32 ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್‍ಥ ದಾವೀದ್ ಸಮುವೇಲ್ ಎಂಬವರ ವೃತ್ತಾಂತವನ್ನೂ ಪ್ರವಾದಿಗಳ ವೃತ್ತಾಂತವನ್ನೂ ವಿವರವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.
32 ನಾನು ನಿಮಗೆ ಮತ್ತಷ್ಟು ದೃಷ್ಟಾಂತಗಳನ್ನು ಹೇಳುವ ಅಗತ್ಯವಿದೆಯೋ? ನಾನು ಗಿದ್ಯೋನನ, ಬಾರಾಕನ, ಸಂಸೋನನ, ಯೆಫ್ತಾಹನ, ದಾವೀದನ, ಸಮುವೇಲನ ಮತ್ತು ಪ್ರವಾದಿಗಳ ಕುರಿತು ನಿಮಗೆ ಹೇಳುವಷ್ಟು ಸಮಯ ನನಗಿಲ್ಲ.
ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು, ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟುಹೋದನು.
ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಆ ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ.
ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. ಧರ್ಮಶಾಸ್ತ್ರವಿಲ್ಲದಿದ್ದರೆ ಪಾಪವೆಂದರೆ ಏನೆಂದು ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ “ದುರಾಶೆ ಪಾಪವೆಂದು” ಎಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯಂದರೆ ಏನೆಂದು ನನಗೆ ತಿಳಿಯುತ್ತಿರಲಿಲ್ಲ.
ಆದರೆ ನಮ್ಮ ಅನ್ಯಾಯದ ನಡವಳಿಕೆಯಿಂದ ದೇವರು ನೀತಿವಂತನೆಂದು ಪ್ರಸಿದ್ಧಿಗೆ ಬರುವುದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. ಈ ಮಾತನ್ನು ಮನುಷ್ಯನ ರೀತಿಯಲ್ಲಿ ಆಡುತ್ತಿದ್ದೇನೆ.
ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳ ಮೂಲಕ ನಿಮಗೆ ತಿಳಿಸಿಕೊಡುತ್ತಾ ನಿಮ್ಮ ನಿರ್ಮಲವಾದ ಮನಸ್ಸನ್ನು ಎಚ್ಚರಗೊಳಿಸುತ್ತಿದ್ದೇನೆ.
ಅಬ್ರಹಾಮ, ಇಸಾಕ, ಯಾಕೋಬರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ ನೀವು ನೋಡುವಿರಿ. ಆದರೆ ನಿಮ್ಮನ್ನು ಮಾತ್ರ ಹೊರಗೆ ಹಾಕಲಾಗುವುದು ಅಲ್ಲಿ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು.
ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!
ಆ ಮೇಲೆ ಯೆಹೋವನ ದೂತನು ಬಂದು ಒಫ್ರದಲ್ಲಿದ್ದ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿನ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.
ಆಗ ದಾವೀದನು ಅವನಿಗೆ, “ನೀನು ಈಟಿ, ಕತ್ತಿ, ಬರ್ಜಿಗಳೊಡನೆ ನನ್ನ ಬಳಿಗೆ ಬರುತ್ತೀ. ನಾನಾದರೋ ನೀನು ಹೀಯಾಳಿಸಿದಂಥ ಸೇನಾಧೀಶ್ವರನೂ, ಇಸ್ರಾಯೇಲ್ಯರ ಯುದ್ಧಭಟರ ದೇವರೂ ಆಗಿರುವ ಯೆಹೋವನ ನಾಮದೊಡನೆ ನಿನ್ನ ಬಳಿಗೆ ಬಂದಿದ್ದೇನೆ.