Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 6:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕುದುರೆಗಳು ಬಂಡೆಯ ಮೇಲೆ ಓಡಾಡುವುವೋ? ಅದನ್ನು ಎತ್ತುಗಳಿಂದ ಉಳುವರೋ? ಆದರೆ ನೀವು ನ್ಯಾಯವನ್ನು ವಿಷವನ್ನಾಗಿ ಮಾಡಿ, ಧರ್ಮದ ಸುಫಲವನ್ನು ಕಹಿಯಾಗಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕಲ್ಲುಬಂಡೆಗಳ ಮೇಲೆ ಕುದುರೆಗಳು ಓಡಾಡುವುದುಂಟೋ? ಎತ್ತು ಹೋರಿಗಳಿಂದ ಕಡಲನ್ನು ಉಳುವುದುಂಟೋ? ನೀವೋ, ವಿಷವನ್ನಾಗಿಸಿದ್ದೀರಿ ನ್ಯಾಯನೀತಿಯನ್ನು, ಕಹಿಯಾಗಿಸಿದ್ದೀರಿ ಧರ್ಮದ ಸತ್ಫಲವನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕುದುರೆಗಳು ಕೋಡುಗಲ್ಲಿನ ಮೇಲೆ ಓಡಾಡುವವೋ; ಅದನ್ನು ಎತ್ತುಗಳಿಂದ ಉಳುವರೋ? ಆದರೆ ನೀವು ನ್ಯಾಯವನ್ನು ವಿಷಮಾಡಿ ಧರ್ಮದ ಸುಫಲವನ್ನು ಕಹಿಗೆ ತಂದಿರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಕುದುರೆಗಳು ಬಂಡೆಗಳ ಮೇಲೆ ಓಡುವವೋ? ಇಲ್ಲ! ಬಂಡೆಗಳನ್ನು ಊಳಲು ನಿಮ್ಮ ಹಸುಗಳನ್ನು ಉಪಯೋಗಿಸುವಿರೋ? ಇಲ್ಲ! ಆದರೆ ನೀವು ಎಲ್ಲವನ್ನು ತಿರುವುಮುರುವು ಮಾಡುತ್ತೀರಿ. ಒಳ್ಳೆಯತನವನ್ನು ನೀವು ವಿಷವಾಗಿ ಮಾಡಿದ್ದೀರಿ. ನ್ಯಾಯವನ್ನು ಕಹಿಯಾದ ವಿಷವನ್ನಾಗಿ ಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕುದುರೆಗಳು ಬಂಡೆಯ ಮೇಲೆ ಓಡುವುದುಂಟೇ? ಎತ್ತುಗಳಿಂದ ಅಲ್ಲಿ ಉಳುವನೋ? ನಿಮ್ಮ ನ್ಯಾಯವನ್ನು ವಿಷವನ್ನಾಗಿ, ನೀತಿ ಫಲವನ್ನು ಕಹಿಯನ್ನಾಗಿ ಬದಲಾಯಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 6:12
17 ತಿಳಿವುಗಳ ಹೋಲಿಕೆ  

ಅವರು ನ್ಯಾಯವನ್ನು ಕಹಿಮಾಡುವವರು ಮತ್ತು ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರು!”


ಹರಟೆಹರಟುತ್ತಾರೆ, ಸುಳ್ಳಾಣೆಯಿಡುತ್ತಾರೆ, ಸಂಧಾನ ಮಾಡಿಕೊಳ್ಳುತ್ತಾರೆ; ಅಲ್ಲಿನ ನ್ಯಾಯವು ನೇಗಿಲಗೆರೆಗಳಲ್ಲಿ ಹುಟ್ಟುವ ವಿಷದ ಕಳೆಗಳಂತಿದೆ.


ಏಕೆಂದರೆ ನೀನು ಹಟವಾದಿ ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು.


ಎರಡು ಕೈಗಳನ್ನು ಹಾಕಿ ಕೆಟ್ಟ ಕೆಲಸವನ್ನು ಚೆನ್ನಾಗಿ ಮಾಡುತ್ತಾರೆ. ಪ್ರಭುವು ಧನವನ್ನು ಕೇಳುತ್ತಾನೆ. ನ್ಯಾಯಾಧಿಪತಿಯು ಲಂಚಕ್ಕೆ ಕೈಯೊಡ್ಡುತ್ತಾನೆ. ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ. ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.


ನೀವು ಮಾಡಿದ ವ್ಯವಸಾಯವು ದುಷ್ಟತನ, ನಿಮಗಾದ ಬೆಳೆಯು ಅನ್ಯಾಯ ನೀವು ನಿಮ್ಮ ಕಟ್ಟುಪಾಡಿನಲ್ಲಿಯೂ, ನಿಮ್ಮ ಶೂರರ ರಥಗಳಲ್ಲಿಯೂ ಭರವಸವಿಟ್ಟಿದ್ದರಿಂದ ಮೋಸದ ಫಲವನ್ನು ಅನುಭವಿಸಿದ್ದೀರಿ.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.


ಸಮಾಧಾನವನ್ನು ಉಂಟುಮಾಡುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು.


ನಾನು ಅದರೊಳಗಿಂದ ಅಧಿಪತಿಯನ್ನು ಕಡಿದುಹಾಕಿ, ಸಕಲ ರಾಜ್ಯಾಧಿಕಾರಿಗಳನ್ನೂ ಸಂಹರಿಸುವೆನು.” ಇದು ಯೆಹೋವನ ನುಡಿ.


ನ್ಯಾಯನೀತಿಗಳನ್ನು ಮಾಡುವುದಕ್ಕೆ ಅವರಿಗೆ ತಿಳಿದಿಲ್ಲ” ಇದು ಯೆಹೋವನ ನುಡಿ. ತಮ್ಮ ಉಪ್ಪರಿಗೆಗಳಲ್ಲಿ ಬಾಧೆಯನ್ನೂ, ನಾಶನವನ್ನೂ ಕೂಡಿಸಿಟ್ಟುಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು