Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಮ್ಮ ಲೌಕಿಕ ತಂದೆಗಳು ಮನಸ್ಸಿಗೆ ಸರಿದೋರಿದಂತೆ ಕೆಲವು ಕಾಲ ಮಾತ್ರ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತನ್ನ ಪರಿಶುದ್ಧತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಲೌಕಿಕ ತಂದೆಯಾದವರು ತಮ್ಮ ಮನಸ್ಸಿಗೆ ಸರಿದೋರಿದಂತೆ ನಮ್ಮನ್ನು ಶಿಕ್ಷಿಸುತ್ತಾರೆ. ಅದು ಕೊಂಚಕಾಲಕ್ಕೆ ಮಾತ್ರ ಪರಿಣಾಮಕರವಾಗಿರುತ್ತದೆ. ದೇವರಾದರೋ ನಾವು ಅವರ ಪರಿಶುದ್ಧತೆಯಲ್ಲೇ ಭಾಗಿಗಳಾಗುವಂತೆ ನಮ್ಮ ಹಿತಕ್ಕೋಸ್ಕರ ಶಿಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆ ತಂದೆಗಳು ಕೆಲವು ದಿವಸಗಳ ಪ್ರಯೋಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಈ ಲೋಕದ ನಮ್ಮ ತಂದೆಗಳು ನಮ್ಮನ್ನು ಸ್ವಲ್ಪಕಾಲ ದಂಡಿಸಿದರು. ಅವರು ತಮಗೆ ಉತ್ತಮವೆಂದು ತೋರಿದ ರೀತಿಯಲ್ಲಿ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ನಮಗೆ ಸಹಾಯ ಮಾಡಲು ನಮ್ಮನ್ನು ಶಿಕ್ಷಿಸುತ್ತಾನೆ. ಏಕೆಂದರೆ ನಾವೂ ಆತನಂತೆ ಪರಿಶುದ್ಧರಾಗಬೇಕೆಂಬುದೇ ಆತನ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಮ್ಮ ತಂದೆಯಾದವರು ತಮಗೆ ಒಳ್ಳೆಯದೆಂದು ತಿಳಿದಾಗ, ಸ್ವಲ್ಪಕಾಲ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತಮ್ಮ ಪವಿತ್ರತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಒಳ್ಳೆಯದಕ್ಕಾಗಿಯೇ ಶಿಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಮ್ಚ್ಯಾ ಹ್ಯಾ ಜಗಾಚ್ಯಾ ಬಾಬಾನಿ ಉಲ್ಲ್ಯಾ ದಿಸಾಂಚ್ಯಾ ಜಿವನಾತ್ ಅಪ್ನಾಕ್ ಬರೆ ದಿಸ್ತಾ ತಸಿ ಶಿಕ್ಷಾ ಲಾವಲ್ಲ್ಯಾನಿ, ಖರೆ ದೆವ್ ಅಪ್ಲ್ಯಾ ಪವಿತ್ರ್ ಪಾನಾತ್ ಅಮ್ಕಾ ಭಾಗ್ ಘೆಯ್ ಸಾರ್ಕೆ ಕರುಕ್ ಸಾಟ್ನಿ ಮನುನ್ ಅಮ್ಚ್ಯಾಚ್ ಬರ್ಯ್ಯಾಸಾಟ್ನಿ ಅಮ್ಕಾ ಶಿಕ್ಷಾಕ್ ಲಾವ್ನ್ ಸಮಾ ವಾಟೆಕ್ ಹಾನ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:10
17 ತಿಳಿವುಗಳ ಹೋಲಿಕೆ  

ನೀವು ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


“ನೀನು ಇಸ್ರಾಯೇಲರ ಸಮೂಹದವರಿಗೆ ಹೀಗೆ ಆಜ್ಞಾಪಿಸಬೇಕು, ‘ನಿಮ್ಮ ದೇವರಾದ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.


ಈಗಲಾದರೋ ದೇವರು ನಿಮ್ಮನ್ನು ಯೇಸುಕ್ರಿಸ್ತನ ಶಾರೀರಿಕ ಮರಣದ ಮೂಲಕವಾಗಿ ಸಂಧಾನಪಡಿಸಿಕೊಂಡಿದ್ದಾನೆ. ದೇವರು ತನ್ನ ಸನ್ನಿಧಿಯಲ್ಲಿ ನಿಮ್ಮನ್ನು ಪರಿಶುದ್ಧರನ್ನಾಗಿಯೂ, ನಿರ್ದೋಷಿಗಳನ್ನಾಗಿಯೂ, ನಿರಪರಾಧಿಗಳನ್ನಾಗಿಯೂ ನಿಲ್ಲಿಸಬೇಕೆಂದು ಹೀಗೆ ಮಾಡಿದ್ದಾನೆ.


ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.


ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. ನಾನು ಎಚ್ಚತ್ತಾಗ ನಿನ್ನ ನೀತಿಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.


ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ, ನೀನು ನಂಬಿಗಸ್ತಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ.


ನರಜನ್ಮದವರನ್ನು ಬಾಧಿಸಿ, ವ್ಯಥೆಗೊಳಿಸುವುದು ಆತನಿಗೆ ಇಷ್ಟವಿಲ್ಲ.


ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.


ನವೊಮಿಯ ಗಂಡನಾದ ಎಲೀಮೆಲೆಕನು ಮರಣ ಹೊಂದಿದನು. ಆಕೆಯು ಇಬ್ಬರು ಮಕ್ಕಳೊಡನೆ ಅಲ್ಲಿಯೇ ಉಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು