Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮತ್ತು ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠ ಯಾಜಕನು ನಮಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠಯಾಜಕ ನಮಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದೇವರ ಮನೆಯ ಮೇಲೆ ಅಧಿಕಾರಿಯಾಗಿರುವ ಶ್ರೇಷ್ಠನಾದ ಯಾಜಕನು ನಮಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೇವರ ಮನೆಯನ್ನು ಆಳಲು ನಮಗೊಬ್ಬ ಶ್ರೇಷ್ಠ ಯಾಜಕನಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವುದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ದೆವಾಚ್ಯಾ ಘರಾಚೆ ಅಧಿಕಾರ್ ಚಾಲ್ವುತಲೊ ಎಕ್ ಮೊಟೊ ಯಾಜಕ್ ಅಮ್ಕಾ ಗಾವ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:21
12 ತಿಳಿವುಗಳ ಹೋಲಿಕೆ  

ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.


ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.


ಅಲ್ಲಿಗೆ ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ, ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.


ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.


ಆದರೆ ಒಂದು ವೇಳೆ ನಾನು ತಡಮಾಡಿದರೂ, ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.


ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು