ಆಮೋಸ 6:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಸೇನಾಧೀಶ್ವರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರ ವಂಶದವರೇ, ಇಗೋ, ನಾನು ನಿಮಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು; ಅವರು ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಹೊಳೆಯ ತನಕ, ನಿಮ್ಮನ್ನು ಹಿಂಸಿಸುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇಂತೆನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ: “ಎತ್ತಿಕಟ್ಟುವೆನು ನಿಮಗೆ ವಿರುದ್ಧವಾಗಿ ಜನಾಂಗವೊಂದನ್ನು; ಸದೆಬಡಿವುದದು ನಿಮ್ಮನ್ನು ಹಮಾತಿನ ದಾರಿಯಿಂದ ಅರಬಾ ತೊರೆಯ ತನಕ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಸೇನಾಧೀಶ್ವರದೇವರಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ಇಗೋ, ನಾನು ನಿಮಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು; ಅದು ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ತೊರೆಯ ತನಕ ನಿಮ್ಮನ್ನು ಜಜ್ಜಿಬಿಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಆದರೆ ಇಸ್ರೇಲೇ, ನಿನಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು. ಆ ಜನಾಂಗವು ನಿನ್ನ ದೇಶದಲ್ಲಿ ಪೂರ್ತಿ ಸಂಕಟವನ್ನುಂಟು ಮಾಡುವದು; ಅದು ಲೆಬೋಹಮಾತಿನಿಂದ ಹಿಡಿದು ಅರಾಬಾ ಹಳ್ಳದ ತನಕ ಸಂಕಟವನ್ನುಂಟು ಮಾಡುವದು.” ಸರ್ವಶಕ್ತನಾದ ಯೆಹೋವನು ಇದನ್ನು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರೇ, ಜನಾಂಗವನ್ನು ನಿಮಗೆ ವಿರೋಧವಾಗಿ ಎಬ್ಬಿಸುವೆನು. ಲೆಬೊ ಹಮಾತಿನ ಪ್ರದೇಶದಿಂದ ಅರಾಬಾ ತಗ್ಗಿನ ನದಿಯವರೆಗೂ ನಿಮ್ಮನ್ನು ಹಿಂಸಿಸುವರು. ಅಧ್ಯಾಯವನ್ನು ನೋಡಿ |