Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಬೆಂಕಿಯ ಶಕ್ತಿಯನ್ನು ನಂದಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ದುರ್ಬಲರಾಗಿದ್ದು ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರದೇಶದವರ ಸೈನ್ಯಗಳನ್ನು ಓಡಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅಗ್ನಿಜ್ವಾಲೆಯನ್ನು ಆರಿಸಿದರು; ಖಡ್ಗದ ಬಾಯಿಂದ ತಪ್ಪಿಸಿಕೊಂಡರು; ಬಲಹೀನರಾಗಿದ್ದರೂ ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಶತ್ರುಗಳ ಸೈನ್ಯವನ್ನು ಸದೆಬಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಸಿಂಹಗಳ ಬಾಯಿ ಕಟ್ಟಿದರು; ಬೆಂಕಿಯ ಬಲವನ್ನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಕೆಲವರು ಉರಿಯುವ ಬೆಂಕಿಯನ್ನು ನಂದಿಸಿದರು; ಇನ್ನು ಕೆಲವರು ಕತ್ತಿಗಳ ಬಾಯಿಂದ ಪಾರಾದರು; ದುರ್ಬಲರಾಗಿದ್ದವರು ತಮ್ಮ ನಂಬಿಕೆಯಿಂದ ಪ್ರಬಲರಾದರು; ಯುದ್ಧದಲ್ಲಿ ಶಕ್ತಿಶಾಲಿಗಳಾಗಿ ಶತ್ರುಗಳನ್ನು ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಬೆಂಕಿಯ ಶಕ್ತಿಯನ್ನು ಆರಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ಬಲಹೀನತೆಯಿಂದ ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರರ ಸೈನ್ಯಗಳನ್ನು ಓಡಿಸಿಬಿಟ್ಟರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಆಗಿಚಿ ಬಳ್ ಇಜ್ವುಲ್ಯಾನಿ, ಕೊಯ್ತ್ಯಾಚ್ಯಾ ತೊಂಡಾಕ್ ಚುಕ್ವುನ್ ಘೆಟ್ಲ್ಯಾನಿ, ಬಳ್ ನಸಲ್ಲೆ ಹೊವ್ನ್ ಬಳ್ ಹೊತ್ತೆ, ಖರೆ ಬಳಾಚೆ ಹೊಲ್ಯಾನಿ ಲಡಾಯಿತ್ ಜಿಕ್ಲ್ಯಾನಿ ಅನಿ ದುಸ್ರ್ಯಾಂಚ್ಯಾ ಸೈನಿಕಾಕ್ನಿ ಪಳ್ಸುನ್ ಘಾಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:34
36 ತಿಳಿವುಗಳ ಹೋಲಿಕೆ  

ಅವರ ತೊಡೆ, ಸೊಂಟಗಳನ್ನು ಮುರಿದು, ಅವರನ್ನು ಸಂಹರಿಸಿ, ತಾನು ಹೋಗಿ ಏಟಾಮ್ ಗಿರಿಯ ಗುಹೆಯಲ್ಲಿ ವಾಸಮಾಡಿದನು.


ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.


ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.


ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿ ಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನ ಒಡೆಯನ ಕಾಲಿನ ಸಪ್ಪಳವು ಕೇಳಿಸುತ್ತಿದೆಯಲ್ಲಾ” ಎಂದು ಹೇಳಿದನು.


ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣ ರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು.


ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.


ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು.


ಮನುಷ್ಯರು ನಮ್ಮ ತಲೆಗಳ ಮೇಲೆಯೇ, ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ. ನಾವು ಬೆಂಕಿಯನ್ನೂ, ನೀರನ್ನೂ ದಾಟಬೇಕಾಯಿತು; ಆದರೂ ಸುಸ್ಥಿತಿಗೆ ನಮ್ಮನ್ನು ನಡೆಸಿದಿ.


ಧರ್ಮವನ್ನು ಮೀರಿ ನಡೆಯುವವರೇ, ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ; ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.


ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಬಳಿಕ ಯೆಹೋವನು ಅವನ ದುಸ್ಥಿತಿಯನ್ನು ಹೋಗಲಾಡಿಸಿ, ಅವನ ಸೊತ್ತನ್ನು ಮೊದಲಿಗಿಂತ ಎರಡರಷ್ಟಾಗಿ ಹೆಚ್ಚಿಸಿದನು.


ಬರಗಾಲದಲ್ಲಿ ಮರಣದಿಂದಲೂ, ಯುದ್ಧದಲ್ಲಿ ಕತ್ತಿಯಿಂದಲೂ ನಿನ್ನನ್ನು ಬಿಡಿಸುವನು.


ದಾವೀದನು ರಾಮದ ನಯೋತಿನಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದು ಅವನಿಗೆ, “ನಿನ್ನ ತಂದೆಯು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲ, ನಾನೇನು ಮಾಡಿದೆನು? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹವು ಯಾವುದು?” ಎನ್ನಲು,


ತನ್ನ ಇನ್ನೊಬ್ಬ ಮಗನಿಗೆ ಮೋಶೆಯು, “ನನ್ನ ತಂದೆಯ ದೇವರು ನನಗೆ ಸಹಾಯಕನಾಗಿದ್ದು ನನ್ನನ್ನು ಫರೋಹನ ಕತ್ತಿಗೆ ತಪ್ಪಿಸಿ ಕಾಪಾಡಿದನು” ಎಂದು ಹೇಳಿ, ಆ ಮಗನಿಗೆ “ಎಲೀಯೆಜೆರ್” ಎಂದು ಹೆಸರಿಟ್ಟನು.


ಆಗ ಸೌಲನು ದಾವೀದನನ್ನು ಗೋಡೆಗೆ ಸೇರಿಕೊಳ್ಳುವ ಹಾಗೆ ತಿವಿಯುವೆನು ಎಂದುಕೊಂಡು ಈಟಿಯನ್ನು ಎಸೆದನು. ದಾವೀದನು ಎರಡು ಸಾರಿ ತಪ್ಪಿಸಿಕೊಂಡನು.


ಅವನು ಒಡನೆ ಕಿನ್ನರಿಯನ್ನು ನುಡಿಸುತ್ತಿದ್ದ ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವಂತೆ ತಿವಿಯಬೇಕೆಂದು ತನ್ನ ಈಟಿಯನ್ನು ಎಸೆದನು. ಆದರೆ ದಾವೀದನು ಪಕ್ಕನೆ ಸೌಲನೆದುರಿನಿಂದ ಸರಿದುಕೊಂಡ ಕಾರಣ, ಅದು ಗೋಡೆಯೊಳಗೆ ನಾಟಿತು. ದಾವೀದನು ಆ ರಾತ್ರಿಯಲ್ಲೇ ತಪ್ಪಿಸಿಕೊಂಡು ಓಡಿಹೋದನು.


ಎಲೀಯನು ಬಾಳನ ಎಲ್ಲಾ ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದನ್ನೂ ಮತ್ತು ಅವನು ಮಾಡಿದ ಬೇರೆ ಎಲ್ಲಾ ಕಾರ್ಯಗಳನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದನು.


ಒಂದು ದಿನ ಪ್ರವಾದಿಮಂಡಳಿಯವರು ಎಲೀಷನಿಗೆ, “ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರುವ ಈ ಸ್ಥಳವು ಬಹಳ ಇಕ್ಕಟ್ಟಾಗಿದೆ.


ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು.


ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು