ಆಮೋಸ 7:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು. ಹಿಂಗಾರು ಮಳೆಬಿದ್ದು ಪೈರು ಸೊಂಪಾಗುವುದಕ್ಕೆ ಆರಂಭವಾದಾಗ ಅಂದರೆ ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಯೆಹೋವನು ಮಿಡತೆಗಳನ್ನು ಉಂಟುಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಒಡೆಯರಾದ ಸರ್ವೇಶ್ವರ ನನಗೆ ತೋರಿಸಿದ ದರ್ಶನ ಇದು: ಹಿಂಗಾರು ಮಳೆ ಬಿದ್ದಿತ್ತು. ಪೈರು ಸೊಂಪಾಗಿ ಬೆಳೆಯಲು ಆರಂಭಿಸಿತ್ತು. ಈಗಾಗಲೇ ರಾಜಾದಾಯದ ಹುಲ್ಲಿನ ಕೊಯಿಲು ಮುಗಿದು ಮತ್ತೆ ಹುಲ್ಲು ಬೆಳೆಯುತ್ತಿತ್ತು. ಆಗ ಸರ್ವೇಶ್ವರ ಮಿಡತೆಗಳ ಗುಂಪೊಂದನ್ನು ಹೊರಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು - ಹಿಂಗಾರು ಮಳೆಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ, ಅಂದರೆ ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಆಹಾ, ಯೆಹೋವನು ವಿುಡತೆಗಳನ್ನು ಉಂಟುಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ನನಗೆ ಇದನ್ನು ತೋರಿಸಿದನು: ಎರಡನೇ ಬೆಳೆಯು ಬೆಳೆಯಲಾರಂಭಿಸಿದ ಕಾಲದಲ್ಲಿ ಆತನು ಮಿಡತೆಗಳನ್ನು ತಯಾರು ಮಾಡುತ್ತಿದ್ದನು. ಅರಸನು ಮೊದಲನೇ ಬೆಳೆಯನ್ನು ರಾಶಿಮಾಡಿಸಿಕೊಂಡು ಹೋದ ನಂತರದ ಬೆಳೆ ಇದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಸಾರ್ವಭೌಮ ಯೆಹೋವ ದೇವರು ನನಗೆ ಹೀಗೆ ತೋರಿಸಿದರು: ಹಿಂಗಾರು ಮಳೆ ಬಿದ್ದು, ಪೈರು ಸೊಂಪಾಗುವುದಕ್ಕೆ ಆರಂಭವಾದಾಗ, ಅಂದರೆ ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ, ಬೆಳೆಯು ವೃದ್ಧಿಯಾಗುತ್ತಿದ್ದಾಗ, ಇಗೋ ಯೆಹೋವ ದೇವರು, ಮಿಡತೆಗಳನ್ನು ಉಂಟುಮಾಡಿದರು. ಅಧ್ಯಾಯವನ್ನು ನೋಡಿ |