ಆಮೋಸ 5:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಒಂದು ಪಟ್ಟಣದಿಂದ ಯುದ್ಧಕ್ಕೆ ಹೊರಟ ಸಾವಿರ ಸೈನಿಕರಲ್ಲಿ ನೂರು ಮಂದಿ ಉಳಿಯುವರು, ಒಂದು ಊರಿನಿಂದ ಹೊರಟ ನೂರು ಸೈನಿಕರಲ್ಲಿ ಇಸ್ರಾಯೇಲರ ವಂಶಕ್ಕೆ ಹತ್ತು ಜನ ನಿಲ್ಲುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಯುದ್ಧಕ್ಕೆ ಹೊರಟ ಸಾವಿರ ಮಂದಿ ಸೈನಿಕರಲ್ಲಿ ಪಟ್ಟಣಕ್ಕೆ ಮರಳಿದವರು ನೂರೇ ಮಂದಿ: ರಣರಂಗಕ್ಕೆ ಹೊರಟ ನೂರು ಮಂದಿ ಯೋಧರಲ್ಲಿ ಇಸ್ರಯೇಲಿಗೆ ಮರಳಿದವರು ಹತ್ತೇ ಮಂದಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಒಂದು ಪಟ್ಟಣದಿಂದ ಯುದ್ಧಕ್ಕೆ ಹೊರಟ ಸಾವಿರ ಭಟರಲ್ಲಿ ನೂರು ಮಂದಿ ಉಳಿಯುವರು; ಒಂದು ಊರಿನಿಂದ ಹೊರಟ ನೂರು ದಂಡಾಳುಗಳಲ್ಲಿ ಇಸ್ರಾಯೇಲ್ ವಂಶಕ್ಕೆ ಹತ್ತು ಜನ ನಿಲ್ಲುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನನ್ನ ಒಡೆಯನಾದ ಯೆಹೋವನು ಇದನ್ನು ಹೇಳುತ್ತಾನೆ. “ಸೈನ್ಯಾಧಿಕಾರಿಗಳು ಸಾವಿರ ಮಂದಿಯೊಂದಿಗೆ ಪಟ್ಟಣದ ಹೊರಗೆ ಹೋದರೆ ನೂರು ಮಂದಿಯೊಂದಿಗೆ ಹಿಂದಿರುಗುವರು. ಸೈನ್ಯಾಧಿಕಾರಿಗಳು ನೂರು ಮಂದಿಯೊಂದಿಗೆ ಹೋದರೆ ಕೇವಲ ಹತ್ತು ಮಂದಿಯೊಂದಿಗೆ ಹಿಂದಿರುಗುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯುದ್ಧಕ್ಕೆ ಹೊರಟ ಸಾವಿರ ಮಂದಿ ಸೈನಿಕರಲ್ಲಿ, ಪಟ್ಟಣಕ್ಕೆ ಮರಳಿದವರು ನೂರೇ ಮಂದಿ. ರಣರಂಗಕ್ಕೆ ಹೊರಟ ನೂರು ಮಂದಿ ಯೋಧರಲ್ಲಿ, ಇಸ್ರಾಯೇಲಿಗೆ ಮರಳಿದವರು ಹತ್ತೇ ಮಂದಿ.” ಅಧ್ಯಾಯವನ್ನು ನೋಡಿ |