Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 6:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮ್ಮ ಪ್ರಮುಖರು, “ಕಲ್ನೆಗೆ ಹೋಗಿ ನೋಡಲಿ; ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ತೆರಳಿರಿ; ಆ ಮೇಲೆ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ. ಅವು ಈ ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಗಳಿಗಿಂತ ದೊಡ್ಡದೋ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಕಲ್ನೆ ಪಟ್ಟಣಕ್ಕೆ ಹೋಗಿ ನೋಡಿ. ಅಲ್ಲಿಂದ ಪ್ರಖ್ಯಾತ ಪಟ್ಟಣವಾದ ಹಮಾತಿಗೆ ನಡೆಯಿರಿ. ಹಮಾತಿನಿಂದ ಫಿಲಿಷ್ಟಿಯರ ಊರಾದ ಗತ್ ನಗರಕ್ಕೆ ಇಳಿದುಹೋಗಿರಿ. ಅವು ನಿಮ್ಮ ರಾಜ್ಯಗಳಿಗಿಂತ ದೊಡ್ಡವೋ? ಅವುಗಳ ಪ್ರಾಂತ್ಯ, ನಿಮ್ಮ ಪ್ರಾಂತ್ಯಕ್ಕಿಂತ ಹಿರಿದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕಲ್ನೆಗೆ ಹೋಗಿ ನೋಡಿರಿ, ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ತೆರಳಿರಿ, ಆಮೇಲೆ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ; ಅವು ಈ ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತವು ನಿಮ್ಮ ಪ್ರಾಂತಕ್ಕಿಂತ ದೊಡ್ಡದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಹೋಗಿ ಕಲ್ನೆಯ ಕಡೆಗೆ ದಿಟ್ಟಿಸಿರಿ. ಅಲ್ಲಿಂದ ದೊಡ್ಡ ಪಟ್ಟಣವಾದ ಹಾಮಾತಿಗೆ ಹೋಗಿರಿ. ಫಿಲಿಷ್ಟಿಯರ ಗತ್ ಪಟ್ಟಣಕ್ಕೆ ಹೋಗಿರಿ. ಆ ಜನಾಂಗಗಳಿಗಿಂತ ನೀವು ಉತ್ತಮರೋ? ಇಲ್ಲ. ಅವರ ರಾಜ್ಯವು ನಿಮಗಿಂತ ವಿಸ್ತಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕಲ್ನೇ ಪಟ್ಟಣಕ್ಕೆ ಹೋಗಿ ನೋಡಿರಿ. ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ಹೋಗಿರಿ. ಅಲ್ಲಿಂದ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ. ಅವು ನಿಮ್ಮ ಎರಡು ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಕ್ಕಿಂತ ದೊಡ್ಡದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 6:2
19 ತಿಳಿವುಗಳ ಹೋಲಿಕೆ  

ನೀನು ನೋ ಆಮೋನ್ ಪಟ್ಟಣಗಿಂತ ಭದ್ರವಾಗಿದ್ದೀಯೋ? ಅದು ನೈಲಿನ ಪ್ರವಾಹಗಳಲ್ಲಿ ನೆಲೆಯಾಗಿತ್ತು. ನೀರು ಅದನ್ನು ಸುತ್ತಿಕೊಂಡಿತ್ತು, ಮಹಾ ನದಿಯು ಅದಕ್ಕೆ ಪೌಳಿಗೋಡೆ, ಜಲಾಶಯವು ಅದರ ದುರ್ಗ.


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ ಮತ್ತು ಇವ್ವಾ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಲು ಸಾಧ್ಯವಾಯಿತೇ?


ಶಿನಾರ್ ದೇಶದಲ್ಲಿರುವ ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.


ಅವನು ಫಿಲಿಷ್ಟಿಯರ ಮೇಲೆ ಯುದ್ಧಕ್ಕಾಗಿ ಹೊರಟು ಗತ್ ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.


ಫಿಲಿಷ್ಟಿಯರ ಪಾಳೆಯದಿಂದ ಗತ್ ಊರಿನವನಾದ ಗೊಲ್ಯಾತನೆಂಬ ಒಬ್ಬ ರಣಶೂರನು ಹೊರಟುಬಂದನು. ಅವನು ಆರುವರೆ ಮೊಳ ಎತ್ತರವಾಗಿದ್ದನು.


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು? ಎಂದು ನಿನಗೆ ತಿಳಿಯದೋ ಎಂದು ಪತ್ರವನ್ನು ದೂತರ ಮೂಲಕ ಕಳುಹಿಸಿದ.’”


ಬಾಬೆಲಿನವರು ಸುಕ್ಕೋತ್ಬೆನೋತ್ ನನ್ನೂ, ಕೂತದವರು ನೇರ್ಗೆಲ್ ನನ್ನೂ ಹಮಾತಿನವರು ಅಷೀಮನನ್ನು ಮಾಡಿದರು.


ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲರನ್ನು ಸೆರೆಯಾಗಿ ಒಯ್ದ ನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಅಲ್ಲಿಗೆ ಕಳುಹಿಸಿದನು. ಅವರು ಸಮಾರ್ಯ ದೇಶವನ್ನು ಸ್ವತಂತ್ರಪಡಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಮಾಡಿದರು.


ಈ ರೀತಿಯಾಗಿ ಸೊಲೊಮೋನನು ಹಮಾತ್ ಪಟ್ಟಣದ ದಾರಿಯಿಂದ ಐಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲರೂ ಎರಡು ವಾರ ಅಂದರೆ ಹದಿನಾಲ್ಕು ದಿನಗಳ ವರೆಗೆ ತಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.


ಅಷ್ಟರಲ್ಲಿ ಗತ್ ಊರಿನ ಯುದ್ಧವೀರನಾದ ಗೊಲ್ಯಾತನೆಂಬ ಆ ಫಿಲಿಷ್ಟಿಯನು ತನ್ನ ಸೈನ್ಯದಿಂದ ಹೊರಗೆ ಬಂದು ಮುಂಚಿನಂತೆಯೇ ಕೂಗಿದನು. ದಾವೀದನು ಅವನ ಮಾತುಗಳನ್ನು ಕೇಳಿದನು.


ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ, “ಇಸ್ರಾಯೇಲಿನ ದೇವರ ಮಂಜೂಷವನ್ನು ಏನು ಮಾಡೋಣ?” ಎಂದು ಕೇಳಲು ಅವರು, “ಅದನ್ನು ಗತ್ ಊರಿಗೆ ಕಳುಹಿಸಿ ಕೊಡಬೇಕೆಂದು ನಿರ್ಣಯಿಸಿದರು.” ಅವರು ಹಾಗೆಯೇ ಇಸ್ರಾಯೇಲಿನ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.


ದಮಸ್ಕವನ್ನು ಕುರಿತದ್ದು, “ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು.


ಆದ್ದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು, “ನೋಡಿರಿ, ನಮ್ಮನ್ನೂ, ನಮಗೆ ಸೇರಿದವರನ್ನೂ ಕೊಲ್ಲುವುದಕ್ಕೋಸ್ಕರ ಇಸ್ರಾಯೇಲಿನ ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆ” ಎಂದು ಕೂಗಿಕೊಂಡರು.


ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು