ಆಮೋಸ 9:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಉನ್ನತಲೋಕದಲ್ಲಿ ಉಪ್ಪರಿಗೆಯನ್ನು ಅನೇಕ ಅಂತಸ್ತನ್ನಾಗಿ ಕಟ್ಟಿಕೊಂಡು, ಭೂಲೋಕದ ಮೇಲೆ ಗುಮ್ಮಟವನ್ನು ಸ್ಥಾಪಿಸಿಕೊಂಡಿದ್ದಾನೆ. ಸಮುದ್ರದ ನೀರನ್ನು ಸೇದಿ, ಭೂಮಂಡಲದ ಮೇಲೆ ಹೊಯ್ಯುತ್ತಾನೆ, ಯೆಹೋವನೆಂಬುವುದೇ ಆತನ ನಾಮಧೇಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಉನ್ನತದಲ್ಲಿ ಹಲವು ಉಪ್ಪರಿಗೆಗಳನ್ನು ನಿರ್ಮಿಸುವವ ಆತನೆ ಭುವಿಯಲ್ಲಿ ಗುಮ್ಮಟವನ್ನು ಸ್ಥಾಪಿಸಿಕೊಂಡವನು ಆತನೆ ಸಾಗರದ ನೀರನ್ನು ಸೇದಿ ಧರೆಯ ಮೇಲೆ ಸುರಿಯುವವ ಆತನೆ ಆತನ ನಾಮಧೇಯ ಸರ್ವೇಶ್ವರಸ್ವಾಮಿ ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಉನ್ನತಲೋಕದಲ್ಲಿ ಉಪ್ಪರಿಗೆಯನ್ನು ಅನೇಕ ಅಂತಸ್ತಾಗಿ ಕಟ್ಟಿಕೊಂಡು ಭೂಲೋಕದ ಮೇಲೆ ಗುಮ್ಮಟವನ್ನು ಸ್ಥಾಪಿಸಿಕೊಂಡಿದ್ದಾನೆ; ಸಮುದ್ರದ ನೀರನ್ನು ಕರೆದು ಭೂಮಂಡಲದ ಮೇಲೆ ಹೊಯ್ಯುತ್ತಾನೆ; ಯೆಹೋವನೆಂಬದೇ ಆತನ ನಾಮಧೇಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಹೋವನು ಆಕಾಶದ ಮೇಲೆ ತನಗಾಗಿ ಮೇಲುಪ್ಪರಿಗೆಗಳನ್ನು ಕಟ್ಟಿದನು. ಭೂಮಿಯ ಮೇಲೆ ಆಕಾಶವನ್ನು ಹರಡಿದನು. ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ ಮಳೆಗೆರೆಯುವಂತೆ ಮಾಡುವನು. ಆತನ ಹೆಸರು ಯೆಹೋವ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಕಾಶದಲ್ಲಿ ಉಪ್ಪರಿಗೆಗಳನ್ನು ಕಟ್ಟಿಕೊಂಡು, ಭೂಮಿಯ ಮೇಲೆ ತಮ್ಮ ತಂಡಗಳನ್ನು ಸ್ಥಾಪಿಸಿ, ಸಮುದ್ರದ ನೀರನ್ನು ಕರೆದು, ಅದನ್ನು ಭೂಮಿಯ ಮೇಲೆ ಹೊಯ್ಯುವಂತೆ ಮಾಡುವಾತರು ಅವರೇ. ಅವರ ಹೆಸರು ಯೆಹೋವ ದೇವರು. ಅಧ್ಯಾಯವನ್ನು ನೋಡಿ |