Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮೋಶೆ ಹುಟ್ಟಿದಾಗ ಅವನ ತಂದೆತಾಯಿಗಳು ಕೂಸು ಸುಂದರವಾಗಿದೆ ಎಂದು ನೋಡಿ ಅರಸನ ಅಪ್ಪಣೆಗೆ ಭಯಪಡದೇ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ವಿಶ್ವಾಸವಿದ್ದುದರಿಂದಲೇ ಮೋಶೆ ಹುಟ್ಟಿದಾಗ ಆ ಮಗುವಿನ ಸೌಂದರ್ಯವನ್ನು ಕಂಡು, ತಂದೆತಾಯಿಗಳು ರಾಜಾಜ್ಞೆಗೆ ಅಂಜದೆ, ಮೂರು ತಿಂಗಳವರೆಗೆ ಅದನ್ನು ಬಚ್ಚಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮೋಶೆ ಹುಟ್ಟಿದಾಗ ಅವನ ತಂದೆ ತಾಯಿಗಳು ಕೂಸು ಸುಂದರವಾಗಿದೆ ಎಂದು ನೋಡಿ ಅರಸನ ಅಪ್ಪಣೆಗೆ ಭಯಪಡದೆ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಮೋಶೆಯು ಹುಟ್ಟಿದಾಗ ಅವನ ತಂದೆತಾಯಿಗಳು ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳವರೆಗೆ ಅಡಗಿಸಿಟ್ಟರು. ಮಗುವಾಗಿದ್ದ ಮೋಶೆಯ ಸೌಂದರ್ಯವನ್ನು ಅವರು ಕಂಡದ್ದರಿಂದ ರಾಜನಾದ ಫರೋಹನ ಆಜ್ಞೆಗೂ ಅವಿಧೇಯರಾಗಲು ಹಿಂಜರಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಂಬಿಕೆಯಿಂದಲೇ ಮೋಶೆ ಹುಟ್ಟಿದಾಗ ಕೂಸು ಸುಂದರವಾಗಿರುವುದನ್ನು ಅವನ ತಂದೆತಾಯಿಗಳು ನೋಡಿ ಅರಸನ ಅಪ್ಪಣೆಗೆ ಭಯಪಡದೆ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಮೊಯ್ಜೆ ಉಪಾಜಲ್ಲ್ಯಾ ತನ್ನಾ ತೆಚ್ಯಾ ಬಾಯ್ ಬಾಬಾನಿ ಬಾಳ್ಸೆ ಬರೆ ಹಾಯ್ ಮನುನ್ ಬಗುನ್ ಫಾರೊವ್ ರಾಜಾಚ್ಯಾ ಹುಕುಮಾಕ್ ಭಿಂಯಿನಸ್ತಾನಾ ತಿನ್ ಮ್ಹಯಿನೆ ಪತರ್ ನಿಪ್ವುನ್ ಥವಲ್ಲೆಬಿ ವಿಶ್ವಾಸಾನುಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:23
16 ತಿಳಿವುಗಳ ಹೋಲಿಕೆ  

ತರುವಾಯ ಫರೋಹನು ತನ್ನ ಜನರಿಗೆ, “ಇಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಕೂಸುಗಳನ್ನೆಲ್ಲಾ ಉಳಿಸಬೇಕು” ಎಂದು ಆಜ್ಞೆ ಮಾಡಿದನು.


ಅವನು ಅವರಿಗೆ, “ನೀವು ಇಬ್ರಿಯ ಹೆಂಗಸರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವ ಮಗುವು ಗಂಡು ಮಗುವಾಗಿದ್ದರೆ ಕೊಂದುಹಾಕಿರಿ, ಹೆಣ್ಣಾಗಿದ್ದರೆ ಬದುಕಲು ಬಿಡಿ” ಎಂದು ಹೇಳಿದನು.


ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.


ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ಆ ಸಮಯದಲ್ಲೇ ಮೋಶೆಯು ಹುಟ್ಟಿದನು. ಅವನು ದಿವ್ಯಸುಂದರನಾಗಿದ್ದನು ಮತ್ತು ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು.


ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.


ಯೆಹೋವನು ನನ್ನ ಕಡೆ ಇದ್ದಾನೆ; ಭಯಪಡೆನು. ಮನುಷ್ಯನು ನನಗೆ ಏನು ಮಾಡಾನು?


ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮಿನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು


ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?


ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ.


ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು; ದೇವರನ್ನು ನಂಬಿ ನಿರ್ಭಯದಿಂದಿರುವೆನು. ನರಪ್ರಾಣಿಗಳು ನನಗೆ ಏನು ಮಾಡಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು