Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 6:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಗೋ, ನೋಡಿರಿ, ಯೆಹೋವನು ಆಜ್ಞಾಪಿಸಲು, ದೊಡ್ಡ ಮನೆಯು ಕೆಡವಲ್ಪಟ್ಟು ಚೂರುಚೂರಾಯಿತು, ಚಿಕ್ಕ ಮನೆಯೂ ಮುರಿದುಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇಗೋ, ಸರ್ವೇಶ್ವರ ಆಜ್ಞಾಪಿಸಲು, ಕುಸಿದುಬೀಳುವುವು ಮಹಾಸೌಧಗಳು, ನುಚ್ಚುನೂರಾಗುವುವು ಚಿಕ್ಕಚಿಕ್ಕ ಮನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇಗೋ, ಯೆಹೋವನು ಆಜ್ಞಾಪಿಸಲು ದೊಡ್ಡ ಮನೆಯು ಹೊಡೆಯಲ್ಪಟ್ಟು ಚೂರುಚೂರಾಗುವದು, ಚಿಕ್ಕ ಮನೆಯೂ ಮುರಿದುಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೋಡು, ಯೆಹೋವನು ಆಜ್ಞೆಯನ್ನು ಕೊಡುವನು. ಆಗ ಭವ್ಯಭವನಗಳು ಒಡೆದು ಚೂರುಚೂರಾಗಿ ಬೀಳುವವು. ಮತ್ತು ಸಣ್ಣ ಮನೆಗಳು ಚಿಂದಿಚಿಂದಿಯಾಗಿ ಚೂರಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ, ಯೆಹೋವ ದೇವರು ಆಜ್ಞಾಪಿಸುತ್ತಾರೆ, ಆತನು ದೊಡ್ಡ ಮನೆಯನ್ನು ಸೀಳುಗಳಿಂದಲೂ ಚಿಕ್ಕ ಮನೆಯನ್ನು ಬಿರುಕುಗಳಿಂದಲೂ ಹೊಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 6:11
21 ತಿಳಿವುಗಳ ಹೋಲಿಕೆ  

ನಾನು ಚಳಿಗಾಲದ ಅರಮನೆಯನ್ನೂ, ಬೇಸಿಗೆಯ ಅರಮನೆಯನ್ನೂ ಹೊಡೆದುಹಾಕುವೆನು. ದಂತಮಂದಿರಗಳು ಹಾಳಾಗುವವು ಮತ್ತು ದೊಡ್ಡಮನೆಗಳು ಕೊನೆಗಾಣುವವು” ಇದು ಯೆಹೋವನ ನುಡಿ.


ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.


ಅವನು ಯೆಹೋವನ ಆಲಯವನ್ನೂ, ಅರಸನ ಅರಮನೆಯನ್ನೂ ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಹಾಗೂ ಪಟ್ಟಣದ ಮುಖ್ಯ ಕಟ್ಟಡಗಳನ್ನೂ ಸುಟ್ಟುಬಿಟ್ಟನು.


ನಾನು ಸಕಲ ಜನಾಂಗಗಳನ್ನು ಯೆರೂಸಲೇಮಿಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರಮಿಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು, ಉಳಿದ ಜನರೋ ಪಟ್ಟಣದಲ್ಲೇ ಉಳಿಯುವರು.


ಅಶ್ಶೂರವೇ, ನಿನ್ನ ಹೆಸರಿನ ಸಂತಾನ ಬೀಜವು ಇನ್ನು ಬಿತ್ತಲ್ಪಡಬಾರದೆಂದು ಯೆಹೋವನಾದ ನಾನು ಆಜ್ಞಾಪಿಸಿದ್ದೇನೆ; ನಿನ್ನ ದೇವರ ಮಂದಿರದೊಳಗಿಂದ ಕೆತ್ತಿದ ವಿಗ್ರಹವನ್ನೂ, ಎರಕದ ಬೊಂಬೆಯನ್ನೂ ಕಡಿದುಬಿಡುವೆನು; ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು; ನಿನ್ನ ಪಾಪಗಳು ದುರ್ವಾಸನೆ ಬೀರುತ್ತಿವೆ.


“ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವ ಪ್ರಕಾರ, ಇಸ್ರಾಯೇಲರನ್ನು ಸಕಲ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕು” ಆದರೂ ಒಂದು ಕಾಳಾದರೂ ನೆಲಕ್ಕೆ ಬೀಳುವುದಿಲ್ಲ, ಎಂದು ಅಪ್ಪಣೆ ಕೊಡುವೆನು.


ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಆತನು ಹೀಗೆ ಅಪ್ಪಣೆ ಕೊಟ್ಟನು, “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ. ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳುವ ಹಾಗೆ ಮಾಡಿ, ಉಳಿದವರನ್ನು ಖಡ್ಗದಿಂದ ಸಂಹರಿಸುವೆನು. ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.


ಸೇನಾಧೀಶ್ವರ ದೇವರಾದ ಯೆಹೋವನ ನುಡಿಯನ್ನು ಕೇಳಿರಿ ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗೆಂದಿದ್ದಾನೆ, “ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು; ಅದರ ಕೋಟೆಗಳನ್ನು ಹಗೆಮಾಡುತ್ತೇನೆ. ಆದುದರಿಂದ ನಾನು ರಾಜಧಾನಿಯನ್ನೂ, ಅದರ ಸಕಲ ಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು”


ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದುದರಿಂದ ತನ್ನ ದೋಷಫಲವನ್ನು ಅನುಭವಿಸಲೇ ಬೇಕು; ಅದರ ಜನರು ಖಡ್ಗದಿಂದ ಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.


ನಾನು ಆರಿಸಿಕೊಂಡ ಪರಿಶುದ್ಧರಿಗೆ ಅಪ್ಪಣೆ ಕೊಟ್ಟಿದ್ದೇನೆ. ಹೌದು, ನನ್ನ ಜಯದಲ್ಲಿ ಹೆಮ್ಮೆಪಡುವವರು, ನನ್ನ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರಿಗೆ ಕರೆದಿದ್ದೇನೆ.


ಸೋಮಾರಿತನದಿಂದ ತೊಲೆಗಳು ಬೊಗ್ಗುವವು. ಜೋಲುಗೈಯಿಂದ ಮನೆ ಸೋರುವುದು.


ಆತನು ಆಜ್ಞಾಪಿಸಲು ಮಿಡತೆಗಳೂ, ಲೆಕ್ಕವಿಲ್ಲದಷ್ಟು ಜಿಟ್ಟೆಹುಳಗಳೂ ಬಂದು,


ಆತನು ಆಜ್ಞಾಪಿಸಲು ಅವರ ಎಲ್ಲಾ ಪ್ರಾಂತ್ಯಗಳಲ್ಲಿ, ವಿಷದ ಹುಳಗಳೂ, ಹೇನುಗಳೂ ಉಂಟಾದವು.


ಅನಂತರ ಆತನು ಐಗುಪ್ತ ದೇಶದಲ್ಲಿ ಕ್ಷಾಮವನ್ನು ಬರಮಾಡಿ, ಆಹಾರವನ್ನು ನಾಶಮಾಡಿಬಿಟ್ಟನು.


ನೀವು ಬಡವರನ್ನು ತುಳಿದು, ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ, ವಾಸಿಸದೆ ಇರುವಿರಿ. ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಅದರ ದ್ರಾಕ್ಷಾರಸವನ್ನು ಕುಡಿಯುವಿರಿ.


ಹೀಗಿರಲು ಎದೋಮ್ಯರು, “ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು” ಅಂದುಕೊಂಡರೆ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಅವರು ಕಟ್ಟಿದರೂ ನಾನು ಕೆಡವಿಹಾಕುವೆನು; ಅವರು ದುಷ್ಟ ಕೇಡಿಗರು, ಯೆಹೋವನ ನಿತ್ಯ ಕೋಪಕ್ಕೆ ಗುರಿಯಾದ ಜನರೂ ಅನ್ನಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು