ಆಮೋಸ 8:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆ ಕೃತ್ಯಗಳಿಗೆ ದೇಶವು ನಡುಗಬೇಕಾಗುವುದಲ್ಲವೇ, ಅದರ ನಿವಾಸಿಗಳೆಲ್ಲರೂ ದುಃಖಿಸುವರಲ್ಲವೇ? ದೇಶವೆಲ್ಲಾ ನೈಲ್ ನದಿಯಂತೆ ಉಬ್ಬಿ ಅಲ್ಲಕಲ್ಲೋಲವಾಗುವುದು, ಐಗುಪ್ತದ ನದಿಯ ಹಾಗೆಯೇ, ಇಳಿದು ಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವರ ದುಷ್ಕೃತ್ಯಗಳ ನಿಮಿತ್ತವೇ ನಾಡು ಕಂಪಿಸುವುದು; ನಿವಾಸಿಗಳೆಲ್ಲರು ದುಃಖಿಸುವರು. ನಾಡೆಲ್ಲವು ನೈಲ್ ನದಿಯಂತೆ ಉಬ್ಬುವುದು. ಅಲ್ಲೋಲಕಲ್ಲೋಲವಾಗಿ ಈಜಿಪ್ಟಿನ ನದಿಯಂತೆ ಕುಗ್ಗಿ ಕರಗಿಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆ ಕೃತ್ಯಗಳಿಗೆ ದೇಶವು ನಡುಗಬೇಕಾಗುವದಲ್ಲವೆ, ಅದರ ನಿವಾಸಿಗಳೆಲ್ಲರೂ ದುಃಖಿಸುವರಲ್ಲವೆ; ದೇಶವೆಲ್ಲಾ ನೈಲ್ ನದಿಯಂತೆ ಉಬ್ಬಿ ಅಲ್ಲಕಲ್ಲೋಲವಾಗುವದು, ಐಗುಪ್ತದ ನದಿಯ ಹಾಗೆಯೇ ಇಳಿದುಹೋಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅದರ ಸಲುವಾಗಿ ಇಡೀ ದೇಶವು ಅಲುಗಾಡುವದು. ಸತ್ತವರಿಗಾಗಿ ದೇಶದ ಪ್ರತಿ ನಿವಾಸಿಯೂ ರೋಧಿಸುವನು. ಈಜಿಪ್ಟಿನ ನೈಲ್ ನದಿಯ ರೀತಿಯಲ್ಲಿ ದೇಶವು ತಿರುಗುಮುರುಗಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ಇದಕ್ಕಾಗಿ ದೇಶವು ನಡುಗುವುದಿಲ್ಲವೇ? ಅದರಲ್ಲಿ ವಾಸಿಸುವವರೆಲ್ಲರೂ ಗೋಳಾಡುವುದಿಲ್ಲವೇ? ದೇಶವೆಲ್ಲಾ ನೈಲ್ ನದಿಯ ಪ್ರವಾಹದಂತೆ ಉಬ್ಬಿ ಅಲ್ಲೊಲಕಲ್ಲೋಲವಾಗುವುದು, ಈಜಿಪ್ಟಿನ ನದಿಯಂತೆ ಇಳಿದುಹೋಗುವದು. ಅಧ್ಯಾಯವನ್ನು ನೋಡಿ |