Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರವಾಗಿ ತೋರದೆ, ದುಃಖಕರವಾಗಿ ತೋರುತ್ತದೆ. ಆದರೆ ಶಿಸ್ತಿನ ಅಭ್ಯಾಸವನ್ನು ಹೊಂದಿದವರು, ಮುಂದೆ ಸಮಾಧಾನವುಳ್ಳ ನೀತಿಯ ಫಲವನ್ನು ಪಡೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯಾವ ಶಿಕ್ಷೆಯಾದರೂ ತಕ್ಷಣಕ್ಕೆ ಸಿಹಿಯಾಗಿರದೆ ಕಹಿಯಾಗಿಯೇ ಇರುತ್ತದೆ. ಹೀಗೆ ಶಿಸ್ತಿನ ಕ್ರಮಕ್ಕೆ ಒಳಗಾದವರು ಮುಂದಕ್ಕೆ ನ್ಯಾಯನೀತಿಯನ್ನೂ ಶಾಂತಿಸಮಾಧಾನವನ್ನೂ ಪ್ರತಿಫಲವಾಗಿ ಪಡೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರವಾಗಿ ತೋಚದೆ ದುಃಖಕರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ನೀತಿಯೆಂಬ ಫಲವನ್ನು ಕೊಟ್ಟು ಮನಸ್ಸಿಗೆ ಸಮಾಧಾನವನ್ನು ಉಂಟುಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯಾವುದೇ ದಂಡನೆಯಾಗಲಿ ತತ್ಕಾಲಕ್ಕೆ ಸಂತೋಷಕರವಾಗಿರದೆ ದುಃಖಕರವಾಗಿರುತ್ತದೆ. ಆದರೆ ಆ ತರುವಾಯ ದಂಡನೆಯಿಂದ ನಾವು ಕಲಿತುಕೊಂಡು ಯೋಗ್ಯವಾದ ಜೀವಿತವನ್ನು ಆರಂಭಿಸುವುದರ ಮೂಲಕ ನಮಗೆ ಸಮಾಧಾನ ಉಂಟಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯಾವ ಶಿಕ್ಷೆಯಾದರೂ ಆ ಸಮಯಕ್ಕೆ ಸಂತೋಷಕರವಾಗಿ ತೋಚದೆ, ದುಃಖಕರವಾಗಿ ತೋಚುತ್ತದೆ. ತರುವಾಯ, ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನವುಳ್ಳ ನೀತಿಯ ಫಲವನ್ನು ಕೊಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಶಿಕ್ಷಾ ದಿಲ್ಯಾ ಯೆಳಾರ್ ತಿ ದುಖಾಕ್ ಕಾರನ್ ಹೊತಾ, ಶಿವಾಯ್ ಕುಶಿಕ್ ಕಾರನ್ ಹೊಯ್ನಾ, ಖರೆ ಮಾನಾ ಶಿಸ್ತಿನ್ ಶಿಕುನ್ ಹೊಲ್ಯಾಕ್ನಿ ತಿ ಶಿಕ್ಷಾ ಸಮಾಧಾನಾಚೆ ಅನಿ ನಿತಿಚೆ ಬರೆ ಫಳ್ ಖಮ್ವುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:11
20 ತಿಳಿವುಗಳ ಹೋಲಿಕೆ  

ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ.


ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ.


ನಮ್ಮ ಲೌಕಿಕ ತಂದೆಗಳು ಮನಸ್ಸಿಗೆ ಸರಿದೋರಿದಂತೆ ಕೆಲವು ಕಾಲ ಮಾತ್ರ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತನ್ನ ಪರಿಶುದ್ಧತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ.


ಯೆಹೋವನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಆದರೆ ಮರಣಕ್ಕೆ ಒಪ್ಪಿಸಲಿಲ್ಲ.


ನೀತಿಯ ಪರಿಣಾಮ ಶಾಂತಿ; ನೀತಿಯ ಫಲವು, ನಿತ್ಯವಾದ ಸಮಾಧಾನ ಮತ್ತು ನಿತ್ಯವಾದ ಭರವಸೆ ಆಗಿರುವವು.


ಬುದ್ಧಿ ಬರುವುದೆಂಬ ನಿರೀಕ್ಷೆಯಿಂದ ಮಗನನ್ನು ಶಿಕ್ಷಿಸು, ಹಾಳುಮಾಡಲು ಮನಸ್ಸು ಮಾಡಬೇಡ,


ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ, ಸಂಪೂರ್ಣ ಸಮಾಧಾನವಿರುತ್ತದೆ, ಅಂಥವರಿಗೆ ವಿಘ್ನಕರವಾದದ್ದೇನೂ ಇರುವುದಿಲ್ಲ.


ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ, ಗದರಿಕೆಯನ್ನು ಕೇಳದವನಿಗೆ ಸಾವು.


ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೋಸ್ಕರ, ಅಂದರೆ ತಪ್ಪು ಮತ್ತು ಸರಿಯಾದ್ದದನ್ನು ಗುರುತಿಸಲು, ಅಭ್ಯಾಸದ ಮೂಲಕ ನೈಪುಣ್ಯತೆಯನ್ನು ಹೊಂದಿದವರಿಗೋಸ್ಕರವಾಗಿದೆ.


ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.


ಆಗ ನಾನು ಅವರ ದ್ರೋಹಕ್ಕಾಗಿ ಅವರನ್ನು ಬೆತ್ತದಿಂದ ಹೊಡೆಯುವೆನು; ಅವರ ಅಪರಾಧಕ್ಕಾಗಿ ಪೆಟ್ಟುಕೊಡುವೆನು.


ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.


ಇದಲ್ಲದೆ ಯೆಹೋವನು ಐಗುಪ್ತವನ್ನು ಹೊಡೆಯುವನು. ಗಾಯಮಾಡಿ ವಾಸಿಮಾಡುವವನಾಗಿಯೇ ಹೊಡೆಯುವನು. ಅವರು ಯೆಹೋವನ ಕಡೆಗೆ ತಿರುಗಿಕೊಳ್ಳುವರು. ಆತನು ಅವರ ವಿಜ್ಞಾಪನೆಯನ್ನು ಲಾಲಿಸಿ ಅವರನ್ನು ಗುಣಪಡಿಸುವನು.


ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.


ಮಗನ ಬಗ್ಗೆ ಆಡಿದ ಈ ಮಾತು ಅಬ್ರಹಾಮನಿಗೆ ಬಹು ದುಃಖವುಂಟುಮಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು