Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇದಲ್ಲದೆ ಆ ದೃಶ್ಯವು ಅತಿ ಭಯಾನಕವಾಗಿದ್ದದರಿಂದ ಮೋಶೆಯು, “ನಾನು ಹೆದರಿ, ನಡುಗುತ್ತಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆ ನೋಟ ಎಷ್ಟು ಭಯಂಕರವಾಗಿತ್ತೆಂದರೆ, ಮೋಶೆ ಕೂಡ, “ನಾನು ಭಯದಿಂದ ನಡುಗುತ್ತಿದ್ದೇನೆ,” ಎಂದು ಹೇಳುವಂತಾಯಿತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇದಲ್ಲದೆ ಅಲ್ಲಿ ತೋರಿದ್ದು ಅಷ್ಟು ಭಯಂಕರವಾಗಿದ್ದದರಿಂದ ಮೋಶೆಯು - ನನಗೆ ಬಹು ಭಯವಾಗುತ್ತದೆ, ನಡುಗುತ್ತೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆ ಜನರು ಅಂದು ಕಂಡದ್ದು ಭಯಂಕರವಾಗಿದ್ದುದರಿಂದ ಮೋಶೆಯು, “ನಾನು ಭಯದಿಂದ ನಡುಗುತ್ತಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇದಲ್ಲದೆ ಆ ದೃಶ್ಯವು ಎಷ್ಟೋ ಭಯಂಕರವಾದದ್ದರಿಂದ ಮೋಶೆಯು, “ನಾನು ಭಯದಿಂದಲೂ ನಡುಕದಿಂದಲೂ ತುಂಬಿದವನಾಗಿದ್ದೇನೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅನಿ ತೆ ದರ್ಶನ್ ಯೆವ್ಡೆ ಭಯಾನಕ್ ಹೊತ್ತೆ ಮಟ್ಲ್ಯಾರ್, ಮೊಯ್ಜೆನ್ ಮಿಯಾ ಭಿಂಯಾನ್ ಥರ್ ಥರುಲ್ಲಾ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:21
9 ತಿಳಿವುಗಳ ಹೋಲಿಕೆ  

ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಆ ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾರ್ಮುಗಿಲೂ, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು.


ಯೆಹೋವನು ನಿಮ್ಮ ಮೇಲೆ ಬಹುಕೋಪಗೊಂಡು ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದ್ದರಿಂದ ನಾನು ಹೆದರಿಕೊಂಡೆನು. ಆದರೆ ಆ ಸಮಯದಲ್ಲಿಯೂ ಆತನು ನನ್ನ ಮನವಿಯನ್ನು ಕೇಳಿದನು.


ತುತ್ತೂರಿಯ ಧ್ವನಿ ಹೆಚ್ಚಾಗುತ್ತಾ ಬಂದಾಗ, ಮೋಶೆಯು ದೇವರ ಸಂಗಡ ಮಾತನಾಡಿದನು. ಆಗ ದೇವರು ಎತ್ತರದ ಧ್ವನಿಯಲ್ಲಿ ಅವನಿಗೆ ಉತ್ತರಕೊಟ್ಟನು.


ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ, ನಾನು ಮೊದಲನೆಯವನೂ, ಕಡೆಯವನೂ,


ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ. ಆಯಿನ್.


ಎನ್ನೊಡೆಯನ ಸೇವಕನಾದ ನನ್ನಂಥವನು ಎನ್ನೊಡೆಯನಾದ ನಿನ್ನಂಥವನ ಸಂಗಡ ಹೇಗೆ ಮಾತನಾಡಬಹುದು? ಈಗಿನಿಂದ ಶಕ್ತಿಯನ್ನೆಲ್ಲಾ ಕಳಕೊಂಡವನಾಗಿದ್ದೇನೆ, ನನ್ನಲ್ಲಿ ಉಸಿರೇ ಇಲ್ಲ” ಎಂದು ಹೇಳಿದೆನು.


ನಾನು ಏಕಾಂಗಿಯಾಗಿ ಉಳಿದು ಆ ಅದ್ಭುತ ದರ್ಶನವನ್ನು ಕಂಡು ಶಕ್ತಿಯನ್ನೆಲ್ಲಾ ಕಳೆದುಕೊಂಡೆನು, ನನ್ನ ಗಾಂಭೀರ್ಯವು ಹಾಳಾಯಿತು, ನಾನು ನಿತ್ರಾಣನಾದೆನು.


ಬದಲಿಗೆ, ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು