ಇಬ್ರಿಯರಿಗೆ 11:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅಬ್ರಹಾಮನು ದೇವರ ಕರೆಗೆ ಓಗೊಡುವುದಕ್ಕೂ ವಿಶ್ವಾಸವೇ ಕಾರಣವಾಗಿತ್ತು. ಆತನು ಆ ಕರೆಗನುಸಾರವಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ನಾಡಿಗೆ ಹೊರಟನು. ತಾನು ಸೇರಬೇಕಾಗಿದ್ದ ಸ್ಥಳ ಯಾವುದೆಂದು ತಿಳಿಯದಿದ್ದರೂ ಸ್ವದೇಶವನ್ನು ಬಿಟ್ಟು ತೆರಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟ ಕೂಡಲೆ ಕರೆದಾತನ ಮಾತನ್ನು ಕೇಳಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದೇವರು ತಾನು ಕೊಡುತ್ತೇನೆಂದು ವಾಗ್ದಾನ ಮಾಡಿದ್ದ ಸ್ಥಳಕ್ಕೆ ಪ್ರಯಾಣ ಮಾಡಬೇಕೆಂದು ಅಬ್ರಹಾಮನನ್ನು ಕರೆದನು. ಆ ಸ್ಥಳವು ಎಲ್ಲಿದೆಯೆಂಬುದು ಅವನಿಗೆ ತಿಳಿದಿರಲಿಲ್ಲ. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ, ದೇವರಿಗೆ ವಿಧೇಯನಾಗಿ ಪ್ರಯಾಣ ಮಾಡಲಾರಂಭಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಂಬಿಕೆಯಿಂದಲೇ ಅಬ್ರಹಾಮನು ಕರೆಕೊಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಅಬ್ರಾಹಾಮಾನ್ ವಿಶ್ವಾಸಾನುಚ್ ದೆವಾನ್ ಬಲ್ವಲ್ಲ್ಯಾ ತನ್ನಾ ತೆಜಿ ಗೊಸ್ಟ್ ಆಯ್ಕುನ್ ಅಪ್ನಿ ಘೆವ್ಚೆ ಹೊಲ್ಲ್ಯಾ ಜಾಗ್ಯಾರ್ ಗೆಲೊ, ಅಪ್ನಿ ಜಾವ್ಚೊ ಹೊಲ್ಲೊ ಜಾಗೊ ಖೈಯ್ ಹಾಯ್ ಮನುನ್ ಗೊತ್ತ್ ನಸ್ಲ್ಯಾರ್ಬಿ ತೊ ಜಾವ್ಕ್ ಲಾಗ್ಲೊ. ಅಧ್ಯಾಯವನ್ನು ನೋಡಿ |
ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನಿಮ್ಮ ಸದಾಚಾರವಾಗಲಿ, ನಿಮ್ಮ ಒಳ್ಳೆಯ ಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.