ಆಮೋಸ 9:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ, ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದದ್ದನ್ನು ಎಬ್ಬಿಸಿ, ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸರ್ವೇಶ್ವರ ಇಂತೆನ್ನುತ್ತಾರೆ: “ದಿನ ಬರಲಿದೆ. ಅಂದು ಬಿದ್ದುಹೋಗಿರುವ ದಾವೀದನ ಗುಡಾರವನ್ನು ಮರಳಿ ಎಬ್ಬಿಸುವೆನು. ಅದರ ಬಿರುಕುಗಳನ್ನು ಮುಚ್ಚುವೆನು. ಹಾಳಾದದ್ದನ್ನು ಎತ್ತಿ ನಿಲ್ಲಿಸುವೆನು. ಮೊದಲು ಇದ್ದಂತೆಯೇ ಪುನಃ ನಿರ್ಮಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ದಿನದಲ್ಲಿ ನಾನು ದಾವೀದನ ಬಿದ್ದು ಹೋಗಿರುವ ಗುಡಿಸಲನ್ನು ಎತ್ತಿ ಅದರ ಕಂಡಿಗಳನ್ನು ಮುಚ್ಚುವೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ದಾವೀದನ ಗುಡಾರವು ಕುಸಿದುಬಿದ್ದಿದೆ. ಆದರೆ ಆ ದಿವಸಗಳಲ್ಲಿ ತಿರುಗಿ ಅದನ್ನು ಮೇಲಕ್ಕೆತ್ತುವೆನು. ಗೋಡೆಯಲ್ಲಿರುವ ರಂಧ್ರಗಳನ್ನು ನಾನು ಸರಿಪಡಿಸುವೆನು. ಬಿದ್ದುಹೋದ ಕಟ್ಟಡಗಳನ್ನು ತಿರುಗಿ ಕಟ್ಟುವೆನು. ಮುಂಚೆ ಹೇಗಿತ್ತೋ ಹಾಗೆಯೇ ಇರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆ ದಿನದಲ್ಲಿ, ಬಿದ್ದುಹೋದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಮುರಿದ ಗೋಡೆಗಳನ್ನು ಸರಿಪಡಿಸುತ್ತೇನೆ. ಮತ್ತು ಅದರ ಅವಶೇಷಗಳನ್ನು ಪುನಃಸ್ಥಾಪಿಸಿ ಮತ್ತು ಅದನ್ನು ಮೊದಲಿನಂತೆ ಪುನಃ ನಿರ್ಮಿಸುವೆನು. ಅಧ್ಯಾಯವನ್ನು ನೋಡಿ |