕು.


ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು. ಅದು ನಿಮ್ಮ ಭೂಮಿಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷಿಯಹಣ್ಣು ತೋಟದಲ್ಲಿ ಉದುರಿಹೋಗದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು