ಆಮೋಸ 9:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರೇ, ನೀವು ನನ್ನ ಗಣನೆಯಲ್ಲಿ ಕೂಷ್ಯರ ಹಾಗಿದ್ದೀರಲ್ಲವೇ? ನಾನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಫಿಲಿಷ್ಟಿಯರನ್ನು ಕಫ್ತೋರಿನಿಂದ ಅರಾಮ್ಯರನ್ನು ಕೀರಿನಿಂದ ಏಕರೀತಿಯಾಗಿ ಬರಮಾಡಲಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ಇಸ್ರಯೇಲಿನ ಜನರೇ, ನನ್ನ ದೃಷ್ಟಿಯಲ್ಲಿ ನೀವಾಗಲಿ ಎಥಿಯೋಪಿಯದವರಾಗಲೀ, ಒಂದೇ ಅಲ್ಲವೆ? ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆತಂದಂತೆ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ, ಅರಾಮ್ಯರನ್ನು ಕೀರ್ ನಾಡಿನಿಂದಲೂ ಕರೆತರಲಿಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ಯರೇ, ನೀವು ನನ್ನ ಗಣನೆಯಲ್ಲಿ ಕೂಷ್ಯರ ಹಾಗಿದ್ದೀರಲ್ಲವೋ; ನಾನು ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ, ಫಿಲಿಷ್ಟಿಯರನ್ನು ಕಫ್ತೋರಿನಿಂದ, ಅರಾಮ್ಯರನ್ನು ಕೀರಿನಿಂದ [ಏಕ ರೀತಿಯಾಗಿ] ಬರಮಾಡಲಿಲ್ಲವೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲೇ, ನೀನು ನನಗೆ ಇಥಿಯೋಪ್ಯದವರಂತಿರುವೆ. ಇಸ್ರೇಲನ್ನು ಈಜಿಪ್ಟ್ ದೇಶದಿಂದ ನಾನು ಹೊರತಂದೆನು. ಕಪ್ತೋರಿನಿಂದ ಫಿಲಿಷ್ಟಿಯರನ್ನು ಹೊರತಂದೆನು ಮತ್ತು ಕೀರ್‌ನಿಂದ ಅರಾಮ್ಯರನ್ನು ತಂದೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಇಸ್ರಾಯೇಲರೇ, ನೀವು ನನಗೆ ಕೂಷ್ಯರ ಮಕ್ಕಳ ಹಾಗಲ್ಲವೇ? ನಾನು ನಿಮ್ಮನ್ನು ಈಜಿಪ್ಟಿನಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ತರಲಿಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |