Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಹೀಗಿರಲಾಗಿ ನೀವು ಜ್ಞಾನಪ್ರಕಾಶವನ್ನು ಹೊಂದಿದ ಮೇಲೆ ಕಷ್ಟಾನುಭವವೆಂಬ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ನಿಮ್ಮ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿ: ನಿಮಗೆ ಜ್ಞಾನೋದಯವಾದ ತರುವಾಯ, ಕಷ್ಟಸಂಕಟಗಳಿಂದ ಕೂಡಿದ ಹೋರಾಟವನ್ನು ಎದುರಿಸಿದಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಹೀಗಿರಲಾಗಿ ನೀವು ಜ್ಞಾನಪ್ರಕಾಶದಲ್ಲಿ ಸೇರಿ ಕಷ್ಟಾನುಭವವೆಂಬ ಬಲು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನೀವು ಸತ್ಯವನ್ನು ತಿಳಿದುಕೊಂಡ ಆ ದಿನಗಳನ್ನು ನೆನಪು ಮಾಡಿಕೊಳ್ಳಿ. ನೀವು ಅನೇಕ ಸಂಕಟಗಳಲ್ಲಿ ಹೋರಾಟ ಮಾಡಿದರೂ, ಧೃತಿಗೆಡದೆ ಮುಂದುವರಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದರೆ ನೀವು ಬೆಳಕನ್ನು ಹೊಂದಿದ ಮೇಲೆ ಬಾಧೆಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪುಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತಸೆ ಹೊಲ್ಯಾರ್ ಅದ್ಲ್ಯಾ ದಿಸಾಂಚಿ ಯಾದ್ ಕರಾ, ತ್ಯಾ ದಿಸಾತ್ನಿ ತೆಂಕಾ ದೆವಾಚೊ ಉಜ್ವೊಡ್ ಗಾವಲ್ಯಾ ತನ್ನಾ ಕಸ್ಟಾಂಚಿ ಮೊಟಿ ಎಕ್ ಮಾರಾಮಾರಿಚ್ ತುಮಿ ಕರ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:32
18 ತಿಳಿವುಗಳ ಹೋಲಿಕೆ  

ಒಂದು ಸಾರಿ ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ ದಾನವನ್ನು ಅನುಭವಿಸಿದವರು, ಪವಿತ್ರಾತ್ಮನಲ್ಲಿ ಪಾಲುಗಾರರಾದವರು,


ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ ರಕ್ತವನ್ನು ಸುರಿಸುವಷ್ಟು ಹೋರಾಡಲಿಲ್ಲವಲ್ಲ.


ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ಕಳೆದುಕೊಳ್ಳದೆ ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ.


ಅಂತೂ, ನಾವು ಯಾವ ಸೂತ್ರವನ್ನನುಸರಿಸಿ ಇಲ್ಲಿಯ ವರೆಗೆ ಬಂದೆವೋ ಅದನ್ನೇ ಅನುಸರಿಸಿ ನಡೆಯೋಣ.


ಆದುದರಿಂದ ನೀನು ಹೊಂದಿಕೊಂಡಿದ್ದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದು ಅದನ್ನು ಕಾಪಾಡಿಕೊಂಡು ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ನೀನು ಎಚ್ಚರಗೊಳ್ಳದಿದ್ದರೆ ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನಲ್ಲಿಗೆ ಬರುವೆನೆಂಬುದು ನಿನಗೆ ತಿಳಿಯುವುದೇ ಇಲ್ಲ.


ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಹಾಗೂ ನನ್ನನ್ನು ಮುಖಾಮುಖಿಯಾಗಿ ನೋಡದಿರುವವರೆಲ್ಲರಿಗಾಗಿಯೂ,


ಆದ್ದರಿಂದ ನೀನು ಎಲ್ಲಿಂದ ಬಿದ್ದಿರುವಿಯೋ ಅದನ್ನು ನಿನ್ನ ನೆನಪಿಗೆ ತಂದುಕೋ. ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ಮಾನಸಾಂತರಪಡದಿದ್ದರೆ ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುವೆನು.


ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.


ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.


ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.


ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ, ದೇವರ ವಾಕ್ಯಗಳ ಮೂಲಪಾಠಗಳನ್ನು ಒಬ್ಬನು ನಿಮಗೆ ಪುನಃ ಕಲಿಸಿಕೊಡಬೇಕಾಗಿದೆ. ನಿಮಗೆ ಇನ್ನೂ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ.


ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು