ಆಮೋಸ 5:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೋವನ ಕಡೆಗೆ ತಿರುಗಿಕೊಂಡು ಬದುಕಿರಿ, ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ ಯೋಸೇಫನ ವಂಶದೊಳಗೆ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವುದಕ್ಕೆ ಬೇತೇಲಿನಲ್ಲಿ ಯಾರೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸರ್ವೇಶ್ವರಸ್ವಾಮಿಗೆ ಅಭಿಮುಖರಾಗಿರಿ, ನೀವು ಬದುಕುವಿರಿ. ಇಲ್ಲವಾದರೆ ಅವರು ಬೆಂಕಿಯೋಪಾದಿ ಜೋಸೆಫನ ಮನೆತನದ ಮೇಲೆ ಎರಗಿಯಾರು. ಬೇತೇಲಿನ ಜನರನ್ನು ಭಸ್ಮಮಾಡಿಯಾರು. ಆ ಬೆಂಕಿಯನ್ನು ಯಾರೂ ಆರಿಸರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆಹೋವನ ಕಡೆಗೆ ತಿರುಗಿಕೊಳ್ಳಿರಿ, ಬದುಕುವಿರಿ, ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ ಯೋಸೇಫನ ವಂಶದೊಳಗೆ ನುಗ್ಗಿಯಾನು; ನುಂಗುವ ಆತನ ರೋಷಾಗ್ನಿಯನ್ನು ಆರಿಸುವದಕ್ಕೆ ಬೇತೇಲಿನಲ್ಲಿ ಯಾರೂ ಇರರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಹೋವನ ಬಳಿಗೆ ಹೋಗು. ಆಗ ಜೀವಿಸುವೆ. ಯೆಹೋವನ ಬಳಿಗೆ ನೀನು ಹೋಗದಿದ್ದಲ್ಲಿ ಯೋಸೇಫನ ಮನೆತನಕ್ಕೆ ಬೆಂಕಿಯು ಹಿಡಿಯುವುದು. ಆ ಬೆಂಕಿಯು ಯೋಸೇಫನ ಮನೆಯನ್ನು ದಹಿಸುವದು. ಬೇತೇಲಿನಲ್ಲಿ ಅದನ್ನು ಯಾರೂ ನಂದಿಸಲಾರರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನೀವು ಯೆಹೋವ ದೇವರನ್ನು ಹುಡುಕಿರಿ ಮತ್ತು ಬದುಕಿರಿ. ಇಲ್ಲದಿದ್ದರೆ, ಆತನು ಬೆಂಕಿಯಂತೆ ಯೋಸೇಫನ ಗೋತ್ರಗಳಲ್ಲಿ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವುದಿಲ್ಲ. ಅಧ್ಯಾಯವನ್ನು ನೋಡಿ |