Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನನ್ನ ಮಗನು ಸತ್ತರೂ ದೇವರು ಅವನನ್ನು ಬದುಕಿಸಲು ಸಮರ್ಥನಾಗಿದ್ದಾನೆಂದು ತಿಳಿದುಕೊಂಡಿದ್ದನು. ಮತ್ತು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಪಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಏಕೆಂದರೆ, ಸತ್ತವರನ್ನು ದೇವರು ಜೀವಕ್ಕೆ ಎಬ್ಬಿಸಬಲ್ಲರು ಎಂಬುದನ್ನು ಅಬ್ರಹಾಮನು ತಿಳಿದಿದ್ದನು. ಅಂತೆಯೇ, ತನ್ನ ಮಗನನ್ನು ಸಾವಿನಿಂದ ಮರಳಿ ಪಡೆದನು. ಮುಂಬರಲಿರುವ ಘಟನೆಗೆ ಇಂದೊಂದು ಮುನ್ಸೂಚನೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ತನ್ನ ಮಗನು ಸತ್ತರೂ ದೇವರು ಅವನನ್ನು ಬದುಕಿಸ ಸಮರ್ಥನಾಗಿದ್ದಾನೆಂದು ತಿಳುಕೊಂಡನು. ಮತ್ತು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರು ಸತ್ತವರನ್ನು ಜೀವಂತವಾಗಿ ಎಬ್ಬಿಸಬಲ್ಲನೆಂದು ಅವನು ನಂಬಿದ್ದನು. ಇಸಾಕನನ್ನು ಕೊಲ್ಲದಂತೆ ದೇವರು ಅವನನ್ನು ತಡೆದಾಗ, ಅವನಿಗೆ ನಿಜವಾಗಿಯೂ ಇಸಾಕನನ್ನು ಸಾವಿನಿಂದ ಮರಳಿ ಪಡೆದಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ತನ್ನ ದೇವರು ಸತ್ತವರೊಳಗಿಂದ ಎಬ್ಬಿಸಲು ಸಮರ್ಥರು ಎಂದು ಅಬ್ರಹಾಮನು ತಿಳಿದಿದ್ದನು. ಅವನು ಇಸಾಕನನ್ನು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅಪ್ಲೊ ಲೆಕ್ ಮರ್‍ಲ್ಯಾರ್‍ಬಿ ದೆವ್ ತೆಕಾ ಜಿವ್ ಕರುಕ್ ಸಕ್ತಾ ಮನ್ತಲೆ ಅಬ್ರಾಹಾಮಾಕ್ ಗೊತ್ತುಚ್ ಹೊತ್ತೆ, ಇಸಾಕಾಕ್ ಮರ್ನ್ನಾಕ್ನಾ ಝಿತ್ತೊ ಹೊಲ್ಲ್ಯಾ ಸಾರ್ಕೆ ಹೊವ್ನ್ ತೆಕಾ ಪರ್ತುನ್ ಘೆಟಲ್ಯಾ ಸಾರ್ಕೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:19
10 ತಿಳಿವುಗಳ ಹೋಲಿಕೆ  

ಯೇಸು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು, “ನಾನು ಇದನ್ನು ಮಾಡಬಲ್ಲೆನೆಂಬುದನ್ನು ನೀವು ನಂಬುತ್ತೀರೋ” ಎಂದು ಕೇಳಿದ್ದಕ್ಕೆ, ಅವರು “ಹೌದು, ಕರ್ತನೇ, ನಂಬುತ್ತೇವೆ” ಅಂದರು.


ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ


ಅಬ್ರಹಾಮನು ಕಣ್ಣೆತ್ತಿ ನೋಡಲಾಗಿ ತನ್ನ ಹಿಂದೆ, ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿ ಹಾಕಿಕೊಂಡಿರುವುದನ್ನು ಕಂಡನು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಹೋಮಮಾಡಿದನು.


ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.


ಆದರೂ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣದ ಆಳ್ವಿಕೆಯು ನಡೆಯುತ್ತಿತ್ತು. ಆದಾಮನು ದೇವರ ಆಜ್ಞೆಯನ್ನು ಮೀರಿ ಮಾಡಿದ ಪಾಪಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಾದ ಕ್ರಿಸ್ತನಿಗೆ ಪ್ರತಿರೂಪನಾಗಿದ್ದಾನೆ.


ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು.


ಇದು ಈಗಿನ ಕಾಲಕ್ಕೆ ಒಂದು ನಿದರ್ಶನವಾಗಿದೆ. ಅದೇನೆಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಮತ್ತು ಯಜ್ಞಗಳೂ ಆರಾಧನೆ ಮಾಡುವವರ ಮನಸ್ಸಾಕ್ಷಿಯನ್ನು ಪರಿಪೂರ್ಣಗೊಳಿಸಲು ಆಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು