Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಹೀಗಿರುವಲ್ಲಿ, ದೇವರ ಪುತ್ರನನ್ನು ತುಚ್ಛೀಕರಿಸುವವನೂ ತನ್ನನ್ನು ಶುದ್ಧೀಕರಿಸಿದ ಹಾಗು ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವನ್ನು ತೃಣೀಕರಿಸುವವನೂ ವರಪ್ರಸಾದವನ್ನು ತರುವ ಪವಿತ್ರಾತ್ಮ ಅವರನ್ನು ತಿರಸ್ಕರಿಸುವವನೂ ಎಂಥಾ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯಾವನು ದೇವಕುಮಾರನನ್ನು ತುಳಿದು ಒಡಂಬಡಿಕೆಯನ್ನು ಸ್ಥಿರಪಡಿಸಿದಂಥ ತನ್ನನ್ನು ಪವಿತ್ರಮಾಡಿದಂಥ ರಕ್ತವನ್ನು ಅಶುದ್ಧವೆಂದೆಣಿಸಿ ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬದನ್ನು ಯೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯಾವನು ದೇವಪುತ್ರರನ್ನೇ ತುಳಿದು ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಪವಿತ್ರಾತ್ಮ ದೇವರನ್ನು ತಿರಸ್ಕಾರ ಮಾಡಿದ್ದಾನೋ, ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗುವನೆಂಬುದನ್ನು ಯೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಕೊನ್‍ತರಿ ಎಕ್ಲೊ ದೆವಾಚ್ಯಾ ಲೆಕಾಕ್ ತುಡ್ವುನ್ ಕರಾರ್ ಘಟ್ಟ್ ಕರಲ್ಯಾ ಅಪ್ನಾಕ್ ಪವಿತ್ರ್ ಕರಲ್ಯಾ ರಗ್ತಾಕ್ ಅಶುದ್ದ್ ಮನುನ್ಗೆವ್ನ್ ದೆವಾಚಿ ಕುರ್ಪಾ ಹೊವ್ನ್ ಹೊತ್ತ್ಯಾ ಆತ್ಮ್ಯಾಕ್ ಅವಮಾನ್ ಕರಲೊ ರಾಲ್ಯಾರ್ ತೆಕಾ ಕವ್ಡಿ ಮೊಟಿ ಶಿಕ್ಷಾ ಗಾವ್ತಾ ಅಸಿಲ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:29
40 ತಿಳಿವುಗಳ ಹೋಲಿಕೆ  

ಅವರಲ್ಲಿ ತಿರುಗಿ ಮಾನಸಾಂತರವನ್ನು ಹುಟ್ಟಿಸುವುದು ಅಸಾಧ್ಯ, ಯಾಕೆಂದರೆ ಅವರು ತಾವಾಗಿಯೇ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗವಾಗಿ ಅವಮಾನಪಡಿಸುವವರೂ ಆಗಿರುತ್ತಾರೆ.


ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.


ಹೀಗಿರುವುದರಿಂದ ಯಾವನಾದರೂ ಅಯೋಗ್ಯವಾಗಿ ಕರ್ತನ ರೊಟ್ಟಿಯನ್ನು ತಿಂದರೆ ಇಲ್ಲವೆ ಆತನ ಪಾನಪಾತ್ರೆಯಲ್ಲಿ ಪಾನ ಮಾಡಿದರೆ ಅವನು ಕರ್ತನ ದೇಹಕ್ಕೂ ಮತ್ತು ಕರ್ತನ ರಕ್ತಕ್ಕೂ ಸಂಬಂಧಿಸಿದಂತೆ ದ್ರೋಹಮಾಡಿದವನಾಗಿರುವನು.


ಮನುಷ್ಯಕುಮಾರನ ವಿರುದ್ಧ ಮಾತನಾಡುವ ಪ್ರತಿಯೊಬ್ಬನಿಗೆ ಕ್ಷಮಾಪಣೆಯಾಗುವುದು. ಆದರೆ ಪವಿತ್ರಾತ್ಮನನ್ನು ದೂಷಿಸಿದವನಿಗೆ ಕ್ಷಮಾಪಣೆಯಿಲ್ಲ.


ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.


“ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.


ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?


ಹೋತ ಹೋರಿಗಳ ರಕ್ತವೂ ಅಶುದ್ಧರಾದವರ ಮೇಲೆ ಚಿಮುಕಿಸುವ ಕಡಸಿನ ಬೂದಿಯೂ ಶರೀರವನ್ನು ಶುದ್ಧೀಕರಿಸುವುದಾದರೆ,


ಯಾಕೆಂದರೆ ಕರ್ತನ ದೇಹವೆಂದು ವಿವೇಚಿಸದೇ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವುದರಿಂದ ನ್ಯಾಯತೀರ್ಪಿಗೊಳಗಾಗುವನು.


ಒಂದು ಸಾರಿ ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ ದಾನವನ್ನು ಅನುಭವಿಸಿದವರು, ಪವಿತ್ರಾತ್ಮನಲ್ಲಿ ಪಾಲುಗಾರರಾದವರು,


ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ.


ಇವರು ನಿಜವಾಗಿ ಪ್ರತಿಷ್ಠಿರಾಗಬೇಕೆಂದು, ನನ್ನನ್ನು ನಾನೇ ಇವರಿಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ.


“ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.


ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.


ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ‘ನಾನು ದೇವರ ಮಗನಾಗಿದ್ದೇನೆಂದು’ ಹೇಳಿದ್ದಕ್ಕೆ ‘ನೀನು ದೇವದೂಷಣೆ ಮಾಡುತ್ತೀ ಎಂದು ನೀವು ನನಗೆ ಹೇಳುತ್ತಿರಲ್ಲಾ?’


“ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ನನ್ನನ್ನು ಹೀಯಾಳಿಸಿದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವುದು. ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಿನಂತೆ ತುಳಿತಕ್ಕೀಡಾಗುವರು.


ಆದರೆ ನೀನಾದರೋ ನಿನ್ನ ಸಮಾಧಿಗೆ ದೂರವಾಗಿ ಕೆಟ್ಟ ಕೊಂಬೆಯಂತೆ ಬಿಸಾಡಲ್ಪಟ್ಟಿದ್ದೀ; ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಹೊದಿಕೆಯಂತೆಯೂ,


ಅವನು ಅವರಿಗೆ, “ಆಕೆಯನ್ನು ಕೆಳಗೆ ದೊಬ್ಬಿರಿ” ಎಂದು ಆಜ್ಞಾಪಿಸಲು ಅವರು ಆಕೆಯನ್ನು ಕೆಳಗೆ ದೊಬ್ಬಿಬಿಟ್ಟರು. ಆಕೆಯ ರಕ್ತವು ಗೋಡೆಗಳಿಗೂ, ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿದು ಹಾಕಿದನು.


“ಇದು ದೇವರು ನಿಮಗೋಸ್ಕರ ಆಜ್ಞಾಪಿಸಿದ ಒಡಂಬಡಿಕೆಯ ರಕ್ತವಾಗಿದೆ” ಎಂದು ಹೇಳಿದನು.


ಯಾಕೆಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವುದು ಅವಶ್ಯ.


ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿದು ಜಜ್ಜಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.


ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ಒಡಂಬಡಿಕೆಯ ರಕ್ತ.


ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ಹೊರಳಾಡಿಸಿದ್ದಾನೆ; ನನ್ನ ಯುವಕರನ್ನು ಸದೆಬಡಿದಿದ್ದಾನೆ. ನನ್ನ ಕೇಡಿಗಾಗಿಯೇ ಮಹೋತ್ಸವವನ್ನು ಏರ್ಪಡಿಸಿದ್ದಾನೆ; ಕರ್ತನು ಯೆಹೂದವೆಂಬ ಕನ್ಯೆಯನ್ನು ತೊಟ್ಟಿಯಲ್ಲಿನ ದ್ರಾಕ್ಷಿಯ ಹಾಗೆ ತುಳಿದಿದ್ದಾನೆ.


ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟವು ಕಾಲಿನಿಂದ ತುಳಿಯಲ್ಪಡುವುದು.


ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು, ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ.


“ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನಮಾಡಿದ್ದಾನೆ.” ಆದರೆ “ಸಮಸ್ತವೂ ಆತನಿಗೆ ಅಧೀನಮಾಡಲ್ಪಟ್ಟಿದೆ” ಎಂದು ಹೇಳುವಾಗ ಸಮಸ್ತವನ್ನು ಅಧೀನಮಾಡಿಕೊಟ್ಟಾತನು ಅದರಲ್ಲಿ ಸೇರಲಿಲ್ಲವೆಂಬುದು ಸ್ಪಷ್ಟವಾಗಿದೆ.


“‘ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ, ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿದೆನು. ಹೌದು, ‘ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿ ಬದುಕಿಸಿದೆನು.


“ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ” ಎಂಬ ವಾಕ್ಯವನ್ನು ದಯಪಾಲಿಸಿದನು.


ಸಿಂಹ ಮತ್ತು ಸರ್ಪಗಳ ಮೇಲೆ ನಡೆಯುವಿ; ಪ್ರಾಯದ ಸಿಂಹವನ್ನೂ, ಘಟಸರ್ಪವನ್ನೂ ತುಳಿದುಬಿಡುವಿ.


ಆಗ ಮೋಶೆಯು ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯ ರಕ್ತವು ಇದೇ” ಅಂದನು.


ಆಗ ಒಬ್ಬ ದೇವದೂತನು ಮಾತನಾಡುವುದನ್ನು ಕೇಳಿದೆನು. ಮಾತನಾಡುವವನನ್ನು ಮತ್ತೊಬ್ಬ ದೇವದೂತನು, “ನಿತ್ಯಹೋಮವನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ, ದೇವಭಕ್ತ ಗಣವನ್ನು ತುಳಿಯುವುದು ಎಂಬ ಕನಸಿನ ಕಾರ್ಯಗಳು ಎಷ್ಟು ಕಾಲ ನಡೆಯುವುದು?” ಎಂದು ಪ್ರಶ್ನೆಮಾಡಿದನು.


ಆಗ ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ ಅಂದರೆ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಕಂಡರು.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.


ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ.


ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು.


ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು