Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 8:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಬಡವರನ್ನು ಬೆಳ್ಳಿಗೂ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಗಳ ಜೋಡಿಗೂ ಕೊಂಡುಕೊಳ್ಳೋಣ; ಗೋದಿಯ ನುಚ್ಚುನ್ನು ಮಾರಿಬಿಡೋಣ” ಎಂದು ಹೇಳುತ್ತೀರಿ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ದವಸಧಾನ್ಯಗಳನ್ನು ಮಾರಬೇಕಲ್ಲ, ಈ ಅಮಾವಾಸ್ಯೆ ತೀರುವುದು ಯಾವಾಗ? ಗೋದಿಯ ವ್ಯಾಪಾರ ಮಾಡಬೇಕಾಗಿದೆ. ಸಬ್ಬತ್ ದಿನ ಕಳೆಯುವುದು ಯಾವಾಗ? ಕೊಳಗವನ್ನು ಕಿರಿದು ಮಾಡೋಣ, ತೊಲವನ್ನು ಹಿರಿದು ಮಾಡೋಣ, ಕಳ್ಳತಕ್ಕಡಿಯನ್ನು ಬಳಸೋಣ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಬಡವನನ್ನು ಬೆಳ್ಳಿಗೆ, ದಿಕ್ಕಿಲ್ಲದವನನ್ನು ಜೊತೆ ಕೆರಕ್ಕೆ ಕೊಂಡುಕೊಳ್ಳೋಣ; ಗೋದಿಯ ನುಚ್ಚುನುಸಿಯನ್ನು ಮಾರೋಣ ಎಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ವರ್ತಕರಾದ ನೀವು ಹೇಳುವುದೇನೆಂದರೆ, “ಅಮಾವಾಸ್ಯೆ ಯಾವಾಗ ಮುಗಿಯುವುದು? ಆಗ ನಾವು ಧಾನ್ಯವನ್ನು ಮಾರಾಟ ಮಾಡುವೆವು. ಸಬ್ಬತ್ ಯಾವಾಗ ಮುಗಿಯುವುದು? ಆಗ ನಾವು ನಮ್ಮ ಗೋದಿಯನ್ನು ಮಾರಾಟ ಮಾಡಲು ತರುವೆವು. ಅದರ ಬೆಲೆಯನ್ನು ಅಧಿಕಗೊಳಿಸಿ ಅಳತೆಯನ್ನು ಕಡಿಮೆ ಮಾಡುವೆವು. ತ್ರಾಸನ್ನು ಕಡಿಮೆ ಮಾಡಿ ಜನರಿಗೆ ಮೋಸ ಮಾಡುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ಹೇಳುವುದೇನೆಂದರೆ, “ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಯಾವಾಗ ಕೊನೆಗೊಳ್ಳುತ್ತದೆ? ಗೋಧಿಯನ್ನು ಮಾರುವ ಹಾಗೆ ಸಬ್ಬತ್ ದಿನವು ಯಾವಾಗ ಮುಗಿಯುವುದು? ಕೊಳಗವನ್ನು ಚಿಕ್ಕದಾಗಿಯೂ ತೊಲಗಳನ್ನು ದೊಡ್ಡದಾಗಿಯೂ, ಕಳ್ಳತಕ್ಕಡಿಗಳನ್ನು ಮೋಸಕ್ಕಾಗಿಯೂ ಮಾಡೋಣವೆಂದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 8:5
24 ತಿಳಿವುಗಳ ಹೋಲಿಕೆ  

ಕಾನಾನು! ಅದರ ಕೈಯಲ್ಲಿ ಮೋಸದ ತ್ರಾಸು ಇದೆ; ಕಸಕೊಳ್ಳಬೇಕೆಂಬದೇ ಅದರ ಆಶೆ.


ತಕ್ಕಡಿ, ತೂಕದ ಕಲ್ಲು, ಕೊಳಗ ಮತ್ತು ಸೇರು ಇವುಗಳೆಲ್ಲಾ ನ್ಯಾಯವಾಗಿಯೇ ಇರಬೇಕು. ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.


ವ್ಯರ್ಥವಾದ ಕಾಣಿಕೆಗಳನ್ನು ಇನ್ನು ತರಬೇಡಿ; ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಹುಣ್ಣಿಮೆಹಬ್ಬ, ಸಬ್ಬತ್ ದಿನ, ಕೂಟ ಪ್ರಕಟಣೆ ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು.


ತೂಕದ ಕಲ್ಲನ್ನು ಹೆಚ್ಚಿಸುವುದು, ತಗ್ಗಿಸುವುದು ಯೆಹೋವನಿಗೆ ಅಸಹ್ಯ, ಮೋಸದ ತಕ್ಕಡಿ ಒಳ್ಳೆಯದಲ್ಲ.


ನ್ಯಾಯದ ಅಳತೆ ಮತ್ತು ತಕ್ಕಡಿಗಳು ಯೆಹೋವನ ಏರ್ಪಾಡು, ಚೀಲದಲ್ಲಿನ ತೂಕದಕಲ್ಲುಗಳೆಲ್ಲಾ ಆತನ ಕೈಕೆಲಸವೇ.


ಮೋಸದ ತಕ್ಕಡಿ ಯೆಹೋವನಿಗೆ ಅಸಹ್ಯ, ನ್ಯಾಯದ ತೂಕ ಆತನಿಗೆ ಸಂತೋಷ.


ಅದಕ್ಕೆ ಅವನು, “ಇದು ಅಮಾವಾಸ್ಯೆಯಲ್ಲ, ಸಬ್ಬತ್ತಲ್ಲ. ಈ ಹೊತ್ತು ಯಾಕೆ ಹೋಗುತ್ತೀ?” ಎಂದನು. ಅದಕ್ಕೆ ಆಕೆಯು, “ಎಲ್ಲವು ಸರಿಯೇ” ಎಂದು ಹೇಳಿದಳು.


ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯು, ಹಬ್ಬಗಳಲ್ಲಿಯು, ಅಮಾವಾಸ್ಯೆಗಳಲ್ಲಿಯು ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ಆ ತುತ್ತೂರಿಯ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು, ನಾನೇ ನಿಮ್ಮ ದೇವರಾದ ಯೆಹೋವನು.”


ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ, ಸ್ವಇಚ್ಛೆಯಂತೆ ನಡೆಯದೆ, ಸ್ವಕಾರ್ಯದಲ್ಲಿ ನಿರತರಾಗದೆ, ಹರಟೆಹರಟದೆ, ಯೆಹೋವನ ಸಬ್ಬತ್ ಎಂಬ ಪರಿಶುದ್ಧದಿನವು ಉಲ್ಲಾಸಕರವೂ, ಮಾನ್ಯವೂ ಆದದ್ದೆಂದು ಘನಪಡಿಸಿದರೆ,


ಹೀಗಿರುವುದರಿಂದ, ಅನ್ನಪಾನಗಳ ವಿಷಯದಲ್ಲಿಯೂ ಅಥವಾ ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ.


ಅಯ್ಯೋ, ಈ ಸೇವೆಯು ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ತಾತ್ಸಾರ ಮಾಡುತ್ತೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಕಳವಾದ ಪಶುವನ್ನೂ, ಊನವಾದದ್ದನ್ನೂ, ರೋಗ ಹಿಡಿದ ಪ್ರಾಣಿಯನ್ನು ತಂದೊಪ್ಪಿಸುತ್ತೀರಿ. ನಾನು ನಿಮ್ಮ ಕೈಯಿಂದ ಸ್ವೀಕರಿಸುವುದಿಲ್ಲ” ಇದು ಯೆಹೋವನ ನುಡಿ.


“ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ: ನಾನು ನೇಮಿಸಿದ ಪವಿತ್ರ ಸಬ್ಬತ್ ದಿನಗಳನ್ನು ನೀವು ತಪ್ಪದೇ ಆಚರಿಸಬೇಕು. ನಿಮ್ಮನ್ನು ಶುದ್ಧಿಪಡಿಸುವ ಯೆಹೋವನು ನಾನೇ ಎಂದು ನೀವು ತಿಳಿದುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರ ಮಧ್ಯ ಇರುವ ಗುರುತು.


ಅದಕ್ಕೆ ದಾವೀದನು, “ನಾಳೆ ಅಮಾವಾಸ್ಯೆ. ನಾನು ಅರಸನ ಪಂಕ್ತಿಯಲ್ಲಿ ಊಟಮಾಡಬೇಕಾಗಿರುವುದು. ನೀನು ಅಪ್ಪಣೆಕೊಟ್ಟರೆ ನಾನು ಈಗಲೇ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು.


ನಾನು, “ಏನದು?” ಎಂದು ಕೇಳಿದ್ದಕ್ಕೆ ಅವನು, “ಇದು ಅಳೆಯುವ ಬುಟ್ಟಿ” ಎಂದನು. ಇದಲ್ಲದೆ ಅವನು, “ಇದೇ ಸಮಸ್ತ ಭೂಮಿಯಲ್ಲಿಯ ಜನರ ಅಧರ್ಮವು” ಎಂದನು.


ಆಗ ದೂತನು ಹೇಳಿದ್ದೇನೆಂದರೆ, “ಇದು ದುಷ್ಟತ್ವವು” ಎಂದು ಹೇಳಿ ಅವಳನ್ನು ಬುಟ್ಟಿಯೊಳಗೆ ಪುನಃ ಅದುಮಿ ಆ ಬುಟ್ಟಿಯ ಮುಚ್ಚಳವನ್ನು ಮುಚ್ಚಿದನು.


ಎಫ್ರಾಯೀಮು, “ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ; ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ” ಎಂದು ಅಂದುಕೊಳ್ಳುತ್ತದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು