ಆಮೋಸ 7:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇಸಾಕನ ವಂಶದವರ ಪೂಜಾಸ್ಥಳಗಳು ಹಾಳಾಗುವವು, ಇಸ್ರಾಯೇಲಿನ ಪವಿತ್ರಾಲಯಗಳು ಪಾಳುಬೀಳುವವು, ಮತ್ತು ನಾನು ಕತ್ತಿ ಹಿಡಿದು ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇಸಾಕನ ವಂಶದವರ ಎತ್ತರವಾದ ಪೂಜಾಮಂದಿರಗಳು ನೆಲಸಮವಾಗುವುವು. ಇಸ್ರಯೇಲಿನ ಪವಿತ್ರಾಲಯಗಳು ಪಾಳುಬೀಳುವುವು. ಯಾರೊಬ್ಬಾಮನ ಮನೆತನ ಕತ್ತಿಗೆ ತುತ್ತಾಗುವುದು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇಸಾಕನ ವಂಶದವರ ಪೂಜಾಸ್ಥಳಗಳು ಹಾಳಾಗುವವು, ಇಸ್ರಾಯೇಲಿನ ಪವಿತ್ರಾಲಯಗಳು ಬೀಡುಬೀಳುವವು; ನಾನು ಕತ್ತಿಹಿರಿದು ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಇಸಾಕನ ವೇದಿಕೆಗಳೆಲ್ಲಾ ನಾಶವಾಗುವದು. ಇಸ್ರೇಲಿನ ಪವಿತ್ರ ಸ್ಥಳಗಳೆಲ್ಲಾ ಬಂಡೆಯ ರಾಶಿಯಾಗಿ ಮಾರ್ಪಡುವವು. ಯಾರೊಬ್ಬಾಮನ ಕುಟುಂಬದ ಮೇಲೆ ಆಕ್ರಮಣ ಮಾಡಿ ಅವರನ್ನು ಸಂಹರಿಸುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ಇಸಾಕನ ಉನ್ನತ ಪೂಜಾಸ್ಥಳಗಳು ನಾಶವಾಗುವುವು. ಇಸ್ರಾಯೇಲಿನ ಪರಿಶುದ್ಧ ಸ್ಥಳಗಳು ಹಾಳಾಗುವುವು. ನಾನು ಖಡ್ಗದೊಂದಿಗೆ ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು.” ಅಧ್ಯಾಯವನ್ನು ನೋಡಿ |