Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಈಗಲಾದರೋ ಆ ಯಜ್ಞಗಳಿಂದ ಪ್ರತಿ ವರ್ಷದಲ್ಲಿಯೂ ಪಾಪಗಳ ಜ್ಞಾಪಕವಾಗುವುದುಂಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಬದಲಿಗೆ, ಪ್ರತಿವರ್ಷವೂ ಸಮರ್ಪಿಸಲಾಗುವ ಬಲಿಯರ್ಪಣೆಗಳು ಪಾಪನಿವಾರಣೆ ಆಗದ್ದನ್ನು ಜ್ಞಾಪಕಕ್ಕೆ ತರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದರೆ ಆ ಯಜ್ಞಗಳಿಂದ ಪ್ರತಿವರುಷದಲ್ಲಿಯೂ ಪಾಪಗಳ ಜ್ಞಾಪಕವಾಗುವದುಂಟು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ಜನರು ಪ್ರತಿವರ್ಷ ಅರ್ಪಿಸುತ್ತಿದ್ದ ಯಜ್ಞಗಳು ಅವರ ಪಾಪಗಳನ್ನು ನೆನಪಿಗೆ ತರುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆ ಯಜ್ಞಗಳು ಪ್ರತಿವರ್ಷವೂ ಪಾಪಗಳ ಜ್ಞಾಪಕವನ್ನು ಉಂಟುಮಾಡುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಖರೆ ಯಜ್ನ್ ಕರ್‍ತಲ್ಯಾ ಸಾಟ್ನಿ ಹರ್ ವರ್ಸಾ ಬಿ ಅದ್ದಿ ಕರಲ್ಯಾ ಪಾಪಾಂಚಿ ಯಾದ್ ಕರಲ್ಯಾ ಸಾರ್ಕೆ ಹೊತಾ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:3
11 ತಿಳಿವುಗಳ ಹೋಲಿಕೆ  

ಆದರೆ ಎರಡನೆಯ ಕೋಣೆಯೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೊಮ್ಮೆ ಪ್ರವೇಶಿಸುತ್ತಿದ್ದನು. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಹೋಗುತ್ತಿರಲಿಲ್ಲ. ಆ ರಕ್ತವನ್ನು ತನ್ನಗಾಗಿಯೂ ಮತ್ತು ಜನರ ಉದ್ದೇಶಪೂರ್ವಕವಲ್ಲದ ಅಪರಾಧಗಳಿಗೋಸ್ಕರವೂ ಸಮರ್ಪಿಸಬೇಕಾಗಿತ್ತು.


ಆರೋನನು ಅವನ ಸಂತತಿಯವರೂ ವರ್ಷಕ್ಕೆ ಒಂದು ಸಾರಿ ದೋಷಪರಿಹಾರಕ ಯಜ್ಞದ ಪಶುವಿನ ರಕ್ತವನ್ನು ಆ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಅದರ ಕುರಿತಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿ ಪರಿಶುದ್ಧವಾಗಿದೆ.”


ಇಸ್ರಾಯೇಲರ ಎಲ್ಲಾ ದೋಷಗಳನ್ನು ನಿವಾರಣೆಮಾಡುವುದಕ್ಕಾಗಿ ಅವರಿಗೋಸ್ಕರ ವರ್ಷಕ್ಕೆ ಒಂದಾವರ್ತಿ ದೋಷಪರಿಹಾರವನ್ನು ಮಾಡಬೇಕೆಂಬುದೇ ನಿಮಗೆ ಶಾಶ್ವತನಿಯಮ” ಎಂದು ಹೇಳಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.


ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ಒಡಂಬಡಿಕೆಯ ರಕ್ತ.


ಆಗ ಆ ಸ್ತ್ರೀಯು ಎಲೀಯನಿಗೆ, “ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?” ಎಂದಳು.


ಆಗ “ನಿನ್ನ ಆಲಯದ ಮೇಲಿನ ಅಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತಿದೆ” ಎಂದು ಬರೆದಿರುವುದನ್ನು ಆತನ ಶಿಷ್ಯರು ನೆನಪುಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು