Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 9:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪಾತಾಳದವರೆಗೆ ತೋಡಿಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು, ಸ್ವರ್ಗದ ತನಕ ಹತ್ತಿದರೂ ಅಲ್ಲಿಂದಲೂ ಅವರನ್ನು ಇಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವರು ಪಾತಾಳಕ್ಕೆ ಇಳಿದುಹೋದರೂ ಅಲ್ಲಿಂದ ಅವರನ್ನು ಎಳೆದುತರುವೆನು. ಆಕಾಶಕ್ಕೆ ಹತ್ತಿಹೋದರೂ ಅಲ್ಲಿಂದ ಇಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪಾತಾಳದವರೆಗೆ ತೋಡಿಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು; ಸ್ವರ್ಗದ ತನಕ ಹತ್ತಿದರೇನು, ಅಲ್ಲಿಂದಲೂ ಅವರನ್ನಿಳಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಭೂಮಿಯನ್ನು ಅವರು ಅಗೆದು ಅದರೊಳಗೆ ಅವಿತುಕೊಂಡರೆ ಅದರೊಳಗಿಂದ ಅವರನ್ನು ಎಳೆದುಹಾಕುವೆನು. ಆಕಾಶದೊಳಗೆ ಹಾರಿ ತಪ್ಪಸಿಕೊಂಡರೆ ಅಲ್ಲಿಂದಲೂ ನಾನು ಅವರನ್ನು ಎಳೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು ಪಾತಾಳದವರೆಗೂ ಅಗೆದುಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು. ಅವರು ಆಕಾಶಕ್ಕೆ ಏರಿಹೋದರೂ, ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 9:2
15 ತಿಳಿವುಗಳ ಹೋಲಿಕೆ  

ಬಾಬೆಲ್ ಆಕಾಶದ ತನಕ ಬೆಳೆದು ಎತ್ತರವಾಗಿಯೂ ಮತ್ತು ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ, ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು.’ ಇದು ಯೆಹೋವನ ನುಡಿ.”


ನೀನು ಹದ್ದಿನಂತೆ ಮೇಲಕ್ಕೆ ಏರಿದರೂ, ನಿನ್ನ ಗೂಡು ನಕ್ಷತ್ರ ಮಂಡಲದಲ್ಲಿ ನೆಲೆಗೊಂಡಿದ್ದರೂ, ಅಲ್ಲಿಂದ ನಿನ್ನನ್ನು ಇಳಿಸಿಬಿಡುವೆನು. ಇದು ಯೆಹೋವನ ನುಡಿ.


ಯೇಸು ಅವರಿಗೆ, “ಸೈತಾನನು ಮಿಂಚಿನಂತೆ ಆಕಾಶದಿಂದ ಬೀಳುವುದನ್ನು ಕಂಡೆನು.


ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ, ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.”


ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಮನುಷ್ಯರು ಆತನ ಭಯಂಕರ ಕೋಪಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಗವಿಗಳಲ್ಲಿಯೂ, ನೆಲದ ಹಳ್ಳಕೊಳ್ಳಗಳಲ್ಲಿಯೂ ಅಡಗಿಕೊಳ್ಳುವರು.


ಪಾತಾಳವು ದೇವರ ದೃಷ್ಟಿಗೆ ತೆರೆದಿದೆ, ನಾಶಲೋಕವು ಮರೆಯಾಗಿಲ್ಲ.


ಅವನ ಪ್ರತಿಷ್ಠೆಯು ಆಕಾಶಕ್ಕೆ ಏರಿದರೂ, ಅವನ ತಲೆಯು ಮೋಡಗಳಿಗೆ ತಗುಲಿದರೂ,


ಅಧರ್ಮಿಗಳು ಅಡಗಿಕೊಳ್ಳುವುದಕ್ಕೆ, ಅನುಕೂಲವಾದ ಯಾವ ಕತ್ತಲೂ, ಯಾವ ಗಾಢಾಂಧಕಾರವೂ ಇರುವುದಿಲ್ಲ.


“ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲಿ ಸೇರಿಸುವೆನು.


“ನೀರಾವರಿಯ ಯಾವ ಮರಗಳೂ ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು, ತಮ್ಮ ತುದಿಯನ್ನು ಮೋಡಗಳಿಗೆ ತಗುಲಿಸದೆ, ನೀರನ್ನು ಹೀರುತ್ತಲೇ ಇರುವ ದೊಡ್ಡದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು. ಅವೆಲ್ಲಾ ಮರಣದ ಪಾಲಾಗುವುವು, ಅಧೋಲೋಕವೇ ಅವುಗಳಿಗೆ ಗತಿಯಾಗುವುದು; ಪಾತಾಳಕ್ಕೆ ಇಳಿದು ಹೋದ ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವವು.”


ನೀನಾದರೋ, ‘ದೇವರಿಗೆ ಏನು ಗೊತ್ತು? ಕಾರ್ಗತ್ತಲಿನ ಆಚೆಯಿಂದ ನ್ಯಾಯತೀರಿಸಬಲ್ಲನೋ?


ದೇವರು ಅವರಿಗೆ ಅಭಯವನ್ನು ಕೊಟ್ಟಿದ್ದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು