Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದುದ್ದರಿಂದ ಜೋಲುಬಿದ್ದ ಕೈಗಳನ್ನೂ ಮತ್ತು ನಡುಗುವ ಮೊಣಕಾಲುಗಳನ್ನೂ ಬಲಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದ್ದರಿಂದ, ಜೋತುಬೀಳುವ ನಿಮ್ಮ ಕೈಗಳನ್ನು ಮೇಲೆತ್ತಿ, ಕುಸಿದುಬೀಳುವ ನಿಮ್ಮ ಮೊಣಕಾಲುಗಳನ್ನು ಚೇತರಿಸಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದದರಿಂದ ಜೋಲುಬಿದ್ದ ಕೈಗಳನ್ನೂ ನಡುಗುವ ಮೊಣಕಾಲುಗಳನ್ನೂ ಸುಧಾರಿಸಿಕೊಳ್ಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀವು ದುರ್ಬಲರಾಗಿದ್ದೀರಿ. ಆದ್ದರಿಂದ ನಿಮ್ಮನ್ನು ಮತ್ತೆ ಬಲಪಡಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ, ಜೋತು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ಬಲಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತೆಚ್ಯಾ ಸಾಟ್ನಿ, ತುಮಿ ವಳುನ್ ಯೆಲ್ಲಿ ತುಮ್ಚಿ ಹಾತಾ ವೈರ್ ಕರುನ್ ಥರ್ ಥರ್ ಕಾಪುಲಾಗಲ್ಲಿ ತುಮ್ಚಿ ಡೊಗ್ಲಾ ಘಟ್ ಸಂಬಾಳಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:12
11 ತಿಳಿವುಗಳ ಹೋಲಿಕೆ  

ಜೋಲುಬಿದ್ದ ಕೈಗಳನ್ನೂ, ನಡುಗುವ ಮೊಣಕಾಲುಗಳನ್ನೂ ಬಲಗೊಳಿಸಿರಿ.


ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಯೇಸುವನ್ನು ಕುರಿತು ಯೋಚಿಸಿರಿ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳಲು ನೀನು ಅವರಿಗೆ, ‘ಕೆಟ್ಟ ವಾರ್ತೆಯ ನಿಮಿತ್ತ ನರಳುತ್ತೇನೆ; ಇಗೋ, ವಿಪತ್ತು ಬಂತು; ಎಲ್ಲರ ಹೃದಯವು ಕರಗಿ ನೀರಾಗುವುದು; ಎಲ್ಲರ ಕೈ ಜೋಲು ಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಚಂಚಲವಾಗುವುದು; ಇಗೋ, ಬಂದಿತು, ಬಂದಾಯಿತು’ ಇದು ಕರ್ತನಾದ ಯೆಹೋವನ ನುಡಿ ಎಂದು ಉತ್ತರಕೊಡು.”


ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನು ಮರೆತುಬಿಟ್ಟಿದ್ದೀರೋ? ಅದೇನೆಂದರೆ, “ನನ್ನ ಮಗನೇ, ಕರ್ತನ ಶಿಕ್ಷೆಯನ್ನು ಕಡೆಗಣಿಸಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.”


ಎಲ್ಲರ ಕೈಗಳು ಜೋಲುಬಿದ್ದಿರುವುವು, ಎಲ್ಲರ ಮೊಣಕಾಲುಗಳು ನೀರಿನಂತೆ ಅದರುವುವು.


ನಿನವೆಯು ಬರಿದಾಗಿದೆ, ಬಟ್ಟಬರಿದಾಗಿ ಬೀಳುಬಿದ್ದಿದೆ; ಎದೆಯು ಕರಗಿ ನೀರಾಗಿ ಹೋಗಿದೆ, ಮೊಣಕಾಲುಗಳು ಅದರುತ್ತವೆ, ಎಲ್ಲರ ಸೊಂಟಗಳಿಗೂ ವೇದನೆಯಾಗಿದೆ, ಎಲ್ಲರ ಮುಖಗಳೂ ಬಾಡಿವೆ.


ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲವಾಯಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.


ಉಪವಾಸದಿಂದ ನನ್ನ ಮೊಣಕಾಲುಗಳು ಬಲಹೀನವಾದವು; ನನ್ನ ದೇಹವು ಎಣ್ಣೆಯಿಲ್ಲದೆ ಕ್ಷೀಣವಾಯಿತು.


ಆ ದಿನದಲ್ಲಿ ಯೆರೂಸಲೇಮಿಗೆ, “ಚೀಯೋನೇ, ಭಯಪಡಬೇಡ, ನಿನ್ನ ಕೈಗಳು ಜೋಲುಬೀಳದಿರಲಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು