Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 6:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ ಮತ್ತು ಉತ್ತಮ ಅಭಿಷೇಕ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬೋಗುಣಿಬಟ್ಟಲುಗಳಲ್ಲಿ ದ್ರಾಕ್ಷಾರಸವನ್ನು ಕುಡಿಯುವವರೇ, ಅತ್ಯುತ್ತಮ ಸುಗಂಧತೈಲಗಳನ್ನು ಲೇಪಿಸಿಕೊಳ್ಳುವವರೇ, ನಿಮಗೆ ಧಿಕ್ಕಾರ! ಏಕೆಂದರೆ ನೀವು ಜೋಸೆಫನ ವಂಶದವರ ವಿನಾಶದ ಬಗ್ಗೆ ನಿಶ್ಚಿಂತರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ, ಉತ್ತಮೋತ್ತಮ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫಿನ ಗಾಯಕ್ಕೆ ಮರುಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಂದವಾದ ಪಾತ್ರೆಗಳಲ್ಲಿ ದ್ರಾಕ್ಷಾರಸ ಕುಡಿಯುವಿರಿ. ಉತ್ತಮವಾದ ಸುಗಂಧತೈಲವನ್ನು ಉಪಯೋಗಿಸುವಿರಿ. ಯೋಸೇಫನ ಕುಟುಂಬದ ನಾಶನದ ಬಗ್ಗೆಯೂ ನೀವು ಬೇಸರಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವು ತುಂಬಿದ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿಯುತ್ತೀರಿ, ಶ್ರೇಷ್ಠವಾದ ಎಣ್ಣೆಗಳಿಂದ ನಿಮ್ಮನ್ನು ಅಭಿಷೇಕಿಸಿಕೊಳ್ಳುತ್ತೀರಿ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನ ಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 6:6
18 ತಿಳಿವುಗಳ ಹೋಲಿಕೆ  

ಯೋಸೇಫನು ಫಲಭರಿತವಾದ ವೃಕ್ಷವು, ಒರತೆಯ ಬಳಿಯಲ್ಲಿರುವ ಫಲವತ್ತಾದ ವೃಕ್ಷವೇ ಆಗಿದ್ದಾನೆ. ಗೋಡೆಯ ಆಚೆಗೆ ಅದರ ರೆಂಬೆಗಳು ಹರಡಿವೆ.


ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ, ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೊ.


ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ. ಒಂದು ಅಂಗ ಗೌರವಿಸಲ್ಪಟ್ಟರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.


ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.


ಆಗ ಮರಿಯಳು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತ್ತು.


ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವು ಇಟ್ಟ ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ; ದಂಡಹಾಕಿಸಿಕೊಂಡವರು ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ.


ಯೆಹೋವನು ನನಗೆ, “ನೀನು ಅನ್ಯದೇವತೆಗಳ ಕಡೆಗೆ ತಿರುಗಿಕೊಂಡು, ದೀಪದ್ರಾಕ್ಷೆಯ ಅಡೆಗಳನ್ನು ಪ್ರೀತಿಸುವ ಇಸ್ರಾಯೇಲರನ್ನು ಯೆಹೋವನು ಪ್ರೀತಿಸುವ ಪ್ರಕಾರ, ನೀನು ಜಾರನಿಗೆ ಪ್ರಿಯಳೂ, ವ್ಯಭಿಚಾರಾಸಕ್ತಳೂ ಆದ ಹೆಂಗಸನ್ನು ಪ್ರೀತಿಸುತ್ತಾ ಬಾ” ಎಂದು ಅಪ್ಪಣೆ ಕೊಟ್ಟನು.


ಯೆಹೋವನು ಕೂಗಿ ಅವನಿಗೆ, “ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು” ಎಂದು ಅಪ್ಪಣೆಕೊಟ್ಟನು.


ಅಯ್ಯೋ, ಆ ದಿನವು ಘೋರವಾದದ್ದು, ಅಂಥ ದಿನ ಮತ್ತೊಂದಿಲ್ಲ, ಅದು ಯಾಕೋಬರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.”


ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೇ ಅಂಚೆಯವರು ರಾಜಾಜ್ಞೆಯ ಮೇರೆಗೆ ಶೀಘ್ರವಾಗಿ ಹೊರಟರು. ಅರಸನಾದರೋ ಹಾಮಾನನನೊಡನೆ ಮದ್ಯಪಾನ ಮಾಡುವುದಕ್ಕೆ ಕುಳಿತುಕೊಂಡನು. ಅತ್ತ ಶೂಷನ್ ಪಟ್ಟಣದಲ್ಲಿ ತಳಮಳ ಉಂಟಾಯಿತು.


ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ.


ಸಮಾರ್ಯ ಬೆಟ್ಟದಲ್ಲಿನ, ಬಾಷಾನಿನ ಕೊಬ್ಬಿದ ಹಸುಗಳಂತಿರುವ ಸ್ತ್ರೀಯರೇ, ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಜಜ್ಜಿ, ನೀವು ನಿಮ್ಮ ಪತಿಗಳಿಗೆ, “ಪಾನಗಳನ್ನು ತರಿಸಿ, ಕುಡಿಯೋಣ” ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.


ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತು ಹೋದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ತಿರುವ ಹೂವಿನ ಪಾಡೇ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು