Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ವಿಶ್ವವು ದೇವರ ಮಾತಿನಿಂದಲೇ ನಿರ್ಮಿತವಾಯಿತೆಂದು ನಾವು ನಂಬಿಕೆಯಿಂದಲೇ ತಿಳಿದುಕೊಂಡಿದ್ದೇವೆ. ಈ ಕಾರಣದಿಂದ ಕಾಣಿಸುವ ಈ ಜಗತ್ತು ದೃಶ್ಯವಸ್ತುಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ವಿಶ್ವವು ದೇವರ ವಾಣಿಯಿಂದ ಉಂಟಾಯಿತು ಎಂಬುದನ್ನು ಮತ್ತು ಗೋಚರವಾದವುಗಳು ಅಗೋಚರವಾದವುಗಳಿಂದ ಉಂಟಾದವು ಎಂಬುದನ್ನು ವಿಶ್ವಾಸದಿಂದಲೇ ತಿಳಿಯುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಂಬಿಕೆಯಿಂದಲೇ ನಾವು ತಿಳಿದುಕೊಂಡು ಕಾಣಿಸುವ ಈ ಜಗತ್ತು ದೃಶ್ಯ ವಸ್ತುಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವರು ತನ್ನ ಆಜ್ಞೆಯಿಂದ ಈ ಲೋಕವನ್ನು ಸೃಷ್ಟಿಸಿದನೆಂಬುದನ್ನು ಅರ್ಥಮಾಡಿಕೊಳ್ಳಲು ನಂಬಿಕೆ ನಮಗೆ ಸಹಾಯ ಮಾಡುತ್ತದೆ. ಹೇಗೆಂದರೆ ನಮ್ಮ ಕಣ್ಣಿಗೆ ಕಾಣುವಂಥ ವಸ್ತುಗಳಿಂದ ಈ ಜಗತ್ತು ಸೃಷ್ಟಿಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ವಿಶ್ವವು ದೇವರ ವಾಕ್ಯದಿಂದ ಉಂಟಾದವೆಂದೂ ಕಾಣುವಂತವುಗಳು ಕಾಣದವುಗಳಿಂದ ಉಂಟಾದವು ಎಂಬುದನ್ನು ನಾವು ನಂಬಿಕೆಯಿಂದ ತಿಳಿದುಕೊಂಡದ್ದರಿಂದ ಗ್ರಹಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಹ್ಯೊ ಜಗ್ ದೆವಾಚ್ಯಾ ಗೊಸ್ಟಿ ವೈನಾಚ್ ಉತ್ಪನ್ನ್ ಹೊಲೊ ಮನ್ತಲೆ ವಿಶ್ವಾಸಾನುಚ್ ಕಳ್ವುನ್ ಘೆವ್ನ್ ದಿಸ್ತಲ್ಯಾ ವಸ್ತಾಂಚ್ಯಾಕ್ನಾ ಹೊವ್ಕ್ ನಾ ಮನುನ್ ಕಳ್ವುನ್ ಘೆತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:3
17 ತಿಳಿವುಗಳ ಹೋಲಿಕೆ  

ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು.


ಆದರೆ ಪೂರ್ವಕಾಲದಲ್ಲಿ ಭೂಮ್ಯಾಕಾಶಗಳು ದೇವರ ವಾಕ್ಯದ ಮೂಲಕ ನೀರಿನೊಳಗಿನಿಂದ ಹಾಗೂ ನೀರಿನಿಂದ ರೂಪಿಸಲ್ಪಟ್ಟಿತೆಂಬುದನ್ನು ಅವರು ಉದ್ದೇಶರ್ಪೂವಕವಾಗಿಯೇ ಮರೆತುಬಿಡುತ್ತಾರೆ.


ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ.


“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಪಿತನಾಗಿ ನೇಮಿಸಿದ್ದೇನೆಂದು” ಶಾಸ್ತ್ರದಲ್ಲಿ ಬರೆದಿದೆಯಲ್ಲ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಮತ್ತು ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವನೂ ಆದ ದೇವರಲ್ಲಿ ಅಬ್ರಹಾಮನು ನಂಬಿಕೆಯಿಟ್ಟನು.


“ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ, ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವುದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ;


ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು.


ನೀವು ಅವುಗಳಿಗೆ, “ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂಮಿಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು” ಎಂದು ಹೇಳಿರಿ.


ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು.


ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ! ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಈ ಸೈನ್ಯವನ್ನು ಲೆಕ್ಕಕ್ಕೆ ಸರಿಯಾಗಿ ಮುಂದುವರಿಸುತ್ತಾನೆ. ಎಲ್ಲವನ್ನೂ ಹೆಸರೆತ್ತಿ ಕರೆಯುತ್ತಾನೆ; ಆತನು ಅತಿ ಬಲಾಢ್ಯನೂ, ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ಕಡಿಮೆಯಾಗದು.


“ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.


ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು. ಇಸ್ರಾಯೇಲ್ ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದು ಆತನ ನಾಮಧೇಯ.


ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.


ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ.


ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಆ ಆಹಾರವು ಪವಿತ್ರವಾಗುತ್ತದಲ್ಲಾ.


ದೇವರ ವಾಕ್ಯದ ಶ್ರೇಷ್ಠತೆಯನ್ನೂ ಮುಂದಣ ಯುಗದ ಶಕ್ತಿಯನ್ನೂ ಅನುಭವಿಸಿದವರು ಅದರಿಂದ ಹಿಂಜಾರಿಹೋದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು