Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ ಸಾರಳು ವಾಗ್ದಾನ ಮಾಡಿದಾತನನ್ನು ನಂಬತಕ್ಕವನೆಂದೆಣಿಸಿ ತಾನು ಪ್ರಾಯ ಮೀರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿಯಾಗುವುದಕ್ಕೆ ಶಕ್ತಿಯನ್ನು ಹೊಂದಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇದಲ್ಲದೆ, ಪ್ರಾಯಮೀರಿದ ಸಾರಳು ಕೂಡ ವಿಶ್ವಾಸದ ಮೂಲಕವಾಗಿಯೇ ಗರ್ಭವತಿ ಆಗುವ ಶಕ್ತಿಯನ್ನು ಪಡೆದಳು; ವಾಗ್ದಾನಮಾಡಿದ ದೇವರು ನಂಬಿಕಸ್ಥರು ಎಂಬ ಭರವಸೆ ಆಕೆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದಲ್ಲದೆ ಸಾರಳು ವಾಗ್ದಾನಮಾಡಿದಾತನನ್ನು ನಂಬತಕ್ಕವನೆಂದೆಣಿಸಿ ತಾನು ಪ್ರಾಯ ಮೀರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿಯಾಗುವದಕ್ಕೆ ಶಕ್ತಿಯನ್ನು ಹೊಂದಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅಬ್ರಹಾಮನು ಮಕ್ಕಳನ್ನು ಪಡೆಯಲಾಗದಷ್ಟು ವೃದ್ಧನಾಗಿದ್ದನು. ಸಾರಳು ಮಕ್ಕಳನ್ನು ಪಡೆಯಲು ಸಮರ್ಥಳಾಗಿರಲಿಲ್ಲ. ಆದರೆ ಅಬ್ರಹಾಮನಿಗೆ ದೇವರಲ್ಲಿ ನಂಬಿಕೆಯಿದ್ದುದರಿಂದ, ಅವರು ಮಕ್ಕಳನ್ನು ಪಡೆಯಲು ಸಮರ್ಥರಾಗುವಂತೆ ದೇವರು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಂಬಿಕೆಯಿಂದಲೇ ಸಾರಳು ಸಹ ವಾಗ್ದಾನ ಮಾಡಿದ ದೇವರು ನಂಬಿಗಸ್ತರು ಎಂದೆಣಿಸಿ ತಾನು ಪ್ರಾಯಮೀರಿದವಳಾಗಿದ್ದರೂ ಗರ್ಭವತಿಯಾಗುವುದಕ್ಕೆ ಸಾಮರ್ಥ್ಯ ಹೊಂದಿ, ಒಂದು ಮಗುವನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಸಾರಾನ್ ಗೊಸ್ಟ್ ದಿಲ್ಲ್ಯಾ ದೆವಾಕ್ ವಿಶ್ವಾಸ್, ಥವ್ತಲೆ ಬರೆ ಮನುನ್ ಚಿಂತುನ್ ಅಪ್ನಿ ಆಯಿಸ್ ಸರುಕ್ ಯೆಲ್ಲಿ ರ್‍ಹಾಲ್ಯಾರ್‍ಬಿ ವಿಶ್ವಾಸಾನುಚ್ ಗರ್ವಾರ್ ರ್‍ಹಾವ್ಕ್ ಬಳ್ ಘೆಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:11
10 ತಿಳಿವುಗಳ ಹೋಲಿಕೆ  

ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು.


ಇಗೋ, ನಿನ್ನ ಬಂಧುವಾದ ಎಲಿಸಬೇತಳಿದ್ದಾಳಲ್ಲಾ, ಆಕೆ ಸಹ ಮುಪ್ಪಿನವಳಾದರೂ ಗರ್ಭಿಣಿಯಾಗಿದ್ದಾಳೆ; ಆಕೆಯ ಗರ್ಭದಲ್ಲಿ ಗಂಡು ಮಗುವಿದೆ; ಬಂಜೆಯೆನಿಸಿಕೊಂಡಿದ್ದ ಆಕೆಗೆ ಈಗ ಆರನೆಯ ತಿಂಗಳು.


ಆ ಮಾತಿನ ಅರ್ಥವೇನಂದರೆ ಶರೀರಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ. ವಾಗ್ದಾನ ಸಂಬಂಧವಾಗಿ ಹುಟ್ಟಿದವರೇ ಅಬ್ರಹಾಮನ ಸಂತತಿಯವರೆಂದು ಎಣಿಸಲ್ಪಡುವರು ಎಂಬುದು.


ದಾಸಿಯ ಮಗನು ಶರೀರಕ್ಕನುಸಾರವಾಗಿ ಹುಟ್ಟಿದವನು, ಸ್ವತಂತ್ರಳಾದವಳ ಮಗನಾದರೋ ವಾಗ್ದಾನದ ಮೂಲಕ ಹುಟ್ಟಿದವನು.


ಆದರೆ ಆ ಸ್ತ್ರೀಯು ಗರ್ಭಿಣಿಯಾಗಿ ಎಲೀಷನು ಹೇಳಿದಂತೆ, ಮುಂದಿನ ವರ್ಷ ಅದೇ ಕಾಲದಲ್ಲಿ, ಒಬ್ಬ ಮಗನನ್ನು ಹೆತ್ತಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು