ಇಬ್ರಿಯರಿಗೆ 12:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918-19 ನೀವು ಮುಟ್ಟಬಹುದಾದ ಮತ್ತು ಬೆಂಕಿ ಹೊತ್ತಿದಂಥ ಬೆಟ್ಟಕ್ಕೂ, ಕಾರ್ಮೋಡ, ಕಗ್ಗತ್ತಲೆ, ಬಿರುಗಾಳಿ, ತುತ್ತೂರಿಯ ಶಬ್ದ, ಮಾತುಗಳ ಧ್ವನಿ ಎಂಬಿವುಗಳ ಬಳಿಗಲ್ಲ ನೀವು ಬಂದಿರುವುದು. ಆ ಧ್ವನಿಯನ್ನು ಕೇಳಿದವರು ಇನ್ನೆಂದಿಗೂ ಆ ಧ್ವನಿ ತಮ್ಮೊಂದಿಗೆ ಮಾತನಾಡುವುದೇ ಬೇಡವೆಂದು ಕೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನೀವು ಇಸ್ರಯೇಲರಂತೆ ಮುಟ್ಟಬಹುದಾದ ಸೀನಾಯ್ ಬೆಟ್ಟಕ್ಕೆ ಬಂದಿಲ್ಲ. ಅಲ್ಲಿ ಬೆಂಕಿ ಧಗಧಗಿಸುತ್ತಿತ್ತು. ಕಾರ್ಗತ್ತಲು ಕವಿದಿತ್ತು; ಮೋಡದ ಮಬ್ಬು ಮುಸುಕಿತ್ತು; ಬಿರುಗಾಳಿ ಬೀಸುತ್ತಿತ್ತು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನೀವು ಮುಟ್ಟುವದಕ್ಕೆ ಸಾಧ್ಯವಾದಂಥ ಮತ್ತು ಬೆಂಕಿಹತ್ತಿದಂಥ ಬೆಟ್ಟಕ್ಕೂ ಮೋಡದ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನೀವು ಒಂದು ಹೊಸ ಸ್ಥಳಕ್ಕೆ ಬಂದಿರುವಿರಿ. ಅದು ಇಸ್ರೇಲಿನ ಜನರು ಬಂದ ಬೆಟ್ಟದ ಸ್ಥಳವಲ್ಲ. ಮುಟ್ಟುವುದಕ್ಕೆ ಸಾಧ್ಯವಾಗುವಂತಹ ಮತ್ತು ಬೆಂಕಿ ಹತ್ತಿಕೊಂಡಿರುವಂತಹ ಬೆಟ್ಟದ ಬಳಿಗೆ ನೀವು ಬಂದಿಲ್ಲ. ನೀವು ಕಗ್ಗತ್ತಲೆ, ದುಃಖ ಮತ್ತು ಬಿರಗಾಳಿಯ ಬಳಿಗೆ ಬಂದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನೀವು ಮುಟ್ಟಬಹುದಾದ ಮತ್ತು ಬೆಂಕಿಹತ್ತಿದಂಥ ಬೆಟ್ಟಕ್ಕೂ ಮಬ್ಬಿಗೂ ಕತ್ತಲೆಗೂ ಬಿರುಗಾಳಿಗೂ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತುಮಿ ನ್ಹವ್ಯಾ ಜಾಗ್ಯಾರ್ ಯೆಲ್ಲ್ಯಾಸಿ, ತೊ ಇಸ್ರಾಯೆಲಾಚಿ ಲೊಕಾ ಯೆಲ್ಲೊ ಮಡ್ಡಿಚೊ ಜಾಗೊ ನ್ಹಯ್ ಅಪ್ಡುಕ್ ಹೊಯ್ ನಸಲ್ಲ್ಯಾ ಆಗ್ ಲಾಗುನ್ ಹೊತ್ತ್ಯಾ ಮಡಿಚ್ಯಾ ಜಾಗ್ಯಾರ್ ಯೆವ್ಕ್ ನ್ಯಾಸಿ ತುಮಿ ಮೊಟೊ ಕಾಳೊಕ್ ,ಕಾಳೊ ಮೊಡ್ , ಅನಿ ಮೊಟ್ಯಾ ವಾರಾಚ್ಯಾ ಜಗೊಳ್ ಯೆವ್ಕ್ ನ್ಯಾಸಿ. ಅಧ್ಯಾಯವನ್ನು ನೋಡಿ |