Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು.,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಇವರು ವಿಶ್ವಾಸದಿಂದಲೇ ರಾಜ್ಯಗಳನ್ನು ಗೆದ್ದರು; ನ್ಯಾಯನೀತಿಯಿಂದ ಆಳಿದರು; ದೇವರಿಂದ ವಾಗ್ದಾನಗಳನ್ನು ಪಡೆದರು; ಸಿಂಹಗಳ ಬಾಯನ್ನು ಬಂಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡಕೊಂಡರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆ ಜನರೆಲ್ಲರೂ ಬಲವಾದ ನಂಬಿಕೆಯುಳ್ಳವರಾಗಿದ್ದರು. ಆ ನಂಬಿಕೆಯಿಂದಲೇ ರಾಜ್ಯಗಳನ್ನು ಸೋಲಿಸಿದರು. ಅವರು ಯೋಗ್ಯವಾದ ಕಾರ್ಯಗಳನ್ನು ಮಾಡಿದರು ಮತ್ತು ದೇವರು ವಾಗ್ದಾನ ಮಾಡಿದ್ದವುಗಳನ್ನು ಪಡೆದುಕೊಂಡರು. ಅವರಲ್ಲಿ ಕೆಲವರು ತಮ್ಮ ನಂಬಿಕೆಯಿಂದ ಸಿಂಹಗಳ ಬಾಯಿಗಳನ್ನು ಮುಚ್ಚಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಇವರೆಲ್ಲರೂ ನಂಬಿಕೆಯ ಮೂಲಕವೇ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು. ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಲೈ ಲೊಕಾನಿ ಮೊಟ್ಯಾ ವಿಶ್ವಾಸಾನುಚ್ ದುಸ್ರಿ ದುಸ್ರಿ ರಾಜಾ ಸ್ವತಾಚಿ ಕರುನ್ ಘೆಟ್ಲ್ಯಾನಿ, ನಿತ್ ಚಲ್ವುಲ್ಯಾನಿ,ದೆವಾಚಿ ಗೊಸ್ಟಿಯಾ ಘೆಟ್ಲ್ಯಾನಿ; ಅನಿ ಅದ್ಲ್ಯಾ ವಿಶ್ವಾಸಾನ್ ಸಿವಾಂಚಿ ತೊಂಡಾ ಭಾಂದ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:33
26 ತಿಳಿವುಗಳ ಹೋಲಿಕೆ  

ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.


ಹಾಗೆಯೇ, ದೇವರು ಅಬ್ರಹಾಮನಿಗೆ ಮತ್ತು ಅವನಿಂದ ಬರುವ ಪೀಳಿಗೆಗೆ ವಾಗ್ದಾನ ಮಾಡಿದನು. ಆದರೆ “ಪೀಳಿಗೆ” ಎಂದು ಹೇಳಿದಾಗ, ಅದು ವಂಶದಲ್ಲಿ ಇರುವ ಎಲ್ಲರಿಗೂ ಅನ್ವಯಿಸದೇ, ಅಬ್ರಹಾಮನ ವಂಶಕ್ಕೆ ಸೇರಿದ ಒಬ್ಬ ವ್ಯಕ್ತಿಯನ್ನೇ ಸೂಚಿಸುತ್ತದೆ. ಆ ಒಬ್ಬನು ಕ್ರಿಸ್ತನೇ.


ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.


ಅಬ್ರಹಾಮನು ಪರೀಕ್ಷಿಸಲ್ಪಟ್ಟಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ಆ ವಾಗ್ದಾನಗಳನ್ನು ಹೊಂದಿದ ಅವನು, “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು” ಎಂದು ದೇವರು ಅವನಿಗೆ ಹೇಳಿದ್ದರೂ ತನ್ನ ಏಕಪುತ್ರನನ್ನು ಅರ್ಪಿಸಿದನು.


ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.


ಸಿಂಹ ಮತ್ತು ಸರ್ಪಗಳ ಮೇಲೆ ನಡೆಯುವಿ; ಪ್ರಾಯದ ಸಿಂಹವನ್ನೂ, ಘಟಸರ್ಪವನ್ನೂ ತುಳಿದುಬಿಡುವಿ.


ಏಹೂದನು ಮರಣಹೊಂದಿದ ನಂತರ ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾಗಿದ್ದರು.


ಅವರು, “ನೀನು ನಮ್ಮನ್ನು ವಂಚಿಸಿ ಪೀಡಿಸಿದ್ದಾಗಲಿ, ನಮ್ಮಿಂದ ಏನಾದರೂ ಕಸಿದುಕೊಂಡದ್ದಾಗಲಿ ಇರುವುದಿಲ್ಲ” ಎಂದು ಉತ್ತರ ಕೊಟ್ಟರು.


ದಾವೀದನು ಇಸ್ರಾಯೇಲ್ಯರ ಅರಸನಾಗಿ, ಎಲ್ಲಾ ಪ್ರಜೆಗಳನ್ನು ನೀತಿನ್ಯಾಯಗಳಿಂದ ನಡೆಸುತ್ತಾ ಬಂದನು.


ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ ಮತ್ತು ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಶೌರ್ಯವನ್ನು, ಪೌರುಷವನ್ನು ತೋರಿಸೋಣ. ಯೆಹೋವನು ತನ್ನ ಚಿತ್ತದಂತೆ ಮಾಡಲಿ” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.


ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.


ಆದರೂ ಒಬ್ಬನು; “ನಿನಗೆ ನಂಬಿಕೆಯುಂಟು ಮತ್ತು ನನಗೆ ಕ್ರಿಯೆಗಳುಂಟು” ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ತೋರಿಸು. ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ತೋರಿಸುತ್ತೇನೆ ಎಂದು ಹೇಳುವನಲ್ಲವೇ.


ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವುದನ್ನು ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು