Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಸೆರೆಯಾಳುಗಳಿಗೆ ಸಂತಾಪ ತೋರಿಸಿದಿರಿ, ನಿಮ್ಮ ಸೊತ್ತನ್ನು ಸುಲಿಗೆಮಾಡಿದಾಗ ಸಂತೋಷದಿಂದ ಬಿಟ್ಟುಕೊಟ್ಟಿರಿ. ಏಕೆಂದರೆ, ಇದಕ್ಕೂ ಶ್ರೇಷ್ಠವಾದ ಹಾಗೂ ಶಾಶ್ವತವಾದ ಸೊತ್ತು ನಿಮಗಿದೆಯೆಂದು ಚೆನ್ನಾಗಿ ಅರಿತಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಬೇಡಿಗಳನ್ನು ಹಾಕಿಸಿಕೊಂಡವರ ಕಷ್ಟವನ್ನು ನೋಡಿ ಅವರ ಸಂಗಡ ನೀವು ದುಃಖ ಪಟ್ಟದ್ದಲ್ಲದೆ ನಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಹೌದು, ಸೆರೆಯಲ್ಲಿರುವ ಜನರಿಗೆ ಸಹಾಯ ಮಾಡಿದಿರಿ ಮತ್ತು ಅವರ ಸಂಕಟಗಳಲ್ಲಿ ಪಾಲ್ಗೊಂಡಿರಿ. ನಿಮ್ಮ ಸ್ವತ್ತುಗಳನ್ನೆಲ್ಲ ನಿಮ್ಮಿಂದ ಕಿತ್ತುಕೊಂಡು ಹೋದಾಗಲೂ ಸಂತೋಷದಿಂದಲೇ ಇದ್ದಿರಿ. ಅದಕ್ಕಿಂತಲೂ ಉತ್ತಮವಾದದ್ದೂ ಶಾಶ್ವತವಾದದ್ದೂ ನಿಮಗೆ ದೊರೆತಿದೆ ಎಂದು ನಿಮಗೆ ತಿಳಿದಿದ್ದ ಕಾರಣ ನೀವು ಸಂತೋಷವಾಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಸ್ಥಿರವಾದ ಉತ್ತಮ ಆಸ್ತಿಯಿದೆ ಎಂದು ತಿಳಿದು, ನಿಮ್ಮ ಆಸ್ತಿ ಸುಲಿಗೆಯಾದಾಗ ಸಂತೋಷವಾಗಿ ಬಿಟ್ಟುಕೊಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಬಂಧಿಖಾನ್ಯಾತ್ ಹೊತ್ಯಾಂಚ್ಯಾ ಕಸ್ಟಾ ದುಖಾತ್ನಿ ಸೈತ್ ತುಮಿ ವಾಟೊ ಘೆಟ್ಲ್ಯಾಸಿ, ಅನಿ ತುಮ್ಚಿ ಆಸ್ತಿ, ಬದಿಕ್ ಎಚುನ್ ಘೆವ್ನ್ ಜಾವ್ಕ್ ತುಮಿ ಕುಶಿನ್ ಸೊಡ್ಲ್ಯಾಸಿ, ಕಶ್ಯಾಕ್ ಮಟ್ಲ್ಯಾರ್ ತೆಜ್ಯಾನ್ಕಿ ಲೈ ಬರಿ ಅನಿ ಶಾಶ್ವತ್ ರ್‍ಹಾತಾ ತಸ್ಲಿ ಸಾವ್ಕಾರ್ಕಿ ತುಮ್ಕಾ ಹಾಯ್ ಮನುನ್ ತುಮಿ ಕಳ್ವುನ್ ಘೆಟ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:34
28 ತಿಳಿವುಗಳ ಹೋಲಿಕೆ  

ನಮ್ಮನ್ನು ಲಯ, ಕಳಂಕ, ನಾಶಗಳಿಲ್ಲದ ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಡಲ್ಪಟ್ಟಿದೆ.


ಒನೇಸಿಪೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ, ಅವನು ಹಲವುಬಾರಿ ನನ್ನನ್ನು ಉಪಚರಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡದೆ,


ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ.


ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂದು ತಿಳಿದು, ಅವರಿಗುಂಟಾದ ಶಾರೀರಿಕ ಕಷ್ಟಾನುಭವವು ನಿಮಗೂ ಸಂಭವಿಸಿತೆಂದು ಭಾವಿಸಿಕೊಂಡು, ಅವರನ್ನು ಜ್ಞಾಪಕಮಾಡಿಕೊಳ್ಳಿರಿ.


ಆ ಸುವಾರ್ತೆಯ ನಿಮಿತ್ತವಾಗಿ ರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ ಹಾಗೆಯೇ ಧೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ.


ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.


ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.


ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.


ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ.


ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಬಂಧನದಲ್ಲಿರುವಾಗಲೂ, ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ.


ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಹೀಗಿರುವುದರಿಂದ ಪೌಲನೆಂಬ ನಾನು ಅನ್ಯಜನರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿದ್ದಾನೆ.


ಸಹಸ್ರಾಧಿಪತಿಯು ಹತ್ತಿರಕ್ಕೆ ಬಂದು ಅವನನ್ನು ಹಿಡಿದು, ಅವನಿಗೆ ಎರಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು;


ಅಪೊಸ್ತಲರು ತಾವು ಯೇಸುವಿನ ಹೆಸರಿನ ನಿಮಿತ್ತವಾಗಿ ಅವಮಾನಪಡುವುದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಪಟ್ಟರು.


ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು.


ಯೇಸು ಅವನಿಗೆ, “ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.


ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.


ಭೂಮಿಯ ಮೇಲಿರುವ ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು; ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ.


ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿಮಿತ್ತವಾಗಿ ಈ ಬೇಡಿಯಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.


ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.


ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನನ್ನೇ ತಾನು ಹಾಳುಮಾಡಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?


ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.


ಏಕೆಂದರೆ ಇಹದಲ್ಲಿ ಶಾಶ್ವತವಾದ ಪಟ್ಟಣವು ನಮಗಿಲ್ಲ. ಭವಿಷ್ಯತ್ತಿನಲ್ಲಿ ಬರುವ ಪಟ್ಟಣವನ್ನು ಎದುರುನೋಡುತ್ತಾ ಇದ್ದೇವೆ.


ಸಂಪಾದಿಸುವ ಸಮಯ, ಕಳೆದುಕೊಳ್ಳುವ ಸಮಯ, ಕಾಪಾಡುವ ಸಮಯ, ಬಿಸಾಡುವ ಸಮಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು