Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಆತನು ಹೀಗೆ ಅಪ್ಪಣೆ ಕೊಟ್ಟನು, “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ. ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳುವ ಹಾಗೆ ಮಾಡಿ, ಉಳಿದವರನ್ನು ಖಡ್ಗದಿಂದ ಸಂಹರಿಸುವೆನು. ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಗ ಸರ್ವೇಶ್ವರಸ್ವಾಮಿ ಬಲಿಪೀಠದ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಅವರು ನನಗೆ ಹೀಗೆಂದು ಅಪ್ಪಣೆಮಾಡಿದರು: “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗೆ ಬಲವಾಗಿ ಹೊಡೆ. ಅವು ಕುಸಿದು ಎಲ್ಲರ ತಲೆಯ ಮೇಲೆ ಬೀಳಲಿ. ಅಳಿದುಳಿದವರನ್ನು ಖಡ್ಗಕ್ಕೆ ತುತ್ತಾಗಿಸುವೆನು. ಅವರಲ್ಲಿ ಯಾರೂ ಓಡಿಹೋಗರು; ಯಾರೂ ತಪ್ಪಿಸಿಕೊಳ್ಳರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವದನ್ನು ಕಂಡೆನು; ಆತನು ಹೀಗೆ ಅಪ್ಪಣೆಕೊಟ್ಟನು - ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ; ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳಿಸು; ಉಳಿದವರನ್ನು ಖಡ್ಗದಿಂದ ಸಂಹರಿಸುವೆನು; ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯಜ್ಞವೇದಿಕೆಯ ಬಳಿಯಲ್ಲಿ ನನ್ನ ಒಡೆಯನು ನಿಂತಿರುವುದನ್ನು ಕಂಡೆನು. ಆತನು ಹೇಳಿದ್ದೇನೆಂದರೆ, “ಸ್ತಂಭಗಳ ಮೇಲೆ ಹೊಡೆಯಿರಿ, ಆಗ ಕಟ್ಟಡವು ಹೊಸ್ತಿಲಿನ ತನಕ ಕಂಪಿಸುವದು. ಸ್ತಂಭಗಳು ಜನರ ತಲೆಗಳ ಮೇಲೆ ಕುಸಿದುಬೀಳುವಂತೆ ಮಾಡಿರಿ. ಅದರಿಂದ ಸಾಯದೆ ಉಳಿಯುವವರನ್ನು ನಾನು ಖಡ್ಗದಿಂದ ಸಾಯಿಸುವೆನು. ಅದರಿಂದ ತಪ್ಪಿಸಿಕೊಂಡು ಓಡಿಹೋಗಲು ಒಬ್ಬನು ಪ್ರಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಒಬ್ಬನಾದರೂ ತಪ್ಪಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕರ್ತದೇವರು ಬಲಿಪೀಠದ ಪಕ್ಕದಲ್ಲಿ ನಿಂತಿರುವುದನ್ನು ನಾನು ಕಂಡೆನು. ಅವರು ಹೇಳಿದ್ದೇನೆಂದರೆ: “ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು, ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದುಬಿಡು. ಅವರಲ್ಲಿ ಉಳಿದವರನ್ನು ಖಡ್ಗದಿಂದ ಕೊಲ್ಲುವೆನು. ಅವರಲ್ಲಿ ಓಡಿಹೋಗುವವನು ಓಡಿಹೋಗಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:1
28 ತಿಳಿವುಗಳ ಹೋಲಿಕೆ  

ಆಹಾ, ಆತನು ತನ್ನ ವೈರಿಗಳ ಶಿರಸ್ಸುಗಳನ್ನೂ, ಸ್ವೇಚ್ಛೆಯಿಂದ ಪಾಪದಲ್ಲಿ ಪ್ರವರ್ತಿಸುವವರ ತುಂಬುಗೂದಲಿನ ತಲೆಗಳನ್ನೂ ಒಡೆದು ನಿರ್ಮೂಲ ಮಾಡುವನು.


ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ, ನಾನು ಮೊದಲನೆಯವನೂ, ಕಡೆಯವನೂ,


ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.


ನಿನ್ನ ಅಭಿಷಿಕ್ತನಿಗಾಗಿಯೂ ಮತ್ತು ನಿನ್ನ ಪ್ರಜೆಯ ರಕ್ಷಣೆಗಾಗಿಯೂ ನೀನು ಯಾವಾಗಲೂ ಮುಂದಾಗಿರುತ್ತಿ; ದುಷ್ಟರ ಮನೆಯ ಮುಖ್ಯಸ್ಥರನ್ನು ಸದೆಬಡೆದು ಅವರ ಕುಟುಂಬಗಳನ್ನು ಬುಡಸಮೇತವಾಗಿ ಜನರ ಮುಂದೆ ಬೆತ್ತಲೆಯಾಗಿ ಮಾಡುವಿ. ಸೆಲಾ.


“ನಾನು ಇಸ್ರಾಯೇಲಿನ ದ್ರೋಹಗಳಿಗಾಗಿ ಅವರನ್ನು ಶಿಕ್ಷಿಸುವ ದಿನಗಳಲ್ಲಿ, ಬೇತೇಲಿನ ಯಜ್ಞವೇದಿಗಳನ್ನು ಧ್ವಂಸಮಾಡುವೆನು. ಯಜ್ಞವೇದಿಯ ಕೊಂಬುಗಳು ಕಡಿಯಲ್ಪಟ್ಟು ನೆಲದ ಮೇಲೆ ಉರುಳುವವು.


ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ಕರ್ತನು ಉನ್ನತೋನ್ನತವಾಗಿ ಸಿಂಹಾಸನಾರೂಢನಾಗಿರುವುದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಆಲಯದಲ್ಲೆಲ್ಲಾ ಹರಡಿತ್ತು.


ಇದಲ್ಲದೆ ಯೋಹಾನನು ಸಾಕ್ಷಿ ಕೊಟ್ಟು ಹೇಳಿದ್ದೇನೆಂದರೆ, “ದೇವರಾತ್ಮನು ಪರಲೋಕದಿಂದ ಪಾರಿವಾಳದಂತೆ ಇಳಿಯುವುದನ್ನು ಮತ್ತು ಆತನ ಮೇಲೆ ನೆಲೆಗೊಂಡಿರುವುದನ್ನು ನಾನು ಕಂಡೆನು.


ಜನಾಂಗಗಳ ಪಶುಗಳೆಲ್ಲಾ ಮಂದೆಮಂದೆಯಾಗಿ ಅದರ ಮಧ್ಯದಲ್ಲಿ ಮಲಗಿಕೊಳ್ಳುವವು; ಕೊಕ್ಕರೆಯೂ, ಮುಳ್ಳುಹಂದಿಯೂ ಹಟ್ಟಿಗಳಲ್ಲಿ ವಾಸಮಾಡಿಕೊಳ್ಳುವವು. ಗೂಬೆಯು ಕಿಟಕಿಗಳಲ್ಲಿ ಮನೆಕಂಬಗಳ ಮೇಲೆ ಚಿಲಿಪಿಲಿ ಗಾನವು ತಂಗುವವು; ಕಾಗೆಗಳ ಕೂಗು ಹೊಸ್ತಿಲುಗಳಲ್ಲಿ ಕೇಳುವುದು; ದೇವದಾರು ಹಲಿಗೆಯ ಹೊದಿಕೆಯು ಕೀಳಲ್ಪಡುವುದು.


ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಅಂಗಳದಲ್ಲೆಲ್ಲಾ ವ್ಯಾಪಿಸಿತ್ತು.


ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರು ಮಂದಿ ಪುರುಷರು ಉತ್ತರ ಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ಮಸಿಕುಡಿಕೆಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ತಾಮ್ರದ ಯಜ್ಞವೇದಿಯ ಪಕ್ಕದಲ್ಲಿ ನಿಂತುಕೊಂಡರು.


ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲೂ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡಾಗ ನಾನು ಅಡ್ಡಬಿದ್ದೆ; ಮಾತನಾಡುವಾತನ ವಾಣಿಯನ್ನು ಕೇಳಿದೆ.


ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು; ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು; ನಾನು ದಂಡನೆಯ ವರ್ಷವನ್ನು ಮೋವಾಬಿಗೆ ಬರಮಾಡುವೆನಷ್ಟೆ. ಇದು ಯೆಹೋವನ ನುಡಿ.”


ನೀವು, ‘ಬೇಡವೇ ಬೇಡ, ಕುದುರೆಗಳ ಮೇಲೆ ಓಡುವೆವು’ ಎಂದುಕೊಂಡಿದ್ದರಿಂದ ನೀವು ಓಡಿಯೇ ಹೋಗುವಿರಿ, ನೀವು, ‘ವೇಗವಾಗಿ ಸವಾರಿ ಮಾಡುವೆವು’ ಎಂದುಕೊಂಡಿದ್ದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು.


ಅದಕ್ಕೆ ಮಿಕಾಯೆಹುವು, “ಅದಿರಲಿ, ಯೆಹೋವನ ವಾಕ್ಯವನ್ನು ಕೇಳಿರಿ, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತಿದ್ದನ್ನೂ ಕಂಡೆನು.


ಮಧ್ಯಾಹ್ನದ ಹೊತ್ತಿನಲ್ಲಿ ಪರಲೋಕದಿಂದ ಒಂದು ಬೆಳಕು ನನ್ನ ಸುತ್ತಲೂ ಮತ್ತು ನನ್ನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರ ಸುತ್ತಲೂ ಸೂರ್ಯನ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವುದನ್ನು ನಾನು ಕಂಡೆನು.


ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು.


ಕರ್ತನು, “ನಾನು ಅವರನ್ನು ಬಾಷಾನಿನಿಂದಲೂ, ಸಮುದ್ರ ತಳದಿಂದಲೂ ಹಿಡಿದು ತರುವೆನು.


ಆದಕಾರಣ ಯೆಹೋವನೆಂಬ ನಾನು ಹೀಗೆನ್ನುತ್ತೇನೆ, ‘ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು.


ಆಗ ನೀವು ಹೆದರುತ್ತಿರುವ ಖಡ್ಗವು ಐಗುಪ್ತದಲ್ಲಿಯೂ ನಿಮ್ಮನ್ನು ಹಿಂದಟ್ಟಿ ಹಿಡಿಯುವುದು, ನೀವು ಅಂಜುತ್ತಿರುವ ಕ್ಷಾಮವು ಅಲ್ಲಿಯೂ ನಿಮ್ಮ ಬೆನ್ನ ಹತ್ತುವುದು; ಅಲ್ಲೇ ಸಾಯುವಿರಿ.


ಅವರ ಮೇಲೆ ಕೋಪ ದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ, ಬೆಂಕಿಯು ಅವರನ್ನು ನುಂಗಿಬಿಡುವುದು; ನಾನು ಅವರ ಮೇಲೆ ಕೋಪ ದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.


‘ನಿನ್ನ ಹೆಂಡತಿಯು ಈ ಪಟ್ಟಣದಲ್ಲಿ ಸೂಳೆಯಾಗುವಳು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗದಿಂದ ಹತರಾಗುವರು; ನಿನ್ನ ದೇಶವನ್ನು ಶತ್ರುಗಳು ನೂಲಿನಿಂದ ವಿಭಾಗಿಸಿಕೊಳ್ಳುವರು; ನೀನಂತೂ ಅಜ್ಞಾತವಾದ ದೇಶದಲ್ಲಿ ಸಾಯುವಿ, ಇಸ್ರಾಯೇಲರು ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವುದು ಖಂಡಿತ’” ಎಂಬುದಾಗಿ ಯೆಹೋವನು ಹೇಳಿದನು.


ಆ ಕಾಲದಲ್ಲಿ ನಾನು ದೀಪಗಳನ್ನು ಹಿಡಿದು, ಯೆರೂಸಲೇಮನ್ನೆಲ್ಲಾ ಹುಡುಕಿಬಿಡುವೆನು; ಯೆಹೋವನು ಮೇಲನ್ನಾಗಲಿ, ಕೇಡನ್ನಾಗಲಿ ಮಾಡನು ಎಂದು ಮನಸ್ಸಿನೊಳಗೆ ಅಂದುಕೊಳ್ಳುವವರಾಗಿ, ಮಡ್ಡಿಯಂತೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನು ದಂಡಿಸುವೆನು.


ಆಗ ಯೆಹೋಶುವನು ಅವರಿಗೆ “ಆ ಗವಿಯ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿ ಕಾಯುವುದಕ್ಕೆ ಕಾವಲುಗಾರರನ್ನು ಇಡಿರಿ. ನೀವಾದರೂ ಅಲ್ಲೇ ನಿಂತುಕೊಳ್ಳಬೇಡಿ. ಬೇಗನೆ ಹಿಂದಟ್ಟಿ ಹಿಂದೆ ಬರುವ ಶತ್ರುಗಳನ್ನು ಹತಮಾಡುತ್ತಾ ಹೋಗಿರಿ.


ಇಸಾಕನ ವಂಶದವರ ಪೂಜಾಸ್ಥಳಗಳು ಹಾಳಾಗುವವು, ಇಸ್ರಾಯೇಲಿನ ಪವಿತ್ರಾಲಯಗಳು ಪಾಳುಬೀಳುವವು, ಮತ್ತು ನಾನು ಕತ್ತಿ ಹಿಡಿದು ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು