ಆಮೋಸ 5:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನೀವು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ, ನಾನು ಅದನ್ನು ಸ್ವೀಕರಿಸುವುದಿಲ್ಲ, ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸಿದ ಕೊಬ್ಬಿದ ಪಶುಗಳನ್ನು ನೋಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನೀವು ನನಗೆ ದಹನಬಲಿದಾನಗಳನ್ನು, ಧಾನ್ಯನೈವೇದ್ಯಗಳನ್ನು ಅರ್ಪಿಸುವುದಕ್ಕೆ ಬಂದರೂ ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸುವ ಕೊಬ್ಬಿದ ಪಶುಗಳನ್ನು ನಾನು ಕಟಾಕ್ಷಿಸೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನೀವು ನನಗೆ ಸರ್ವಾಂಗಹೋಮಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸಿದರೂ ಸ್ವೀಕರಿಸೆನು; ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸುವ ಕೊಬ್ಬಿದ ಪಶುಗಳನ್ನು ನೋಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನೀವು ಸರ್ವಾಂಗಹೋಮವನ್ನಾಗಲಿ ಧಾನ್ಯದ ಹೋಮವನ್ನಾಗಲಿ ಅರ್ಪಿಸಿದರೆ ನಾನು ಅದನ್ನು ಸ್ವೀಕರಿಸುವುದಿಲ್ಲ. ಸಮಾಧಾನಯಜ್ಞದಲ್ಲಿ ಕೊಬ್ಬಿದ ಪ್ರಾಣಿಗಳನ್ನು ಬಲಿಯರ್ಪಿಸಿದರೂ ನಾನು ಅದನ್ನು ಕಣ್ಣೆತ್ತಿ ನೋಡುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನೀವು ನನಗೆ ದಹನಬಲಿಗಳನ್ನೂ ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ, ನಾನು ಅವುಗಳನ್ನು ಅಂಗೀಕರಿಸುವುದಿಲ್ಲ. ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನೂ ನಾನು ಲಕ್ಷಿಸುವುದಿಲ್ಲ. ಅಧ್ಯಾಯವನ್ನು ನೋಡಿ |